ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಹಳ್ಳಿಹಳ್ಳಿಯಲ್ಲೂ ಆಂಗ್ಲ ಮಾಧ್ಯಮ ಶಾಲೆ

|
Google Oneindia Kannada News

ಬೆಂಗಳೂರು, ಮಾರ್ಚ್ 17: ಕರ್ನಾಟಕದಲ್ಲಿ ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸಲು ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಒಂದೊಂದು ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಬೇಕು ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಿಕ್ಷಣ ಎಂಬುದು ವ್ಯಾಪಾರದಂತೆ ಆಗಿ ಬಿಟ್ಟಿದೆ. ಮಕ್ಕಳ ಶಾಲಾ ಶುಲ್ಕ ಪಾವತಿಸುವುದಕ್ಕೆ ಪೋಷಕರು ಬ್ಲ್ಯಾಂಕ್ ಚೆಕ್ ನೀಡುವಂತಾ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲವು ಕಡೆಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು 20 ಕಿಲೋ ಮೀಟರ್ ದೂರದಲ್ಲಿ ಇರುವ ಆಂಗ್ಲ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. ಆ ಶಾಲಾ ವಾಹನಗಳಲ್ಲಿ ಮಕ್ಕಳನ್ನು ಕುರಿಗಳಂತೆ ತುಂಬಿಕೊಂಡು ಹೋಗಲಾಗುತ್ತಿದೆ" ಎಂದು ಶಿವಲಿಂಗೇಗೌಡ ದೂಷಿಸಿದ್ದಾರೆ.

ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ಸಿಹಿ ಸುದ್ದಿ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್!ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ಸಿಹಿ ಸುದ್ದಿ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್!

ಕರ್ನಾಟಕದ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ವಿದ್ಯಾರ್ಥಿಗಳ ದಾಖಲಾತಿ ಇಲ್ಲದೇ ಶಾಲೆಗಳೇ ಮುಚ್ಚಿವ ಸ್ಥಿತಿಯಲ್ಲಿವೆ. ಅಂಥ ಶಾಲೆಗಳನ್ನು ಮುಚ್ಚುವ ಬದಲು, ಕಡಿಮೆ ವಿದ್ಯಾರ್ಥಿಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಬಹುದು. ಇದರ ಜೊತೆಗೆ ಇಂಗ್ಲಿಷ್ ಕಲಿಸುವ ಕರ್ನಾಟಕ ಸಾರ್ವಜನಿಕ ಶಾಲೆಗಳನ್ನು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಪ್ರಾರಂಭಿಸಬಹುದು. ಇದರಿಂದ ಸರ್ಕಾರಿ ಶಾಲೆಗಳಿಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ ಎಂದು ಶಿವಲಿಂಗೇಗೌಡ ಅಭಿಪ್ರಾಯ ಮಂಡಿಸಿದ್ದಾರೆ.

MLAs Demand English Medium Schools Be Opened In Gram Panchayat Limits

ಶಿವಲಿಂಗೇಗೌಡರ ಪ್ರಸ್ತಾಪಕ್ಕೆ ಶಾಸಕರ ಬೆಂಬಲ:

Recommended Video

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ, ಮಾಸ್ಕ್‌ ಧರಿಸದಿದ್ದರೆ ದಂಡ ಹಾಕಲು ಸೂಚನೆ | Oneindia Kannada

ಕರ್ನಾಟಕದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಬೇಕು ಎಂಬ ಶಾಸಕ ಶಿವಲಿಂಗೇಗೌಡರ ಪ್ರಸ್ತಾಪಕ್ಕೆ ಹಲವು ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಮಾತನಾಡಿದ್ದು, ಈ ಹಿಂದೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿಕ್ಷಣ ಸಚಿವರಾದ ಸಂದರ್ಭದಲ್ಲಿ ಇದೇ ರೀತಿಯ ಪ್ರಸ್ತಾವನೆಯಲ್ಲಿ ಇಟ್ಟಿದ್ದರು. ಅವನತಿ ಅಂಚಿನಲ್ಲಿರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಆದರೆ ಸರ್ಕಾರದ ನಡೆಯು "ಕನ್ನಡ ವಿರೋಧಿ" ಮತ್ತು "ಸರ್ಕಾರಿ ಶಾಲೆಗಳ ವಿರೋಧಿ" ನಿಲುವು ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಮುಂದಿನ ಕ್ರಮ ತೆಗೆದುಕೊಳ್ಳಲು ಆಗಲಿಲ್ಲ ಎಂದು ತಿಳಿಸಿದರು.

English summary
MLAs Demand English Medium Schools Be Opened In Gram Panchayat Limits.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X