ಡಿಕೆ ಶಿವಕುಮಾರ್ ಚನ್ನಪಟ್ಟಣದಿಂದ ಸ್ಪರ್ಧೆ; ಇದನ್ನೇ ತುಘಲಕ್ ದರ್ಬಾರ್ ಅನ್ನುವುದು: ಸುರೇಶ್ ಕುಮಾರ್ ಕಿಡಿ
ಬೆಂಗಳೂರು, ಜೂನ್ 20: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿರುವುದು ಅನಗತ್ಯ ಪ್ರಹಸನ. ಇದಕ್ಕೆ ಏನು ಹೇಳಬೇಕು? ಸಾರ್ವಜನಿಕರ ಹಣ, ರಾಷ್ಟ್ರದ ಸಂಪತ್ತು ಹೇಗೆ ವೈಯಕ್ತಿಕ ಪ್ರತಿಷ್ಠೆಗೆ ವೆಚ್ಚವಾಗುತ್ತೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಕನಕಪುರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ ಉಪಮುಖ್ಯಮಂತ್ರಿಯಾಗಿರುವ ಡಿ ಕೆ ಶಿವಕುಮಾರ್ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ ಎಂದು ಚರ್ಚೆ ನಡೆಯುತ್ತಿದ್ದು, ಡಿ ಕೆ ಶಿವಕುಮಾರ್ ನಡೆ ಕುರಿತು ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದ ವಿಧಾನಸಭೆಗೆ ಚುನಾವಣೆಗಳು ನಡೆದದ್ದು 2023 ಮೇ ತಿಂಗಳಲ್ಲಿ. ಮೇ 13ರಂದು ಫಲಿತಾಂಶ ಪ್ರಕಟವಾಗಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿ ಸರ್ಕಾರ ರಚಿಸಲು ಅರ್ಹತೆ ಪಡೆಯಿತು. ಕನಕಪುರ ಕ್ಷೇತ್ರದಿಂದ ಆಯ್ಕೆಯಾದ ಶ್ರೀ ಡಿ.ಕೆ. ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯೂ ಆದರು, ಕನಕಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ಶ್ರೀ ಡಿ.ಕೆ.ಶಿವಕುಮಾರ್ ರವರಿಗೆ ರಾಜ್ಯದ ಇನ್ನುಳಿದ 223 ಕ್ಷೇತ್ರಗಳ ಸದಸ್ಯರಂತೆ 2028 ನೇ ಇಸವಿ ಯವರೆಗೂ ಅವಧಿ ಇದೆ.
ಇದೀಗ ಡಿ.ಕೆ. ಶಿವಕುಮಾರ್ ರಾಜಕಾರಣದಲ್ಲಿ ಹೊಸ ನಾಂದಿ ಹಾಡುವ ಸಡಗರದಲ್ಲಿದ್ದಾರೆ. ಕಳೆದ ವರ್ಷ, 2023 ರ ಮೇ ತಿಂಗಳಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಶ್ರೀ ಎಚ್ ಡಿ ಕುಮಾರಸ್ವಾಮಿ ಯವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೊನ್ನೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿ ಕೇಂದ್ರದ ಸಚಿವರೂ ಆಗಿದ್ದಾರೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದ ತನ್ನ ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ಕೊಟ್ಟಿದ್ದಾರೆ.
ಈಗ ಶಾಸಕ ಸ್ಥಾನ ಖಾಲಿಯಾಗಿರುವ ಚನ್ನಪಟ್ಟಣ ಕ್ಷೇತ್ರದಿಂದ ಉಪಚುನಾವಣೆ ಅಗತ್ಯವಾಗಿದೆ. ಇತಿಹಾಸದಲ್ಲಿ ಓರ್ವ ವ್ಯಕ್ತಿ ತನ್ನ ರಾಜಧಾನಿಯನ್ನು ದೆಹಲಿಯಿಂದ ಸಾವಿರಾರು ಮೈಲಿ ದೂರದ ಮಹಾರಾಷ್ಟ್ರ ದಲ್ಲಿನ ದೌಲತಾಬಾದಿಗೆ ಬದಲಾಯಿಸಿದ್ದ. ನಂತರ ಮತ್ತೆ ದೌಲತಾಬಾದಿಂದ ದೆಹಲಿಗೆ ವಾಪಸ್ಸು ರಾಜಧಾನಿಯನ್ನು ತಂದ . ಇತಿಹಾಸದಲ್ಲಿ ಈ ವಿಲಕ್ಷಣ ವ್ಯಕ್ತಿ ಹೆಸರು ಯಾವಾಗಲೂ ನೆನಪಿರುತ್ತದೆ. ಇದನ್ನೇ ತುಘಲಕ್ ದರ್ಬಾರ್ ಅನ್ನುವುದು.
ಇದೀಗ ಕನಕಪುರದಿಂದ ಆಯ್ಕೆಯಾಗಿ 2028ರ ವರೆಗೆ ಶಾಸಕನಾಗಿ ಮುಂದುವರಿಯುವ ಅವಕಾಶ ಮತ್ತು ಕರ್ತವ್ಯ ಹೊಂದಿರುವ ಶ್ರೀ ಡಿ.ಕೆ. ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿರುವುದು ಒಂದು ಅನಗತ್ಯ ಪ್ರಹಸನವೇ ಹೌದು.
ಮಾಧ್ಯಮಗಳಲ್ಲಿ ಕೇಳಿ ಬಂದಂತೆ ಚನ್ನಪಟ್ಟಣದಿಂದ ಸ್ಪರ್ಧಿಸಿ ತಾನು ಗೆದ್ದು, ಈಗಾಗಲೇ ಆಯ್ಕೆ ಯಾಗಿರುವ ಕನಕಪುರ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಲ್ಲಿಂದ ಮೊನ್ನೆ ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದ ತನ್ನ ಸಹೋದರ ಡಿ.ಕೆ. ಸುರೇಶ್ ಗೆ ಸ್ಪರ್ಧಿಸುವಂತೆ ಮಾಡಿ ಅವರನ್ನು ಗೆಲ್ಲಿಸಿ ಶಾಸಕರನ್ನಾಗಿ ಮಾಡುವ ಮಹದೋದ್ದೇಶ ಡಿಕೆ ಶಿವಕುಮಾರ್ ಅವರದಂತೆ. ಇದಕ್ಕೆ ಏನು ಹೇಳಬೇಕು? ಸಾರ್ವಜನಿಕರ ಹಣ, ರಾಷ್ಟ್ರದ ಸಂಪತ್ತು ಹೇಗೆ ವೈಯಕ್ತಿಕ ಪ್ರತಿಷ್ಠೆಗಾಗಿ ವೆಚ್ಚವಾಗುತ್ತದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಡಿ.ಕೆ.ಶಿವಕುಮಾರ್ ರವರ ಈ ನಡೆ ವಿವೇಚನೆ ಮತ್ತು ವಿವೇಕದಿಂದ ಕೂಡಿದ ಅತಿರೇಕದ ನಡೆ ಎಂದೆನಿಸದು! ರಾಹುಲ್ ಗಾಂಧಿಯವರು ಇದಕ್ಕೆ ಒಪ್ಪುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications