ವಿಧಾನಸೌಧದಲ್ಲಿ ಶಾಸಕರಿಗೆ ವೈ ಫೈ ಭಾಗ್ಯ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಮಾರ್ಚ್ 21 : ವಿಧಾನಸೌಧದ ಮೊಗಸಾಲೆಯಲ್ಲಿ ಶಾಸಕರಿಗೆ ಶೀಘ್ರವೇ ವೈ-ಫೈ ಭಾಗ್ಯ ದೊರೆಯಲಿದೆ. ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಶಾಸಕರಿಗೂ ತಂತ್ರಜ್ಞಾನದ ಸೌಲಭ್ಯ ದೊರೆಯಬೇಕು ಎನ್ನುವ ಮನವಿಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಒಪ್ಪಿಗೆ ಕೊಟ್ಟಿದ್ದಾರೆ.

ಸೋಮವಾರ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ, ವಿಧಾನಸಭೆ ಮೊಗಸಾಲೆಯಲ್ಲಿ ಶಾಸಕರಿಗೆ ವೈ ಫೈ ಸೌಲಭ್ಯ ಕಲ್ಪಿಸಲು ಒಪ್ಪಿಗೆ ಸಿಕ್ಕಿದೆ. ಸೌಲಭ್ಯ ಕಲ್ಪಿಸಲು ತಾಂತ್ರಿಕ ತಜ್ಞರ ಜೊತೆ ಚರ್ಚೆ ನಡೆಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದಾರೆ. [ವಿಧಾನಸೌಧದಲ್ಲಿ ವೈಫೈ ಸೌಲಭ್ಯ ಕಲ್ಪಿಸಲು ಶಾಸಕರ ಮನವಿ]

vidhana soudha

2015ರ ನವೆಂಬರ್‌ನಲ್ಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಈ ಸಂಬಂಧ ಪತ್ರ ಬರೆದು ಶಾಸಕರಿಗೆ ವೈ ಫೈ ಸೌಲಭ್ಯ ಅಗತ್ಯವಿದೆ ಎಂದು ಮನವಿ ಮಾಡಿದ್ದರು. ವಿಧಾನಸಭೆ ಆಸುಪಾಸಿನಲ್ಲಿ ಜಾಮರ್ ಅಳವಡಿಸಿರುವುದರಿಂದ ಇಂಟರ್‌ನೆಟ್ ಸೌಲಭ್ಯ ದೊರೆಯುತ್ತಿಲ್ಲ. ಇದರಿಂದ ಶಾಸಕರ ದೈನಂದಿನ ವ್ಯವಹಾರಗಳಿಗೆ ಅಡಚಣೆ ಉಂಟಾಗುತ್ತಿದೆ ಎಂದು ಹೇಳಿದ್ದರು. [ವಿಧಾನಸೌಧದ ಭದ್ರತೆಗೆ KSIF ಪಡೆ]

ಸೋಮವಾರ ನಡೆದ ಸಭೆಯಲ್ಲಿ ಈ ವಿಚಾರ ಮತ್ತೆ ಪ್ರಸ್ತಾಪಕ್ಕೆ ಬಂದಾಗ, ಮೊಬೈಲ್‌ನಿಂದ ಸದನದ ಕಲಾಪದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಆದರೆ, ಮೊಗಸಾಲೆಯಲ್ಲಿ ವೈ ಫೈ ಸೌಲಭ್ಯ ಕಲ್ಪಿಸಲು ಯಾವುದೇ ಅಡ್ಡಿಯಿಲ್ಲ. ಈ ಬಗ್ಗೆ ಸಾಧಕ-ಬಾಧಕಗಳನ್ನು ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ಕೊಟ್ಟಿದ್ದಾರೆ.

ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದಾಗ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ಸಿಕ್ಕಿಬಿದ್ದಿದ್ದ ಹಿನ್ನೆಲೆಯಲ್ಲಿ ಮೂವರು ಸಚಿವ ಸ್ಥಾನ ಕಳೆದುಕೊಂಡಿದ್ದರು. ಈ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇದೀಗ ಮೊಗಸಾಲೆಯಲ್ಲಿ ವೈ ಫೈ ಸೌಲಭ್ಯ ನೀಡುವ ಕುರಿತು ಚರ್ಚೆ ನಡೆಯುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka MLA's will get free Wi-fi facility in Vidhana Soudha soon.
Please Wait while comments are loading...