• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಂ.ಎಂ.ಕಲಬುರ್ಗಿ ಹತ್ಯೆ, ಪ್ರಮುಖ ಆರೋಪಿ ಬಂಧಿಸಿದ ಎಸ್‌ಐಟಿ

|

ಬೆಂಗಳೂರು, ಜೂನ್ 02 : ಹಿರಿಯ ಸಂಶೋಧರ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಪ್ರಮುಖ ಆರೋಪಿಯನ್ನು ಬಂಧಿಸಿದೆ. 2015ರಲ್ಲಿ ಎಂ.ಎಂ.ಕಲಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಪ್ರವೀಣ್ ಪ್ರಕಾಶ್ ಚತುರ್ (27) ಎಂಬ ಆರೋಪಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜೂನ್ 7ರ ತನಕ ಎಸ್‌ಐಟಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಕಲಬುರ್ಗಿ ಹತ್ಯೆ ಎಸ್‌ಐಟಿ ತನಿಖೆಗೆ ಸುಪ್ರೀಂ ಆದೇಶ

ಬೆಳಗಾವಿಯ ನಿವಾಸಿ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಅಮೋಲ್ ಕಾಳೆಯನ್ನು ಎಸ್‌ಐಟಿ ವಿಚಾರಣೆ ನಡೆಸಿದ್ದಾಗ ಪ್ರವೀಣ್ ಹೆಸರನ್ನು ಆತ ಹೇಳಿದ್ದ.

ಕಲ್ಬುರ್ಗಿ, ಗೌರಿ ಹತ್ಯೆಗೆ ಸಾಮ್ಯತೆ ಇದೆಯೇ? ಸಿಬಿಐಗೆ ಸುಪ್ರೀಂ ಪ್ರಶ್ನೆ

ಎಸ್‌ಐಟಿ ತಂಡ ಬೆಳಗಾವಿಯಲ್ಲಿ ಪ್ರವೀಣ್‌ನನ್ನು ಬಂಧಿಸಿ, ಧಾರವಾಡದಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಬೆಂಗಳೂರಿಗೆ ಕರೆತರಲಾಗಿದೆ.

ಸಾಹಿತಿ ಎಂ.ಎಂ.ಕಲಬುರ್ಗಿ ಮೇಲೆ ಗುಂಡಿನ ದಾಳಿ, ಸಾವು

ಗೌರಿ ಲಂಕೇಶ್ ಮತ್ತು ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಅವರು ಬಂಧನವನ್ನು ಖಚಿತಪಡಿಸಿದ್ದಾರೆ. 'ಆರೋಪಿ ವಿಚಾರಣೆ ಮುಗಿದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುತ್ತದೆ' ಎಂದು ಹೇಳಿದ್ದಾರೆ.

ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಮಾಡಬೇಕು. ಧಾರವಾಡದಲ್ಲಿರುವ ಕರ್ನಾಟಕ ಹೈಕೋರ್ಟ್‌ ಸಂಚಾರಿ ಪೀಠ ಅದರ ಮೇಲ್ವಿಚಾರಣೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.

2015ರ ಆಗಸ್ಟ್ 30ರಂದು ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಧಾರವಾಡದ ಕಲ್ಯಾಣ ನಗರದಲ್ಲಿರುವ ಅವರ ಮನೆಗೆ ಆಗಮಿಸಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ನಾಲ್ಕು ವರ್ಷಗಳಿಂದ ತನಿಖೆ ನಡೆಯುತ್ತಲೇ ಇದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The special investigation team (SIT) probing the killing of Kannada writer Prof. M.M.Kalburgi arrested main accused in Belagavi. Praveen Kumar (27) now in SIT custody. M.M Kalburgi was shot dead at his residence in Dharwad, Karnataka in 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more