Government School Teachers: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹಾಜರಿ ಕುರಿತು ಸರ್ಕಾರ ಮಹತ್ವದ ಆದೇಶ
ಬೆಂಗಳೂರು, ಡಿಸೆಂಬರ್ 21: ರಾಜ್ಯದಲ್ಲಿ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಹತ್ವದ ಆದೇಶಗಳನ್ನು ಹೊರಹಾಕುತ್ತಲಿರುತ್ತದೆ. ಇದೀಗ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಕುರಿತು ಆದೇಶವೊಂದನ್ನು ಹೊರಡಿಸಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಪ್ರತಿ ದಿನ ಶಾಲಾ ಶಿಕ್ಷಕರು, ಸಿಬ್ಬಂದಿಗಳು ತಪ್ಪದೇ ಹಾಜರಾತಿಯನ್ನು ನಮೂದಿಸುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯಾ ವಿಭಾಗದ ಉಪ ನಿರ್ದೇಶಕರು ಸುತ್ತೋಲೆ ಹೊರಡಿಸಿದೆ.

ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವಂತೆ ತಿಳಿಸಲಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಿಮ್ಮ ತಾಲ್ಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಮೊಬೈಲ್ ಆಧಾರಿತ ಹಾಜರಾತಿ ತಂತ್ರಾಂಶವನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
ಈ ಮೂಲಕ ಸದರಿ ತಂತ್ರಾಂಶದಲ್ಲಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿ ಸರ್ಕಾರಿ ನೌಕರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಪ್ರತಿದಿನದ ಹಾಜರಾತಿಯನ್ನು ಲಾಗಿನ್ ಹಾಗೂ ಲಾಗ್ ಔಟ್ ಆಗಬೇಕಾಗುತ್ತದೆ. ಈ ಪ್ರಕ್ರಿಯೆಯನ್ನು ಡಿಸೆಂಬರ್ 20ರ ಶನಿವಾರದಿಂದಲೇ ಪಾಲಿಸುವಂತೆ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯಸ್ಥರಿಗೆ ತಿಳಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯಲ್ಲಿ ಹಾಜರಾತಿ ನಮೂದಿಸುತ್ತಿರುವ ಬಗ್ಗೆ ವರದಿ ಪಡೆಯಬೇಕು. ನಿರಂತರ ಇದನ್ನು ಪಾಲನೆ ಮಾಡುವ ಮೂಲಕ ಜಿಲ್ಲಾ ಕಚೇರಿಗೆ ವರದಿ ಮಾಡುವಂತೆ ಸೂಚಿಸಲಾಗಿದೆ. ಒಂದು ವೇಳೆ ತಂತ್ರಾಶದ ಬಳಕೆಯಲ್ಲಿ ಸಮಸ್ಯೆ ಕಂಡುಬಂದರೆ, ನಿಮ್ಮ ತಾಲ್ಲೂಕಿನಿಂದ ನೇಮಕಗೊಂಡಿರುವ ತಾಲ್ಲೂಕು ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಈ ಜ್ಞಾಪನದೊಂದಿಗೆ ಲಗತ್ತಿಸಿರುವ ಪಿ.ಪಿ.ಟಿ.ಯನ್ನು ವೀಕ್ಷಣೆ ಮಾಡುವಂತೆಯೂ ತಿಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ಶುಭಸುದ್ದಿ: ಇತ್ತೀಚೆಗಷ್ಟೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು 1-12 ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶುಭಸುದ್ದಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರ 1 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಕೊಪ್ಪ ತಾಲ್ಲೂಕಿನ ಮೆಲ್ಪಾಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಹೊಸದಾಗಿ ನಿರ್ಮಾಣ ಮಾಡಲಾದ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಈ ಮಹತ್ವದ ಘೋಷಣೆಯನ್ನು ಸಚಿವ ಬಂಗಾರಪ್ಪ ಅವರು ಮಾಡಿದರು. 10ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮೊಟ್ಟೆಗಳ ಪೂರೈಕೆಯನ್ನ ವಿಸ್ತರಣೆ ಮಾಡುವುರ ಜೊತೆಗೆ, ಶೂ ಮತ್ತು ಸಾಕ್ಸ್‌ಗಳ ಪೂರೈಕೆ ಹಾಗೂ ಉಚಿತ ನೋಟ್‌ಬುಕ್ ಹಾಗೂ ಪಠ್ಯಪುಸ್ತಕಗಳನ್ನು ಕೊಡಲಾಗುವುದು ಎಂದು ಹೇಳಿದರು.
ವಿದ್ಯಾರ್ಥಿಗಳ ಪೋಷಣೆಯನ್ನು ಸುಧಾರಣೆ ಮಾಡಲು ಹಾಲು ಮತ್ತು ರಾಗಿ ಜೊತೆಗೆ ಮೊಟ್ಟೆಗಳನ್ನು ಒದಗಿಸಲಾಗುತ್ತದೆ. ರಾಜ್ಯದಲ್ಲಿ ಸುಮಾರು 57,00,000 ವಿದ್ಯಾರ್ಥಿಗಳಿಗೆ ಪ್ರಸ್ತುತ ಮಧ್ಯಾಹ್ನದ ಊಟವನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಇನ್ನೂ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಭರವಸೆಯನ್ನು ಸರ್ಕಾರ ಉಳಿಸಿಕೊಂಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ತಿಂಗಳೊಳಗೆ 13,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಉಳಿದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮತ್ತೊಂದು ಸುತ್ತಿನ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲಾಗುವುದು. ಈ ಶೈಕ್ಷಣಿಕ ವರ್ಷದಲ್ಲಿ 51,000 ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ಆರಂಭ ಆಗಿದೆ. 10ನೇ ತರಗತಿಯ ಪರೀಕ್ಷಾ ವ್ಯವಸ್ಥೆ ಬದಲಾವಣೆ ಆಗಿದೆ. ಪಿಯುಸಿಯ ಮೊದಲ ವರ್ಷಕ್ಕೆ ಪ್ರವೇಶಿಸಲು 1,16,000 ವಿದ್ಯಾರ್ಥಿಗಳು ಎರಡನೇ ಮತ್ತು ಮೂರನೇ ಪೂರಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದರು. 2025ರಲ್ಲಿ 625 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ 51ಕ್ಕೆ ಏರಿಕೆ ಆಗಿದೆ. ನಮ್ಮ ಸರ್ಕಾರವು 6,000 ಕರ್ನಾಟಕ ಸಾರ್ವಜನಿಕ ಶಾಲೆಗಳನ್ನು ಪ್ರಾರಂಭ ಮಾಡಲು ಯೋಚಿಸುತ್ತಿದೆ ಎಂದು ಹೇಳಿದ್ದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications