ಈ ನೌಕರರಿಗೆ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು, ಜೂನ್ 14: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಾದ್ಯಂತ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಪುಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕದ ಎಲ್ಲಾ ಆರೋಗ್ಯ ಸಂಸ್ಥೆಗಳನ್ನು ಒಳಗೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಾದ್ಯಂತ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ದಿನಾಂಕ : 01/07/2025 ರಿಂದ ಕಡ್ಡಾಯವಾಗಿ ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯು ಮೀಸಲಾದ ಹಾರ್ಡ್‌ವೇ ಸಾಧನಗಳ ಮೂಲಕ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣೀಕರಣವನ್ನು ಅವಲಂಭಿಸಿದೆ. ಹಾರ್ಡ್ ಸಾಧನಗಳಿಗೆ ಆಗಾಗ್ಗೆ ನಿರ್ವಹಣೆ, ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದ್ದು, ಇದು ಇಲಾಖೆಗೆ ಗಣನೀಯ ಪುನರಾವರ್ತಿತ ವೆಚ್ಚಗಳಿಗೆ ಕಾರಣವಾಗಿದೆ.

ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದಾಗಿ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಿಬ್ಬಂದಿ ಮತ್ತು ದೂರದ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಅಸಮರ್ಥತೆಗಳನ್ನು ಸೃಷ್ಟಿಸುತ್ತದೆ. ಈ ವ್ಯವಸ್ಥೆಯ ಸೀಮಿತ ವಿಸ್ತರಣೆ, ಅಂದರೆ ಹೊಸ ಸೌಲಭ್ಯಗಳಿಗೆ ವಿಸ್ತರಿಸಲು ಹಾರ್ಡ್ ಹೂಡಿಕೆಗಳು ಮತ್ತು ಭೌತಿಕ ಸ್ಥಾಪನಾ ಪ್ರಕ್ರಿಯೆಗಳ ಅಗತ್ಯವಿದೆ. ಇದಲ್ಲದೆ, ಹಾರ್ಡ್‌ವೇರ್ ವೈಫಲ್ಯಗಳು ಮತ್ತು ಸಂಪರ್ಕ ಸಮಸ್ಯೆಗಳು ಆಗಾಗ್ಗೆ ವ್ಯವಸ್ಥೆಯ ಡೌನ್‌ಟೈಮ್‌ಗೆ ಕಾರಣವಾಗುತ್ತದೆ ಎಂದಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ, 2025-26ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-152(ii)ರಲ್ಲಿ "ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಘೋಷಿಸಲಾಗಿದೆ. ಅದರಂತೆ ಕರ್ನಾಟಕದ ಎಲ್ಲಾ 12000 ಆರೋಗ್ಯ ಸಂಸ್ಥೆಗಳನ್ನು ಒಳಗೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಾದ್ಯಂತ ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (KAMS) ಅನುಷ್ಠಾನಗೊಳಿಸುವುದನ್ನು ಪುಸ್ತಾಪಿಸಲಾಗಿದ್ದು, ವ್ಯವಸ್ಥೆಯು ಆಧಾರ್ ಆಧಾರಿತ ಮುಖ ಪ್ರಮಾಣೀಕರಣ, ಭೌಗೋಳಿಕ ನಿರ್ದಿಷ್ಟಾಂಕಗಳೊಳಗೆ ಕ್ಷೇತ್ರದಲ್ಲಿ ಹಾಜರಾತಿ ಗುರುತಿಸಲು ಸೌಲಭ್ಯವನ್ನು ನೀಡುತ್ತದೆ.
ಮೊಬೈಲ್ ಆಧಾರಿತ ಪರಿಹಾರವು ಹಾರ್ಡ್‌ವೇರ್‌ನ ಅಗತ್ಯವನ್ನು ತೆಗೆದುಹಾಕುತ್ತದೆ ಮತ್ತು ಕಾರ್ಯಾಚರಣೆಯ ವೆಚ್ಚಗಳನ್ನು ಕಡಿಮೆ ಮಾಡಲಿದೆ. ಹಾಜರಾತಿ ಮೇಲ್ವಿಚಾರಣೆ ಮತ್ತು ಕಾರ್ಯಬಲ ನಿರ್ವಹಣೆಯನ್ನು ಸುಧಾರಿಸಲಿದೆ ಎಂದು, ಆದ್ದರಿಂದ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಕುರಿತಂತೆ ಕೋರಲಾಗಿದೆ.
ಈ ಯೋಜನೆಯು ಸ್ವತಂತ್ರವಾಗಿ ಇ-ಆಡಳಿತ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಲಿದ್ದು, ಆದ್ದರಿಂದ ಕರ್ನಾಟಕದ ಎಲ್ಲಾ ಆರೋಗ್ಯ ಸಂಸ್ಥೆಗಳನ್ನೊಳಗೊಂಡಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಾದ್ಯಂತ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪುಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕದ ಎಲ್ಲಾ ಆರೋಗ್ಯ ಸಂಸ್ಥೆಗಳನ್ನು ಒಳಗೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಾದ್ಯಂತ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ದಿನಾಂಕ : 01/07/2025 ರಿಂದ ಕಡ್ಡಾಯವಾಗಿ ಜಾರಿಗೊಳಿಸಿ ಆದೇಶಿಸಿದ್ದಾರೆ. ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ : ಆಇ 411 ವೆಚ್ಚ -5/2025, ದಿನಾಂಕ : 21/05/2025ರಲ್ಲಿ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಟಿಪ್ಪಣಿ ಸಂಖ್ಯೆ : PDS-HDD/100/2025, ದಿನಾಂಕ : 02/06/2025ರಲ್ಲಿ ನೀಡಿರುವ ಸಹಮತಿ ಹಾಗೂ ಸಚಿವ ಸಂಪುಟವು ಪ್ರಕರಣ ಸಂಖ್ಯೆ /441/2025, ದಿನಾಂಕ : 05/06/20250 ನೀಡಿರುವ ಅನುಮೋದನೆಯೊಂದಿಗೆ ಹೊರಡಿಸಿದೆ.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್












Click it and Unblock the Notifications