ಪರಿಷತ್ ಚುನಾವಣೆ: ಕಾಂಗ್ರೆಸ್ 1, ಜೆಡಿಎಸ್ 2, ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು
ಕಲಬುರಗಿ, ಜೂನ್ 13: ಈಶಾನ್ಯ ಪದವೀಧರ ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಇಲ್ಲಿ ಜಯ ಸಾಧಿಸಿದ್ದಾರೆ. ಚಂದ್ರಶೇಖರ್ ಪಾಟೀಲ್ ಇಲ್ಲಿ ಕೇವಲ 321 ಮತಗಳಿಂದ ಜಯಶಾಲಿಯಾಗಿದ್ದಾರೆ.
ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಅ. ದೇವೇಗೌಡ ಗೆಲುವು ಸಾಧಿಸಿದ್ದಾರೆ. 3,864 ಮತಗಳಿಂದ ಅವರು ಜಯ ಸಾಧಿಸಿದ್ದಾರೆ.
ಇನ್ನುಳಿದಂತೆ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ನ ಮರಿತಿಬ್ಬೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್ ಗೆಲುವು ಸಾಧಿಸಿದ್ದಾರೆ.

ಒಟ್ಟಾರೆ ಕಾಂಗ್ರೆಸ್ 1, ಜೆಡಿಎಸ್ 2, ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.












Click it and Unblock the Notifications