ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿಯಿಂದ ಗೇಟ್ ಪಾಸ್

Subscribe to Oneindia Kannada

ಹುಬ್ಬಳ್ಳಿ, ಡಿಸೆಂಬರ್, 12: ವಿಧಾನಪರಿಷತ್ ಸ್ಥಾನಕ್ಕೆ ವಿಜಯಪುರ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಬಸನಗೌಡ ಪಾಟೀಲ್ ಅವರನ್ನು ಬಿಜೆಪಿ 6 ವರ್ಷಗಳ ಅವಧಿಗೆ ಉಚ್ಚಾಟಿಸಿದೆ.

ವಿಧಾನಪರಿಷತ್ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆಯಲು ನಿರಾಕರಿಸಿದಕ್ಕೆ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಶನಿವಾರ ತಿಳಿಸಿದ್ದಾರೆ.[ಬಸನಗೌಡ ಪಾಟೀಲ ಯತ್ನಾಳಗೆ ಆರು ತಿಂಗಳು ಶಿಕ್ಷೆ]

bjp

ಡಿಸೆಂಬರ್ 27ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ನ 25 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಯತ್ನಾಳ್ ಮನವೊಲಿಸಲು ಬಿಜೆಪಿ ನಾಯಕ, ಮಾಜಿ ಸಚಿವ ಗೋವಿಂದ ಕಾರಜೋಳ ಸಂಧಾನ ಸಭೆ ನಡೆಸಿದ್ದರು.[ಬಿಜೆಪಿ ಅಭ್ಯರ್ಥಿಗಳ ಪಟ್ಟಿ]

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಮತ್ತು ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂಬ ಬೇಡಿಕೆಯನ್ನು ಯತ್ನಾಳ್ ಇಟ್ಟಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Ex-minister BasanGouda Patil Yatnal has been suspended from BJP after he refused to withdraw his nomination for MLC Election, Vijayapura-Bagalakote constituency.
Please Wait while comments are loading...