BREAKING : ಎಸ್‌ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್‌ಗೆ ಬಿಗ್ ಶಾಕ್ : ಬಿಜೆಪಿ ಪಕ್ಷದಿಂದ ಉಚ್ಚಾಟನೆ.!

ಬೆಂಗಳೂರು, ಮೇ 27: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರಿಗೆ ಬಿಜೆಪಿ ಹೈಕಮಾಂಡ್‌ ಬಿಗ್‌ ಶಾಕ್‌ ನೀಡಿದೆ. ಕಡೆಗೂ ಪಕ್ಷ ವಿರೋಧಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿದ ರಾಷ್ಟ್ರೀಯ ಬಿಜೆಪಿ ಶಿಸ್ತು ಸಮಿತಿಯೂ ಬಿಜೆಪಿ ಪಕ್ಷದಿಂದ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರನ್ನು ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ.

ಮೊದಲಿನಿಂದಲೂ ಕಾಂಗ್ರೆಸ್‌ ಜೊತೆಗೆ ಗುರುತಿಳಿಸಿಕೊಂಡಿದ್ದು, ಬಿಜೆಪಿ ನಾಯಕರ ವಿರುದ್ಧವೇ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದ ಶಿವರಾಮ್‌ ಹೆಬ್ಬಾರ್‌ ಹಾಗೂ ಎಸ್‌ ಟಿ ಸೋಮಶೇಖರ್‌ ಅವರ ವಿರುದ್ಧ ರಾಷ್ಟ್ರೀಯ ಬಿಜೆಪಿ ಶಿಸ್ತು ಸಮಿತಿ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.

MLA ST Somashekar Shivaram Hebbar Expelled From BJP party

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. ಶಾಸಕ್ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಈ ಇಬ್ಬರು ಶಾಸಕರು 2019ರಲ್ಲಿ ಇಬ್ಬರೂ ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು. ಇನ್ನೂ 2023ರ ವಿಧಾನಸಭಾ ಚುನಾವಣೆಯಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಇಬ್ಬರೂ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಬಿಜೆಪಿ ಸಭೆ ಕಾರ್ಯಕ್ರಮಗಳಿಗೆ ಭಾಗವಹಿಸುವುದಕ್ಕಿಂತ ಹೆಚ್ಚಾಗಿ ಕಾಂಗ್ರೆಸ್‌ ನಾಯಕ ಕಾರ್ಯಕ್ರಮದಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿದ್ದರು. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಪಕ್ಷ ವಿರೋಧಿ ಆರೋಪದ ಮೇಲೆ ಶಾಸಕ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇದೀಗ ಎಸ್‌ ಟಿ ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಅವರನ್ನು ಕೂಡ ಉಚ್ಚಾಟನೆ ಮಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ ನೀಡಿದ್ದಾರೆ.

ಇನ್ನೂ ಉಚ್ಚಾಟನೆ ಬೆನ್ನಲ್ಲೇ ಮಾತನಾಡಿರುವ ಶಿವರಾಂ ಹೆಬ್ಬಾರ್​ , ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ನಾನು ಹೇಳುತ್ತೇನೆ, ಪಕ್ಷದ ವಿರುದ್ಧ ನಾನು ಮಾತನಾಡಲು ಕಾರಣ ಏನೆಂದು ತಿಳಿಸುತ್ತೇನೆ. ನನ್ನ ಮುಂದಿನ ತೀರ್ಮಾನದ ಬಗ್ಗೆ ಕಾದು ನೋಡಿ. ಯಾವುದೇ ಸಭೆ, ಸಮಾರಂಭಗಳಿಗೆ ನನ್ನನ್ನು ಕರೆಯುತ್ತಿರಲಿಲ್ಲ ಸಭೆ, ಸಮಾರಂಭಗಳಿಗೆ ಕರೆಯದಿದ್ದರೆ ಹೋಗಲು ಆಗುತ್ತಾ? ಮುಂದಿನ ವಾರ ಬೆಂಗಳೂರಿಗೆ ಬಂದು ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+