ವಿಧಾನ ಪರಿಷತ್ ಫಲಿತಾಂಶ: ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಎಷ್ಟು ಸ್ಥಾನ?
ಬೆಂಗಳೂರು, ಡಿಸೆಂಬರ್ 14: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುತ್ತಿರುವುದು ಕಂಡು ಬಂದಿದೆ. ಬೆಳಗ್ಗೆ 11.30ರ ರಾಜ್ಯದ 25 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳ ಫಲಿತಾಂಶ ಬಹುತೇಕ ಹೊರ ಬಿದ್ದಿದೆ.
ರಾಜ್ಯದ 25 ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಬಿಜೆಪಿ 9 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿಗಳು 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಜಯಭೇರಿ ಬಾರಿಸಿರುವುದು ಗೊತ್ತಾಗಿದೆ. ರಾಜ್ಯದ 20 ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳಿಂದ 1 ಲಕ್ಷಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಶಾಸಕರು ಹಾಗೂ ಸಂಸದರು ಮತ ಚಲಾಯಿಸಿದ್ದಾರೆ. ಜನಪ್ರತಿನಿಧಿಗಳೇ ವೋಟ್ ಹಾಕಿದ್ದರಿಂದ ಶೇ.99ರಷ್ಟು ಪ್ರಮಾಣದಲ್ಲಿ ಮತದಾನ ನಡೆದಿತ್ತು.

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಕೊಡಗು ಕ್ಷೇತ್ರದ ಫಲಿತಾಂಶ ಮೊದಲಿಗೆ ಘೋಷಣೆ ಆಯಿತು. ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 105 ಮತಗಳ ಅಂತರದಿಂದ ಗೆಲುವು ಭರ್ಜರಿ ಜಯ ಗಳಿಸಿದರು. ಕೊಡಗು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನಾಯಕ ಎ. ಮಂಜು ಪುತ್ರರಾಗಿರುವ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡಗೆ ಸೋಲು ಕಂಡಿದ್ದಾರೆ. ಅದೇ ರೀತಿ ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷ ಮತ್ತು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂಬುದನ್ನು ಈ ವರದಿಯಲ್ಲಿ ಸಂಕ್ಷಿಪ್ತವಾಗಿ ವಿವರಿಸಲಾಗಿದೆ.
ಕೊಡಗು ಫರಿಷತ್ ಫಲಿತಾಂಶ:
ಬಿಜೆಪಿಯ ಸುಜಾ ಕುಶಾಲಪ್ಪರಿಗೆ 705 ಮತಗಳು ಮತಗಳು ಬಂದಿದ್ದು, ಮತ ಎಣಿಕೆ ಆರಂಭವಾದ ಎರಡೇ ತಾಸುಗಳಲ್ಲಿ ಫಲಿತಾಂಶ ಹೊರಬಂದಿದೆ. ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 105 ಮತಗಳ ಅಂತರದಿಂದ ಗೆಲುವು ಭರ್ಜರಿ ಜಯ ಗಳಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಆಗಿದ್ದ ಕಾಂಗ್ರೆಸ್‌ನ ಮಂಥರ್ ಗೌಡಗೆ 603 ಮತಗಳು ಬಂದಿದ್ದು, ಸೋಲು ಕಂಡಿದ್ದಾರೆ. ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದ ಎಂ.ಪಿ. ಸುಬ್ರಮಣಿ ಅವರ ಸಹೋದರ ಸುಜಾ ಕುಶಾಲಪ್ಪ ಆಗಿದ್ದಾರೆ. ಸುಬ್ರಮಣಿ ಅವರ ಬದಲಿಗೆ ಈ ಬಾರಿ ಸುಜಾ ಕುಶಾಲಪ್ಪ ಅವರಿಗೆ ಟಿಕೆಟ್ ನೀಡಲಾಗಿದ್ದು, ಇವರ ಮತ್ತೊಬ್ಬ ಸಹೋದರ ಅಪ್ಪಚ್ಚು ರಂಜನ್ ಮಡಿಕೇರಿ ಕ್ಷೇತ್ರದ ಶಾಸಕರಾಗಿದ್ದಾರೆ.
