ಬಡ 'ಕೈ' ಶಾಸಕ ಖಾಸಗಿ ವಿಮಾನದ ಮೂಲಕ ಪರಾರಿ!

ಬೆಂಗಳೂರು, ಮೇ 17 : ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ಬಹಮತ ಸಾಬೀತು ಪಡಿಸಲು ಅವರಿಗೆ ಅವಕಾಶ ನೀಡಲಾಗಿದೆ. ತೆರೆ-ಮರೆಯಲ್ಲಿ ಶಾಸಕರನ್ನು ಸೆಳೆಯುವ ಲೆಕ್ಕಾಚಾರ ಆರಂಭವಾಗಿದೆ.

ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು 'ಕೈ' ತಪ್ಪಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಪ್ರತಾಪ್ ಗೌಡ ಪಾಟೀಲ್ ಪತ್ತೆ ಮಾಡಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ. ಅವರನ್ನು ಬಿಜೆಪಿ ಸೆಳೆದಿರಬಹುದು ಎಂಬುದು ಸದ್ಯದ ಲೆಕ್ಕಾಚಾರ.

ಪ್ರತಾಪ್ ಗೌಡ ಪಾಟೀಲ್ ಅವರು ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. 2013ರ ಚುನಾವಣೆಯಲ್ಲಿ 40 ಲಕ್ಷ ಆಸ್ತಿಯನ್ನು ಅವರು ಘೋಷಿಸಿದ್ದಾರೆ. 2018ರ ಚುನಾವಣೆಯಲ್ಲಿ 17.5 ಲಕ್ಷ ಆಸ್ತಿ ಘೋಷಣೆ ಮಾಡಿದ್ದರು.

MLA Pratapgouda Patil

ಬಡ ಶಾಸಕರು ಖಾಸಗಿ ವಿಮಾನದ ಮೂಲಕ ನಾಪತ್ತೆಯಾಗಿದ್ದು ಹೇಗೆ? ಎಂಬುದು ಸದ್ಯದ ಪ್ರಶ್ನೆ. ಬಿಜೆಪಿಯ ಸೋಮಶೇಖರ ರೆಡ್ಡಿ ಅವರು ಖಾಸಗಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ವಿಮಾನದ ವ್ಯವಸ್ಥೆ ಮಾಡಿದ್ದರು ಎಂಬ ಸುದ್ದಿ ಹಬ್ಬಿದೆ.

ಪ್ರತಾಪ್ ಗೌಡ ಪಾಟೀಲ್ ಅವರು ಮಸ್ಕಿ ಕ್ಷೇತ್ರದಲ್ಲಿ ಪ್ರಯಾಸದಿಂದ ಗೆಲುವು ಸಾಧಿಸಿದ್ದಾರೆ. 60,387ಮತಗಳನ್ನು ಅವರು ಪಡೆದಿದ್ದಾರೆ. ಬಸವನಗೌಡ ತುರುವಿನಾಳ ಅವರು60174 ಮತಗಳನ್ನು ಪಡೆದು ಭಾರೀ ಪೈಪೋಟಿ ನೀಡಿದ್ದರು. ಕೇವಲ 213 ಮತಗಳಿಂದ ಗೆದ್ದಿದ್ದ ಅವರು ಈಗ ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ.

ಪ್ರತಾಪ್ ಗೌಡ ಪಾಟೀಲ್ 2013, 2018ರ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. 2008ರಲ್ಲಿ ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಆದ್ದರಿಂದ, ಬಿಜೆಪಿ ಅವರನ್ನು ಸಳೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+