BREAKING: ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ!

ಮಹಿಳೆ ಮೇಲಿನ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಇಂದು ವಿಚಾರಣೆ ನಡೆಸಿದ ಕೋರ್ಟ್‌, ಮುನಿರತ್ನ ಅವರನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜಾತಿನಿಂದನೆ, ಕೊಲೆ ಬೆದರಿಕೆ ಕೇಸ್‌ನಲ್ಲಿ ರಿಲೀಫ್‌ ಸಿಕ್ಕ ಬೆನ್ನಲ್ಲೇ ಮುನಿರತ್ನ ಅವರಿಗೆ ಮತ್ತೊಂದು ಕೇಸ್‌ ಇಕ್ಕಟ್ಟಿಗೆ ಸಿಲುಕಿಸಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರನ್ನು ಅಕ್ಟೋಬರ್‌ 5ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇಂದು ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ಮಾತನಾಡಿರುವ ಆರೋಪಿ ಮುನಿರತ್ನ, ʼನನ್ನನ್ನು ಜೈಲಿಗೆ ಕಳುಹಿಸಲೇಬೇಕು ಎಂದು ಕೆಲವರು ಈ ರೀತಿ ಷಡ್ಯಂತ್ರ ಮಾಡಿದ್ದಾರೆ. ನನ್ನ ಮೇಲೆ ಉದ್ದೇಶಪೂರ್ವಕವಾಗಿ ಈ ಕೃತ್ಯ ನಡೆಸಿದ್ದು, ನನ್ನ ಮೇಲೆ ಆರೋಪಗಳಿದ್ದರೆ ಮೊದಲೇ ದೂರು ಕೊಡಬಹುದಿತ್ತು. ಆದರೆ ಐದು ವರ್ಷಗಳ ನಂತರ ಮಹಿಳೆ ದೂರು ಕೊಟ್ಟಿದ್ದಾರೆʼ ಎಂದು ಹೇಳಿದ್ದಾರಂತೆ.

MLA Munirathna Has Been Remanded In Judicial Custody For 14 days

ʼನಾನು ಜನಪ್ರತಿನಿಧಿ, ಜನರೊಂದಿಗೆ ಹೇಗೆ ವರ್ತಿಸಬೇಕು ಎಂಬುದು ಗೊತ್ತಿದೆʼ ಎಂದು ಮುನಿರತ್ನ ಹೇಳಿದ್ದಾರೆ. ಕೋರ್ಟ್‌ ಪ್ರಕ್ರಿಯೆ ಮುಗಿದ ಕಾರಣ ಮುನಿರತ್ನ ಅವರನ್ನು ನೇರವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದತ್ತ ಕರೆದೊಯ್ದಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.

ಏನಿದು ಪ್ರಕರಣ?: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿಬಂದಿತ್ತು. ಈ ಕೇಸ್‌ ಸಂಬಂಧ ಅವರ ಬಂಧನವೂ ಆಗಿತ್ತು. ಬಳಿಕ ಈ ಕೇಸ್‌ನಲ್ಲಿ ಜಾಮೀನು ಪಡೆದು ಹೊರಬರುವ ಹೊತ್ತಿಗೆ ಮತ್ತೊಂದು ಕೇಸ್‌ ದಾಖಲಾಗಿತ್ತು. ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಿಸಿದ್ದರು. ಈ ಸಂಬಂಧ ರಾಮನಗರ ಪೊಲೀಸರು ಕೂಡ ಮುನಿರತ್ನ ಅವರನ್ನು ಮತ್ತೆ ವಶಕ್ಕೆ ಪಡೆದಿದ್ದರು.

MLA Munirathna Has Been Remanded In Judicial Custody For 14 days

ಪರಪ್ಪನ ಅಗ್ರಹಾರ ಜೈಲಿನಿಂದ ಮುನಿರತ್ನ ಅವರನ್ನು ಕಗ್ಗಲೀಪುರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ಕೂಡ ನಡೆಸಲಾಗಿತ್ತು. ಇನ್ನು ಮುನಿರತ್ನ ಅವರು ಎಚ್‌ಐವಿ ಪಾಸಿಟಿವ್ ಸಂತ್ರಸ್ತೆಯನ್ನು ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದಾರೆ ಎನ್ನುವ ಗಂಭೀರ ಆರೋಪ ಮಾಡಲಾಗಿದ್ದು, ಸಂತ್ರಸ್ತ ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಅತ್ಯಾಚಾರದ ಕೇಸ್‌ ದಾಖಲಿಸಿದ್ದರು.

ಮಹಿಳೆ ದೂರಿನಲ್ಲಿ ಹೇಳಿರುವಂತೆ ಖಾಸಗಿ ರೆಸಾರ್ಟ್‌ನಲ್ಲಿ ಆಕೆಯ ವಿರುದ್ಧ ಅತ್ಯಾಚಾರ ನಡೆದಿರುವುದಾಗಿ ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದರು. ʼಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಹೆಚ್ಚಾಗಿತ್ತು. ವಿಡಿಯೋ ಕಾಲ್ ಮಾಡಿ ನನ್ನೊಂದಿಗೆ ಮಾತನಾಡುತ್ತಿದ್ದರು. ಬಳಿಕ ನನ್ನನ್ನು ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸುತ್ತಿದ್ದರು. ನಾನು ಅದಕ್ಕೆ ಒಪ್ಪಿರಲಿಲ್ಲ ಎಂದಿದ್ದರು.

ʼನನ್ನನ್ನು ಒಂದು ಸ್ಥಳಕ್ಕೆ ಬರಲು ಹೇಳಿದ್ದರು. ಅಲ್ಲಿ ನನ್ನನ್ನು ತಬ್ಬಿಕೊಳ್ಳಲು ಮುಂದಾದಾಗ ವಿರೋಧ ಮಾಡಿದ್ದೆ. ಅದಕ್ಕೆ, ಅವರು ಇದೆಲ್ಲ ರಾಜಕೀಯದಲ್ಲಿ ಕಾಮನ್‌ ಎಂದು ಹೇಳಿದ್ದರು. ಬಳಿಕ ನನ್ನ ಮೇಲೆ ಅತ್ಯಾಚಾರ ಮಾಡಿ, ಯಾರಿಗೂ ಹೇಳದಂತೆ ಬೆದರಿಸಿದ್ದರು. ಅತ್ಯಾಚಾರದ ವಿಡಿಯೋ ಇಟ್ಟುಕೊಂಡು ನನ್ನ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಇದೇ ಕೇಸ್‌ನಲ್ಲಿ ಶಾಸಕ ಮುನಿರತ್ನ ಅವರು ಸದ್ಯ ಮತ್ತೆ ಜೈಲುಪಾಲಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+