ಬೆಂಗಳೂರು ನಗರ ಪರಿಷತ್ ಕ್ಷೇತ್ರ:
ಬೆಂಗಳೂರು ನಗರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ್ ರೆಡ್ಡಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಪ್ (ಕೆಜಿಎಫ್ ಬಾಬು) ಸೋಲು ಕಂಡಿದ್ದಾರೆ. ಈ ಫಲಿತಾಂಶ ಹೊರ ಬೀಳುತ್ತಿದ್ದಂತೆ ಆಡಿ ಕಾರು ಬಿಟ್ಟು ಆಟೋ ರಿಕ್ಷಾ ಏರಿ ಮನೆಗೆ ತೆರಳಿದರು.
ಹಾಸನ ಪರಿಷತ್ ಕ್ಷೇತ್ರ:
ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಹಾಸನ ಕ್ಷೇತ್ರದಲ್ಲಿ ಜಯ ಗಳಿಸುವ ಮೂಲಕ ಜೆಡಿಎಸ್ ಮತ್ತೆ ಪ್ರಾಬಲ್ಯ ಸಾಧಿಸಿದೆ. ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯದ ಮತದಲ್ಲೇ ಗೆಲುವಿನ ಕೇಕೆ ಹಾಕಿದ್ದಾರೆ. ಜೆಡಿಎಸ್ ಅಭ್ಯರ್ಥಿಗೆ 2247 ಮತಗಳು, ಕಾಂಗ್ರೆಸ್ ಅಭ್ಯರ್ಥಿಗೆ 724 ಮತಗಳು ಮತ್ತು ಬಿಜೆಪಿ ಅಭ್ಯರ್ಥಿಗೆ 435 ಮತಗಳು ಲಭಿಸಿವೆ. ಡಾ. ಸೂರಜ್ ರೇವಣ್ಣ 1523 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಬಾರಿಸಿದ್ದಾರೆ.
ಬೀದರ್ ಪರಿಷತ್ ಕ್ಷೇತ್ರ:
ಬೀದರ್ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವಿನ ನಗೆ ಬೀರಿದ್ದಾರೆ.
ದಾವಣಗೆರೆ ಪರಿಷತ್ ಚುನಾವಣೆ ಫಲಿತಾಂಶ:
ದಾವಣಗೆರೆ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್. ನವೀನ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿ. ಸೋಮಶೇಖರ್ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ.ಎಸ್. ನವೀನ್ 354 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ 2617 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ 2263 ಮತಗಳನ್ನು ಪಡೆದಿದ್ದಾರೆ.
ಶಿವಮೊಗ್ಗ ಪರಿಷತ್ ಚುನಾವಣೆ:
ಶಿವಮೊಗ್ಗ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಗೆಲುವು ಸಾಧಿಸಿದ್ದಾರೆ. ಹಾಲಿ ಕಾಂಗ್ರೆಸ್ ಸದಸ್ಯ ಪ್ರಸನ್ನಕುಮಾರ್ ಸೋಲು ಕಂಡಿದ್ದಾರೆ.
ಬಳ್ಳಾರಿ ಫರಿಷತ್ ಚುನಾವಣೆ ಫಲಿತಾಂಶ:
ಬಳ್ಳಾರಿ ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ವೈ ಎಂ ಸತೀಶ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ ಸಿ ಕೊಂಡಯ್ಯ ಸೋಲು ಕಂಡಿದ್ದಾರೆ.
ಉತ್ತರ ಕನ್ನಡ ಪರಿಷತ್ ಚುನಾವಣೆ ಫಲಿತಾಂಶ:
ಉತ್ತರ ಕನ್ನಡ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಸಾಧಿಸಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications