Second Airport: ಉತ್ತರ ಕರ್ನಾಟಕಕ್ಕೆ ಶಿಫ್ಟ್ ಆಗುತ್ತಾ ಹೊಸ ಏರ್‌ಪೋರ್ಟ್? ಸದನದಲ್ಲೂ ಜೋರು ಚರ್ಚೆ
ಬೆಂಗಳೂರಿನಲ್ಲಿ ಈಗಾಗಲೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಿದ್ದು, ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ತುದಿಗಾಲಲ್ಲಿ ನಿಂತಿದೆ. ಅದಕ್ಕಾಗಿ ಬೆಂಗಳೂರು ಸುತ್ತಮುತ್ತಲೂ ಸ್ಥಳ ನಿಗದಿ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಮತ್ತೊಂದೆಡೆ ಬೆಳಗಾವಿ ಅಧಿವೇಶನದಲ್ಲೂ ಈ ಬಗ್ಗೆ ಭಾರಿ ಚರ್ಚೆ ನಡೆದಿದ್ದು, ಹೊಸ ವಿಮಾನ ನಿಲ್ದಾಣವನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡುವಂತೆ ಆ ಭಾಗದ ನಾಯಕರು ಪಟ್ಟು ಹಿಡಿದಿದ್ದಾರೆ.
ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ನಮ್ಮ ಉತ್ತರ ಕರ್ನಾಟಕದ ಯಾವುದಾದರೂ ಒಂದು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಮಾಡುವ ಯೋಜನೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಸಕಲ ಸೌಭಾಗ್ಯಗಳನ್ನು, ಮೂಲಭೂತ ಸೌಕರ್ಯಗಳನ್ನು ನೀಡಿದರೆ ಉತ್ತರ ಕರ್ನಾಟಕದ ಜನತೆ ಏನು ಮಾಡಬೇಕು ಹಾಗೂ ಇಲ್ಲಿನ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ.

ಉತ್ತರ ಕರ್ನಾಟಕದ ಯಾವುದಾದರೂ ಒಂದು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಮಾಡುವುದರಿಂದ ಇದರಿಂದ ಸ್ಥಳೀಯ ಆರ್ಥಿಕತೆಗೆ ಅನುಕೂಲವಾಗುತ್ತದೆ. ಅಲ್ಲದೆ, ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಕೃಷಿ ಉತ್ಪನ್ನ, ಜವಳಿ, ವ್ಯಾಪಾರ ಹಾಗೂ ವಾಣಿಜ್ಯಕ್ಕೆ ಸಾಕಷ್ಟು ಅನುಕೂಲಕರವಾದ ವಾತಾವರಣ ಸೃಷ್ಟಿಯಾಗುತ್ತದೆ ಎಂದು ಯತ್ನಾಳ್ ಸದನದಲ್ಲಿ ಮಾತನಾಡಿದ್ದಾರೆ. ಎಲ್ಲ ಅಭಿವೃದ್ಧಿ ಕಾರ್ಯಗಳನ್ನು, ಯೋಜನೆಗಳನ್ನು ದಕ್ಷಿಣ ಕರ್ನಾಟಕಕ್ಕೆ ಕೊಡದೆ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಹಾಲಿನ ಹಣ ಗ್ಯಾರಂಟಿಗಳಿಗೆ ಬಳಕೆ ಆಗಿದ್ಯಾ?: ಹೈನುಗಾರರಿಗೆ ಸರ್ಕಾರ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿರುವ ಬಗ್ಗೆಯೂ ಶಾಸನ ಬಸನಗೌಡ ಪಾಟೀಲ್ ಯತ್ನಾಳ್ ತರಾಟೆಗೆ ತೆಗೆದುಕೊಂಡಿದ್ದಾರೆ. ಹೈನುಗಾರಿಕೆಯನ್ನೇ ನಂಬಿಕೊಂಡಿರುವ ರೈತರಿಗೆ ಕಾಂಗ್ರೆಸ್ ಸರ್ಕಾರ ಕಳೆದ 9 ತಿಂಗಳಿನಿಂದ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷ ನಾಯಕರಾಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‌ಗೆ 7 ರೂಪಾಯಿ ಏರಿಸುವುದಾಗಿ ಹೇಳಿದ್ದರು ಎಂದು ನೆನಪು ಮಾಡಿದ್ದಾರೆ.

ಆದರೆ, ಸ್ವತಃ ಪಶುಸಂಗೋಪನಾ ಸಚಿವರೇ ಕೆ.ವೆಂಕಟೇಶ್ ಅವರು ಹೇಳುವಂತೆ ಕಳೆದ ಜೂನ್ 2024ರಿಂದ ಅಕ್ಟೊಬರ್ 2024ವರೆಗೂ 606.69 ಕೋಟಿಯಷ್ಟು ಬಾಕಿ ಉಳಿಸಿಕೊಂಡಿರುವುದಾಗಿ ಹೇಳಿದ್ದಾರೆ. ಸರ್ಕಾರದ ಬಳಿ ಹಣ ಇಲ್ಲದಿರುವ ಕಾರಣದಿಂದಾಗಿ ರೈತರಿಗೆ ಪ್ರೋತ್ಸಾಹ ಧನ ಕೊಟ್ಟಿಲ್ಲ ಎಂದು ಹೇಳಿದ್ದಾರೆ ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಸುಳ್ಳು ಹಾಗೂ ಈಡೇರಿಸಲಾಗದ ಭರವಸೆಗಳನ್ನು ಕೊಟ್ಟು ಈಗ ರೈತರಿಗೆ ಹಣವಿಲ್ಲ ಎಂದು ಹೇಳುತ್ತಿರುವುದು ರೈತರಿಗೆ ಮಾಡಿರುವ ಅನ್ಯಾಯ. ಕೆ.ಎಂ.ಎಫ್ ಹಾಲಿನ ದರವನ್ನು ಹೆಚ್ಚಳ ಮಾಡಿ, ಹೆಚ್ಚಳ ಮಾಡಿದ್ದನ್ನು ರೈತರಿಗೆ ನೀಡುತ್ತೇವೆ ಎಂದು ಹೇಳಿ ಈ ಹಣವನ್ನೂ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆಯಾ ಸರ್ಕಾರ? ಎಂದು ಮುಖ್ಯಮಂತ್ರಿಗಳು ಸ್ಪಷ್ಟೀಕರಣ ಕೊಡಬೇಕು. ರೈತರಿಗೆ ಬಾಕಿ ಇರುವ ಪ್ರೋತ್ಸಾಹಧನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications