ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಾಂಧಿ ಪ್ರತಿಮೆ ಮುಂದೆ ಧರಣಿ ಕುಳಿತ ಕಾಂಗ್ರೆಸ್ ನಾಯಕರು

|
Google Oneindia Kannada News

ಬೆಂಗಳೂರು, ಜುಲೈ 09 : ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ.

ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ.

ರಾಜೀನಾಮೆ ನೀಡಿರುವ ಶಾಸಕರಿಗೆ ಕೊನೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯರಾಜೀನಾಮೆ ನೀಡಿರುವ ಶಾಸಕರಿಗೆ ಕೊನೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ

'ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ. ಹಣ ಬಲದಿಂದ ಸರ್ಕಾರ ಉರುಳಿಸುವ ಪ್ರಯತ್ನವನ್ನು ಮಾಡಲಾಗಿದೆ' ಎಂದು ಸಿದ್ದರಾಮಯ್ಯ ಆರೋಪಿಸಿದರು.

8 ಶಾಸಕರ ಅನರ್ಹತೆಗೆ ಸ್ಪೀಕರ್‌ಗೆ ಕಾಂಗ್ರೆಸ್‌ನಿಂದ ದೂರು8 ಶಾಸಕರ ಅನರ್ಹತೆಗೆ ಸ್ಪೀಕರ್‌ಗೆ ಕಾಂಗ್ರೆಸ್‌ನಿಂದ ದೂರು

'ಆಪರೇಷನ್ ಕಮಲಕ್ಕೆ ಕೆಲವು ಶಾಸಕರು ಟ್ರ್ಯಾಪ್ ಆಗಿದ್ದಾರೆ. ಒಂದೇ ವಿಮಾನದಲ್ಲಿ ಮುಂಬೈಗೆ ಹೋಗಿದ್ದಾರೆ. ಅಲ್ಲಿ ಒಟ್ಟಿಗೆ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇವುಗಳನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಲಾಗಿದೆ' ಎಂದು ಸಿದ್ದರಾಮಯ್ಯ ಹೇಳಿದರು.

ಅತೃಪ್ತ ಶಾಸಕರಿಗೆ ಕೊನೆಯ ಆಫರ್ ಕೊಟ್ಟ ಸಿದ್ದರಾಮಯ್ಯ!ಅತೃಪ್ತ ಶಾಸಕರಿಗೆ ಕೊನೆಯ ಆಫರ್ ಕೊಟ್ಟ ಸಿದ್ದರಾಮಯ್ಯ!

ರಾಜೀನಾಮೆ ನೀಡಿರುವ ಶಾಸಕರು ಗೈರು

ರಾಜೀನಾಮೆ ನೀಡಿರುವ ಶಾಸಕರು ಗೈರು

ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 10 ಶಾಸಕರು ಸಭೆಗೆ ಗೈರಾಗಿದ್ದರು. ಸಭೆಯ ಬಳಿಕ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಧರಣಿಯನ್ನು ನಡೆಸುತ್ತಿದ್ದಾರೆ.

ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ

ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿದೆ. ಶಾಸಕರಿಗೆ ಹಣ, ಸ್ಥಾನಮಾನದ ಆಮಿಷವೊಡ್ಡಿ ಅವರನ್ನು ಖರೀದಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ.

ಒಂದು ಗಂಟೆಗಳ ಕಾಲ ಧರಣಿ

ಒಂದು ಗಂಟೆಗಳ ಕಾಲ ಧರಣಿ

ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು 1 ಗಂಟೆಗಳ ಕಾಲ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಬಳಿಕ ಎಲ್ಲಾ ನಾಯಕರು ಧರಣಿ ಸ್ಥಳಕ್ಕೆ ಆಗಮಿಸಿದ್ದಾರೆ.

ಸ್ಪೀಕರ್‌ರಿಂದ ರಾಜೀನಾಮೆ ಪರೀಶಿಲನೆ

ಸ್ಪೀಕರ್‌ರಿಂದ ರಾಜೀನಾಮೆ ಪರೀಶಿಲನೆ

ಮತ್ತೊಂದು ಕಡೆ ಸ್ಪೀಕರ್ ರಮೇಶ್ ಕುಮಾರ್ ಅವರು ವಿಧಾನಸೌಧದ ಕಚೇರಿಗೆ ಆಗಮಿಸಿದ್ದಾರೆ. ಕಾಂಗ್ರೆಸ್‌ನ 9, ಜೆಡಿಎಸ್‌ನ 3 ಶಾಸಕರು ನೀಡಿರುವ ರಾಜೀನಾಮೆಯನ್ನು ಅವರು ಪರಿಶೀಲನೆ ನಡೆಸುತ್ತಿದ್ದಾರೆ.

English summary
Karnataka Congress leaders protest near statue of Mahatma Gandhi between Vidhana Soudha and Vikasa Soudha against BJP Operation Kamala. AICC General Secretary and Karnataka Congress in-charge K.C.Venugopal and Coordination committee chief Siddaramaiah also present.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X