ರಕ್ಷಣೆ ಕೊಟ್ರೆ ಆ 'ಮಾಜಿ ಸಿಎಂಗಳ' ಹನಿಟ್ರ್ಯಾಪ್ ಸಾಕ್ಷಿ ಕೊಡ್ತೀನಿ: ಸಂತ್ರಸ್ತೆ ಸವಾಲ್
ಇಲ್ಲಿವರೆಗೆ ಉದ್ಯಮಿಗಳು, ಅಧಿಕಾರಿಗಳು ಹಾಗೂ ಕೆಲ ರಾಜಕೀಯ ನಾಯಕರ ಹನಿಟ್ರ್ಯಾಪ್ ಬಗ್ಗೆ ಸದ್ದು ಕೇಳಿಬರುತ್ತಿದೆ. ಆದರೆ, ಈ ಹಿಂದೆ ಕರ್ನಾಟಕದ ಸಿಎಂ ಸ್ಥಾನದಲ್ಲಿದ್ದವರೂ ಈ ಹನಿಟ್ರ್ಯಾಪ್ ಬಲೆಯಲ್ಲಿ ಸಿಲುಕಿದ್ದರು ಎನ್ನುವ ವಿಚಾರ ಸದ್ಯ ರಾಜ್ಯ ರಾಜಕಾರಣವನ್ನು ತಲ್ಲಣಗೊಳಿಸಿದೆ.
ಬಿಜೆಪಿ ಶಾಸಕ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾದರು ಎನ್ನಲಾದ ಸಂತ್ರಸ್ತ ಮಹಿಳೆಯು ಇಂದು ಸುದ್ದಿಗೋಷ್ಠಿ ನಡೆಸಿ, ರಾಜ್ಯವೇ ಬೆಚ್ಚಿಬೀಳುವ ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.

ಮೊದಲಿಗೆ ಶಾಸಕ ಮುನಿರತ್ನ ಅವರು ಅತ್ಯಾಚಾರ ಎಸಗಿದ ಬಗ್ಗೆ ಆರೋಪ ಮಾಡಿದ್ದ ಮಹಿಳೆ, ಇಂದು ಮುನಿರತ್ನ ಅವರ ಹನಿಟ್ರ್ಯಾಪ್ ಜಾಲದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಕೂಡ ಸಿಲುಕಿದ್ದರು ಎನ್ನುವ ಶಾಕಿಂಗ್ ವಿಚಾರವನ್ನು ಹೇಳಿದ್ದಾರೆ.
ಮುನಿರತ್ನ ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿದ್ದರು. ಅವರನ್ನು ಅಶ್ಲೀಲ ವಿಡಿಯೋ ಮುಂದಿಟ್ಟುಕೊಂಡು ಬ್ಲಾಕ್‌ಮೇಲ್ ಕೂಡ ಮಾಡಿದ್ದರು. ಈ ಕಾರಣದಿಂದಲೇ ಶಾಸಕರಾಗಿದ್ದ ಅವರಿಗೆ ಸಚಿವ ಸ್ಥಾನ ಒಲಿದು ಬಂತು ಎಂದು ಮಹಿಳೆ ಆರೋಪಿದ್ದಾರೆ.

ಸರ್ಕಾರ ನನಗೆ ರಕ್ಷಣೆ ನೀಡುವುದೇ ಆದರೆ, ಮುನಿರತ್ನ ಅವರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿರುವ ಸಾಕ್ಷಿಗಳನ್ನು ಎಸ್‌ಐಟಿ ಅಧಿಕಾರಿಗಳ ಮುಂದೆ ಇಡುತ್ತೇನೆ ಎಂದು ಸವಾಲು ಕೂಡ ಹಾಕಿದ್ದಾರೆ.
ಹನಿಟ್ರ್ಯಾಪ್‌ಗೆ ಕೇವಲ ನನ್ನ ಮಾತ್ರ ಅಲ್ಲ. ಇನ್ನೂ ಐದಾರು ಮಂದಿ ಮಹಿಳೆಯರನ್ನು ಬಳಸಿಕೊಳ್ಳಲಾಗಿದೆ. ಮುನಿರತ್ನ ಅವರ ಹನಿಟ್ರ್ಯಾಪ್ ಜಾಲದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಮಾಜಿ ಸಚಿವರು, ಶಾಸಕರು ಹಲವರು ಸಿಲುಕಿದ್ದಾರೆ. ಈ ಕೃತ್ಯಕ್ಕಾಗಿ ನನ್ನನ್ನೂ ಸೇರಿದಂತೆ ಹಲವು ಮಹಿಳೆಯರನ್ನು ದಾಳವಾಗಿ ಬಳಸಿಕೊಂಡಿದ್ದಾರೆ.
