ಶಾಸಕರು ಆಸ್ತಿ ವಿವರ ಸಲ್ಲಿಸಲು ಜೂನ್ 30 ಕೊನೆ ದಿನ

ಬೆಂಗಳೂರು, ಜೂನ್ 29: ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಲು ಜೂನ್‌ 30ರಂದು ಅಂತಿಮ ದಿನವಾಗಿದೆ.

ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ ಸದಸ್ಯರು 2017-18ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವದ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಾಗಿದೆ.
ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿದ ಮಾಹಿತಿಯನ್ನು ವಿಧಾನಸಭೆ ಸಚಿವಾಲಯಕ್ಕೆ ತಿಳಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಪ್ರತಿ ವರ್ಷ ತಮ್ಮ ಹಾಗೂ ತಮ್ಮ ಕುಟುಂಬದ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಾಗಿದೆ. ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984ರ ಕಲಂ 7ರ ಉಪಕಲಂ (1)ರಡಿ ಆಯಾ ವರ್ಷದ ಜೂನ್ 30ರೊಳಗೆ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕಾಗಿದೆ.

MLAs to declare asset details before tomorrow

ಮೇ 12ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆದಿತ್ತು, ರಾಜರಾಜೇಶ್ವರಿನಗರ ಹಾಗೂ ಜಯನಗರದಲ್ಲಿ ಹಲವು ಕಾರಣಗಳಿಂದ ಚುನಾವಣೆಯನ್ನು ಮುಂದೂಡಲಾಗಿತ್ತು. ರಾಜರಾಜೇಶ್ವರಿನಗರ ಕ್ಷೇತ್ರ ಚುನಾವಣೆ ಮೇ 28ಕ್ಕೆ ಹಾಗೂ ಜಯನಗರದಲ್ಲಿ ಜೂನ್‌ 11ಕ್ಕೆ ಚುನಾವಣೆ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+