ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರ್ಗಿ ಹತ್ಯೆ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್, 16 : ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಕೊಟ್ಟವರಿಗೆ 5 ಲಕ್ಷ ರೂ.ಬಹುಮಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಆ.30ರಂದು ಧಾರವಾಡದ ಕಲ್ಯಾಣ ನಗರದಲ್ಲಿರುವ ನಿವಾಸದಲ್ಲಿ ಎಂ.ಎಂ.ಕಲಬುರ್ಗಿ ಅವರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಸರ್ಕಾರ ಈ ಪ್ರಕರಣದ ತನಿಖೆಯಲ್ಲಿ ಸಿಐಡಿಗೆ ವಹಿಸಿದೆ. ಆದರೆ, 15 ದಿನಗಳು ಕಳೆದರೂ ಹಂತಕರ ಕುರಿತು ಮಾಹಿತಿ ಲಭ್ಯವಾಗಿಲ್ಲ. [ಕಲಬುರ್ಗಿ ಹತ್ಯೆ : ಸಿಐಡಿ ತನಿಖೆ]

siddaramaiah

ಎಂ.ಎಂ.ಕಲಬುರ್ಗಿ ಅವರ ಕುಟುಂಬದವರು ಮತ್ತು ಸಾಹಿತಿಗಳ ನಿಯೋಗ ಮಂಗಳವಾರ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿತು. ಹತ್ಯೆ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಬೇಕೆಂದು ಮನವಿ ಮಾಡಿತು. [ಕಲಬುರ್ಗಿ ಹತ್ಯೆ : ತನಿಖೆಯ ಪ್ರಗತಿ ಏನು?]

ನಿಯೋಗದ ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಹಂತಕರ ಸುಳಿವು ಕೊಟ್ಟವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ತಿಳಿಸಿದರು. [ಮೂರು ಹತ್ಯೆಗಳ ನಡುವೆ ಸಾಮ್ಯತೆ]

ನ್ಯಾಯ ಒದಗಿಸಲು ಮನವಿ : ಕಲಬುರ್ಗಿ ಅವರ ಹತ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ಮಂಗಳವಾರ ಸಮಾನ ಮನಸ್ಕ ಸಂಘಟನೆಗಳ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ಕಲಬುರ್ಗಿ ಅವರ ಪುತ್ರ ಶ್ರೀವಿಜಯ್ ಅವರು ಶೀಘ್ರ ತನಿಖೆಯನ್ನು ಪೂರ್ಣಗೊಳಿಸಿ ನ್ಯಾಯ ಒದಗಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಸಿಬಿಐ ತನಿಖೆ ಇಲ್ಲ : ಕರ್ನಾಟಕ ಸರ್ಕಾರ ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ನಡೆಸುವಂತೆ ಸಿಬಿಐಗೆ ಪತ್ರ ಬರೆಯಲು ನಿರ್ಧರಿಸಿತ್ತು. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ, ಈಗ ಸಿಐಡಿ ತನಿಖೆಯನ್ನೇ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

English summary
Karnataka Chief Minister Siddaramaiah on Tuesday announced a reward of Rs 5 lakh for any person who provides information about M.M.Kalburgi’s killers. Prof. M.M. Kalburgi who was shot at his residence at Kalyan Nagar Dharwad on August 30th morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X