ನನ್ನಂತೆ ಹಲವು ಸಂತ್ರಸ್ತೆಯರಿದ್ದಾರೆ. ಇವರಲ್ಲಿ ಕೆಲವರಿಗೆ ಎಚ್‌ಐವಿ ಕೂಡ ಇದೆ. ಇಂತಹ ಮಹಿಳೆಯರನ್ನು ಬಳಸಿಕೊಂಡೇ ಮುನಿರತ್ನ ಬಿಬಿಎಂಪಿ ಮಾಜಿ ಸದಸ್ಯೆಯೊಬ್ಬರ ಪತಿಯ ಹನಿಟ್ರ್ಯಾಪ್ ಮಾಡಿಸಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಹನಿಟ್ರ್ಯಾಪ್‌ಗಾಗಿ ಮುನಿರತ್ನ ಸ್ಪೆಷಲ್ ಕ್ಯಾಮೆರಾಗಳನ್ನು ಬಳಸುತ್ತಿದ್ದರು. ಅಶ್ಲೀಲ ವಿಡಿಯೋಗಳ ಚಿತ್ರೀಕರಣಕ್ಕೆ ಅವರ ಬಳಿ ಇದ್ದ ಮೊಬೈಲ್‌ಗಳನ್ನೇ ನೀಡುತ್ತಿದ್ದರು. ಇದರ ಸಹಾಯದಿಂದ ಮಹಿಳೆಯರು ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಬಳಿಕ ಅವುಗಳನ್ನು ಮುನಿರತ್ನ ಅವರ ಆಪ್ತ ಸುಧಾಕರ್ ಹಾಗೂ ರಾಮಚಂದ್ರ ನಾಯ್ಡು ನೋಡಿಕೊಳ್ಳುತ್ತಿದ್ದರು. ಇವರ ಕಣ್ಣು ತಪ್ಪಿಸಿ ಕೆಲವು ವಿಡಿಯೋಗಳನ್ನು ನಾನು ನನ್ನ ಪರ್ಸನಲ್ ಫೋನ್‌ಗೆ ಶೇರ್ ಮಾಡಿಕೊಂಡಿದ್ದೆ ಎಂದು ಸಂತ್ರಸ್ತೆ ಹೇಳಿದ್ದಾರೆ.
ಮುನಿರತ್ನ ನಾಲ್ಕು ವರ್ಷಗಳ ಹಿಂದೆ ಕೋವಿಡ್ ಸಂದರ್ಭದಲ್ಲಿ ಪರಿಚಯವಾಗಿದ್ದರು. ನನ್ನ ಮೊಬೈಲ್ ನಂಬರ್ ಪಡೆದು ವಿಡಿಯೋ ಕಾಲ್ ಮಾಡುತ್ತಿದ್ದರು. ಬಳಿಕ ನನಗೆ ಬೆದರಿಕೆ ಹಾಕಿ ಹಲವು ಸಲ ಅತ್ಯಾಚಾರ ಮಾಡಿದರು. ಇದನ್ನು ವಿಡಿಯೋ ಕೂಡ ಮಾಡಿಕೊಂಡರು. ಅದನ್ನೇ ಮುಂದಿಟ್ಟುಕೊಂಡು ನನಗೆ ಬ್ಲಾಕ್‌ಮೇಲ್ ಮಾಡಿ, ಇಂತ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು ಎಂದು ದೂರಿದ್ದಾರೆ.
ಒಂದು ವೇಳೆ ಮುನಿರತ್ನ ಅವರು ಹೇಳಿದಂತೆ ಕೇಳದಿದ್ದರೆ ನನ್ನ ಪತಿ ಹಾಗೂ ಕುಟುಂಬಸ್ಥರನ್ನು ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದರು. ಈ ಕಾರಣಕ್ಕೆ ನಾನು ಸುಮ್ಮನಿದ್ದೆ. ಈಗ ಜೈಲಿನಲ್ಲಿರುವ ಅವರು ಜಾಮೀನು ಪಡೆದು ಹೊರಬಂದರೆ ನನಗೆ ಏನು ಮಾಡುತ್ತಾರೋ ಅನ್ನುವ ಭಯವಿದೆ. ಹಾಗಾಗಿ ಸರ್ಕಾರ ನನಗೆ ಸೂಕ್ತ ರಕ್ಷಣೆ ಕೊಟ್ಟರೆ, ಧೈರ್ಯವಾಗಿ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದೂ ಕೇಳಿಕೊಂಡಿದ್ದಾರೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications