Karnataka MLC Election: ಕಾಂಗ್ರೆಸ್​ನಿಂದ ಆಯನೂರು ಮಂಜುನಾಥ್​​ಗೆ ಟಿಕೆಟ್​​!

ಬೆಂಗಳೂರು , ಮಾರ್ಚ್‌ 22: ಲೋಕಸಭಾ ಚುನಾವಣೆ ಕಾಂಗ್ರೆಸ್‌ ಹೈಕಮಾಂಡ್‌ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಭರ್ಜರಿ ತಯಾರಿ ನಡೆಸಿದೆ. ಇತ್ತ ವಿಧಾನ ಪರಿಷತ್​ನ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯನ್ನು ಗುರುವಾರ ರಾತ್ರಿ ಘೋಷಿಸಲಾಗಿದೆ.

ಹೌದು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಹೈಕಮಾಂಡ್‌ ಗೆ ಅಭ್ಯರ್ಥಿಗಳ ಆಯ್ಕೆಯೇ ದೊಡ್ಡ ತಲೆನೋವಾಗಿದೆ. ಮೊದಲ ಪಟ್ಟಿಯಲ್ಲಿ ಏಳು ಜನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದ ಕಾಂಗ್ರೆಸ್‌, ಮೂರನೇ ಪಟ್ಟಿಯಲ್ಲಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದ್ದು, ಈ ನಡುವೆ ವಿಧಾನ ಪರಿಷತ್​ನ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಗೂ ಅಭ್ಯರ್ಥಿಯನ್ನ ಘೋಷಿಸಿದೆ.

MLC Elections congress gives ticket to ayanur manjunath for south west graduates constituency

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನಲೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ್ ಅವರಿಗೆ ಹೈಕಮಾಂಡ್​ ಮಣೆ ಹಾಕಿದೆ. ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯನ್ನು ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಡುವೆ ಪ್ರಕಟಿಸಿ ಸಿದ್ಧತೆ ಕಾಂಗ್ರೆಸ್‌ ಆರಂಭಿಸಿದೆ.

ಲೋಕಸಭೆ ಚುನಾವಣೆ ತಯಾರಿ ನಡೆಯೇ ನೈಋತ್ಯ ಶಿಕ್ಷಕರ ಕ್ಷೇತ್ರ ಆಕಾಂಕ್ಷಿಗಳು ತಕ್ಷಣವೇ ಅಭ್ಯರ್ಥಿಗಳನ್ನು ಘೋಷಿಸಿ ಎಂದು ಸಾಕಷ್ಟು ಒತ್ತಡವನ್ನ ಹಾಕಿದ್ರು. ಅಲ್ಲದೇ ತೀವ್ರ ಪೈಪೋಟಿ ಇದ್ದ ಕಾರಣ ಅಂತಿಮ ಲೆಕ್ಕಾಚಾರ ಹಾಕಿ ಆಯನೂರು ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಟಿಕೆಟ್ ನೀಡಿದೆ.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಆಯನೂರು ಮಂಜುನಾಥ್​ ಕಾಂಗ್ರೆಸ್ ಸೇರುವಾಗಲೇ ಟಿಕೆಟ್ ಬೇಡಿಕೆ ಇಟ್ಟಿದ್ದರು. ಹೀಗಾಗಿ ಕೊಟ್ಟ ಮಾತಿನಂತೆ ಕಾಂಗ್ರೆಸ್‌ ಆಯನೂರು ಮಂಜುನಾಥ್‌ ಅವರಿಗೆ ಟಿಕೆಟ್ ನೀಡಿದೆ.

ನೈರುತ್ಯ ಪದವೀಧರರ ಕ್ಷೇತ್ರವು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ(ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕು ಮಾತ್ರ) ಸೇರಿಕೊಂಡು ಒಟ್ಟಾರೆ 5 ಲೋಕಸಭೆ, 30 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ ಹೊಂದಿದೆ. ಕಾಂಗ್ರೆಸ್‌ ಹೈಕಮಾಂಡ್‌ ಅಭ್ಯರ್ಥಿಗಳ ಕಣಕ್ಕಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+