ಚಿಕ್ಕಮಗಳೂರು : ಬೈಕ್‌ಗೆ ಗುದ್ದಿದ ಶಾಸಕರ ಕಾರು, ಸವಾರನಿಗೆ ಗಾಯ

Posted By: Gururaj
Subscribe to Oneindia Kannada

ಚಿಕ್ಕಮಗಳೂರು, ಆಗಸ್ಟ್. 27 : ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಶಾಸಕರ ಕಾರು ಬೈಕ್‌ಗೆ ಡಿಕ್ಕಿ ಹೊಡೆದರೂ ಕಾರು ನಿಲ್ಲಿಸದೇ ಮುಂದೆ ಸಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕಬ್ಬಿಣದ ಸೇತುವೆ ಬಳಿ ಈ ಅಪಘಾತ ನಡೆದಿದೆ. ಕಾರು ಡಿಕ್ಕಿ ಹೊಡೆದು ಗಾಯಗೊಂಡಿರುವ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೈ ಬಾರ್ ಕೇಸ್ : ಶಾಸಕ ಕಾಶಪ್ಪನವರ್ ಮೇಲೆ ಚಾರ್ಜ್ ಶೀಟ್

MLA Vijayanand Kashappanavar car rams bike, one injured

ಕೆಎ 03, ಎಂಡಬ್ಲ್ಯೂ 8181 ಆಡಿ ಕಾರಿನಲ್ಲಿ ವಿಜಯಾನಂದ ಕಾಶಪ್ಪನವರ್ ತೆರಳುತ್ತಿದ್ದರು. ಕಾರು ಬೈಕ್‌ಗೆ ಡಿಕ್ಕಿ ಹೊಡೆದರೂ ಕಾರು ನಿಲ್ಲಿಸಿದೇ ಅವರು ಮುಂದೆ ಸಾಗಿದ್ದಾರೆ. ಜನರು ಕಾರನ್ನು ಹಿಂಬಾಲಿಸಿ ಬಿಳಗುಳದ ಬಳಿ ಕಾರನ್ನು ಅಡ್ಡಗಟ್ಟಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಸಿಬಿ ಪೊಲೀಸರ ಮುಂದೆ ಕಾಶಪ್ಪನವರ್ ಹೇಳಿದ್ದೇನು?

ಯುವಕ ದಾಖಲಾದ ಆಸ್ಪತ್ರೆಗೆ ಶಾಸಕರನ್ನು ಕರೆತಂದ ಜನರು, ಚಿಕಿತ್ಸಾ ವೆಚ್ಚ ಭರಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಶಾಸಕರು ಮತ್ತು ಜನರ ನಡುವೆ ಮಾತಿನ ಚಕಮಕಿ ನಡೆಯಿತು.

2014ರಲ್ಲಿ ವಿಜಯಾನಂದ ಕಾಶಪ್ಪನವರ್ ಬೆಂಗಳೂರಿನ ಸ್ಕೈ ಬಾರ್ ನಲ್ಲಿ ಪೊಲೀಸ್ ಪೇದೆಗಳ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Hungund Congress MLA Vijayanand Kashappanavar again in the news for a wrong reason. His car rammed a bike near Moodigere bridge, Chikkamagaluru and biker injured. He left the place without even stopping his car.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