'ಶಾಸಕ ಮುನಿರತ್ನ ಅಭಿನಯದ ಆಸಿಡ್ ಮೊಟ್ಟೆ ಸಿನಿಮಾ'
ಬೆಂಗಳೂರು, ಡಿಸೆಂಬರ್ 29: ಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತ. ಶಾಸಕ ಮುನಿರತ್ನ ಅಭಿನಯದ 'ಆಸಿಡ್ ಮೊಟ್ಟೆ' ಸಿನಿಮಾ 100 ದಿನ ಓಡಿಸಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.
ಬಿಜೆಪಿ ಶಾಸಕರು, ನನ್ನ ಮೇಲೆ, ನನ್ನ ಸಹೋದರ ಹಾಗೂ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ ಹಾಗೂ ಅವರ ತಂದೆ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಈ ವಿಡಿಯೋ ಅತ್ಯುತ್ತಮವಾಗಿ ಮೂಡಿ ಬಂದಿದೆ. ಆಸಿಡ್ ದಾಳಿ ಎಂದ ಮೂರು ಸೆಕೆಂಡ್ ನಲ್ಲಿ ಮೊಟ್ಟೆ ಎಸೆಯಲಾಗಿದೆ. ಕನ್ನಡ ಚಿತ್ರರಂಗದ ಅಧ್ಯಕ್ಷ, ನಿರ್ಮಾಪಕರು, ಚಿತ್ರಕಥೆ ತಿರುಚುವ ಕೆಲಸ ಮಾಡಿದ್ದ ಮುನಿರತ್ನ, ಈಗ ತಾವೇ ನಟನೆಗೂ ಇಳಿದಿದ್ದಾರೆ ಎಂದು ಈ ವಿಡಿಯೋ ನೋಡಿದ ಮೇಲೆ ನನಗೆ ತಿಳಿಯಿತು. ಅದಕ್ಕಾಗಿ ಒಳ್ಳೆ ಡ್ರಾಮಾ ಮಾಡಿ ಮಾಧ್ಯಮಗಳ ಕೈಗೆ ನೀಡಿದ್ದಾರೆ. ಮಾಧ್ಯಮಗಳು ಕೂಡ ಏನೂ ಸುದ್ದಿ ಇಲ್ಲ ಎಂದು ಇದನ್ನು ಚೆನ್ನಾಗಿ ಬಿತ್ತರಿಸಿದ್ದೀರಿ. ಅಭಿನಯ ಮಾಡಿದ ಅವರಿಗೂ ಅಭಿನಂದನೆ ಎಂದು ಡಿ ಕೆ ಸುರೇಶ್ ಹೇಳಿದರು.

ಈ ವಿಚಾರವಾಗಿ ಪ್ರಧಾನಮಂತ್ರಿ, ಕೇಂದ್ರ ಗೃಹಸಚಿವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಅವರು ಅನೇಕ ಸಿನೆಮಾ ಮಾಡಿದ್ದು, ಕೆಲವು ಡಬ್ಬಾ ಯಶಸ್ವಿಯಾದರೆ, ಮತ್ತೆ ಕೆಲವು ಯಶಸ್ವಿಯಾಗಿಲ್ಲ. ಹೀಗಾಗಿ ಹೊಸ ಸ್ಕ್ರಿಪ್ಟ್ ಸಿದ್ಧಪಡಿಸುತ್ತಿದ್ದಾರೆ. ಮೊದಲು ಮಾಧ್ಯಮಗಳನ್ನು ಬಳಸಿಕೊಂಡು ಮಾರುಕಟ್ಟೆ ಇದ್ದರೆ ನಂತರ ಸಿನಿಮಾ ಮಾಡಲು ಮುಂದಾಗಿದ್ದಾರೆ.
ಈ ಪ್ರಕರಣವನ್ನು ಸಿಬಿಐಗೆ ನೀಡಲಿ. ಅವರು ಗೃಹಮಂತ್ರಿಗೆ ಪತ್ರ ಬರೆದು ಎಸ್ ಪಿಜಿ ಭದ್ರತೆಯನ್ನೇ ಪಡೆಯಲಿ. ಕಾರಣ ಅವರ ಬಳಿ ರಘು ಎಂಬ ಚಾಲಕ ಇದ್ದ. ಅವನು ಏನಾದ ಎಂದು ತಿಳಿಯಬೇಕಲ್ಲವೇ. ಉಳಿದ ವಿಚಾರಗಳನ್ನು ಮಾಧ್ಯಮಗಳೇ ತನಿಖೆ ಮಾಡಿ ಪ್ರಸಾರ ಮಾಡಿ. ಮತ್ತೊಬ್ಬ ಮಳ್ಳತಹಳ್ಳಿ ರಂಜಿತ್ ಎಂಬ ಹುಡುಗನ ಕೈ ಕಾಲು ಮುರಿದಿದ್ದಾರೆ. ಇಷ್ಟು ದಿನ ಅವರ ಖಾಸಗಿ ವಿಚಾರ ಮಾತನಾಡಬಾರದು ಎಂದು ಸುಮ್ಮನೆ ಇದ್ದೆ. ಈ ಪ್ರಕರಣಗಳನ್ನು ಸಿಬಿಐ ತನಿಖೆಯಾಗಲಿ ಎಂದು ಪತ್ರ ಬರೆಯಲಿ. ಅವರ ಹೈಕಮಾಂಡ್ ಗೆ ಕೊಟ್ಟಿರುವ ವರದಿಯಲ್ಲಿ ಇದನ್ನು ಸೇರಿಸಲಿ.
ನನ್ನನ್ನು ಸೋಲಿಸಿದರು ಎಂದು ಹೇಳುತ್ತಾರೆ. ನನ್ನನ್ನು ಸೋಲಿಸಿದವರು ಜನರೇ ಹೊರತು ಬಿಜೆಪಿ ನಾಯಕರಲ್ಲ ಎಂದು ಫಲಿತಾಂಶ ಬಂದ ದಿನವೇ ಹೇಳಿದ್ದೇನೆ. ಇವರ ಯೋಗ್ಯತೆಗೆ ನನ್ನ ಸೋಲಿಸಲು ಆಗುವುದಿಲ್ಲ. ಜನ ತೀರ್ಮಾನಿಸಿ ನನ್ನನ್ನು ಸೋಲಿಸಿದ್ದಾರೆ. ಅದನ್ನು ನಾನು ಒಪ್ಪಿದ್ದೇನೆ. ಇವರು ದೊಡ್ಡ ಸಾಧನೆ ಮಾಡಿರುವವರಂತೆ ನನ್ನ ಹೆಸರು ಹೇಳಿಕೊಂಡು ಇವರ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ನನ್ನ ಹಾಗೂ ನನ್ನ ಅಣ್ಣನ ಹೆಸರು ಹೇಳಿದರಷ್ಟೇ ಇವರ ಸಿನಿಮಾ ನಡೆಯುತ್ತದೆ.
ರಮೇಶ್ ಜಾರಕಿಹೊಳಿ ಅವರು ಕೂಡ ಶಿವಕುಮಾರ್ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿಯಲ್ಲಿ ಎಂತೆಂಥ ನಟರಿದ್ದಾರೆ. ಅದರಲ್ಲಿ ರಮೇಶ್ ಜಾರಕಿಹೊಳಿ ಅವರು ಒಬ್ಬರು. ಇಂತಹ ಕೊಳಕು ವಿಚಾರಗಳ ಬಗ್ಗೆ ಮಾತನಾಡಬಾರದು ಎಂದು ಇಷ್ಟು ದಿನ ಮೌನವಾಗಿದ್ದೆ. ಅವರೇ ನನ್ನ ಬಾಯಲ್ಲಿ ಈ ವಿಚಾರ ಮಾತನಾಡಿಸುತ್ತಿದ್ದಾರೆ. ಯಡಿಯೂರಪ್ಪ ಅವರ ವಿಚಾರವಾಗಿ ವಿವರಣೆ ನೀಡುವುದಾಗಿ ಯಾರೋ ಮಹಿಳೆ ವಿಜಯೇಂದ್ರ ಅವರ ಸಮಯ ಕೇಳಿದ್ದಾರಲ್ಲವೇ? ಮಾಧ್ಯಮಗಳ ಮುಂದೆ ಚರ್ಚೆ ಮಾಡಲು ಸಮಯ ನೀಡಲಿ. ಇದರ ಹಿಂದಿರುವ ರಹಸ್ಯವೇನು ಎಂದು ತಿಳಿಯಲು ಮಾಧ್ಯಮಗಳು ವಿಜಯೇಂದ್ರ ಜತೆ ಮಾತನಾಡಿ ಸಮಯ ಕೊಡಿಸಲಿ. ಈ ಎಲ್ಲಾ ಪ್ರಕಾರಣಗಳನ್ನು ಸಿಬಿಐಗೆ ನೀಡಲಿ.
ಎಸ್ ಐಟಿ ಎಫ್ ಐಆರ್ ನಲ್ಲಿ ಏಡ್ಸ್ ಟ್ರಾಪ್ ಸೇರಿದಂತೆ ಇತರ ವಿಚಾರಗಳನ್ನು ಸ್ಪಷ್ಟವಾಗಿ ತಿಳಿಸಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರಿಗೆ ನೈತಿಕತೆ ಇದ್ದರೆ ಯಾವ ರೀತಿ ಮಟ್ಟ ಹಾಕಬೇಕು, ಶಿಕ್ಷೆ ನೀಡಬೇಕೋ ಅದನ್ನು ಮಾಡುತ್ತಾರೆ. ಆದರೆ ಬಿಜೆಪಿಯವರ ಬಳಿ ನೈತಿಕತೆ, ಸಂಸ್ಕೃತಿ ಏನೂ ಇಲ್ಲ. ಅವರು ಹೇಳುವುದೊಂದು ಮಾಡುವುದೊಂದು. ಅವರಿಗೆ ಹೇಳಿ ಪ್ರಯೋಜನವಿಲ್ಲ. ಸಮಯ ಬಂದಾಗ ಜನರೇ ಉತ್ತರ ನೀಡುತ್ತಾರೆ. ಮಾಧ್ಯಮಗಳಿಗಾಗಿ ಒಳ್ಳೊಳ್ಳೆ ಸಿನಿಮಾ ಬರುತ್ತಿವೆ. ತಮಿಳುನಾಡಿನಲ್ಲಿ ಚಾಟಿ ಏಟಿನ ಸಿನಿಮಾ ಬಂದಿದೆ.
ಮುನಿರತ್ನ ಸಿನಿಮಾಗೆ ಏನೆಂದು ಕರೆಯಬಹುದು? ಆಸಿಡ್ ಮೊಟ್ಟೆ ಎಂದು ಕರೆಯಬಹುದೇ? ಮುನಿರತ್ನಗೆ ಒಳ್ಳೆಯ ಹೆಸರು ಸಲಹೆ ನೀಡಿ. ಅವರು ನಮ್ಮ ಜತೆ ಇದ್ದರೂ ನಾಲ್ಕೈದು ವರ್ಷಗಳಿಂದ ಬಿಜೆಪಿ ಸೇರಿದ್ದಾರೆ. ಅಲ್ಲಿಗೆ ಹೋಗಿ ಹೊಸ ಹೊಸ ಐಡಿಯಾ ಮಾಡುತ್ತಿದ್ದಾರೆ. ಮೊಟ್ಟೆಯೊಳಗೆ ಆಸಿಡ್ ಹೇಗೆ ಹಾಕಬಹುದು, ಕೂದಲು ಸುಟ್ಟಿದೆ ಎಂದು ಸಿ.ಟಿ ಸ್ಕ್ಯಾನ್ ಮಾಡೋದು, ಮರುದಿನ ಕೂದಲು ವಾಪಸ್ ಬರೋ ಐಡಿಯಾ ಬರುವುದು ಯಾರಿಗೆ? ಸಿನಿಮಾದವರಿಗೆ ಅಲ್ಲವೇ. ಗ್ರಾಫಿಕ್ಸ್ ಮಾಡೋದು ಅವರೇ ಅಲ್ಲವೇ? ಇದೆಲ್ಲವನ್ನು ಮಾಧ್ಯಮದವರು ರಾಜ್ಯದ ಜನರಿಗೆ ಸರಿಯಾಗಿ ತೋರಿಸಿ ಎಂದು ಕೈಮುಗಿದು ಕೇಳುತ್ತೇನೆ ಎಂದು ತಿರುಗೇಟು ನೀಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications