ಮೊಬೈಲ್ ಆಡಳಿತಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ ಸರ್ಕಾರ
ಬೆಂಗಳೂರು, ಡಿ.7: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಗೆ ಸೋಮವಾರ ಅಧಿಕೃತವಾಗಿ ಚಾಲನೆ ಸಿಗಲಿದೆ. ತಂತ್ರಜ್ಞಾನ ಬಳಕೆ ಮೂಲಕ ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೊಬೈಲ್ ಆಡಳಿತಕ್ಕೆ ಸಿದ್ದರಾಮಯ್ಯ ಅವರು ನಾಳೆಯಿಂದ ಕಾಲಿಡಲಿದ್ದಾರೆ. ಬಹುನಿರೀಕ್ಷಿತ ಎಂ ಒನ್ ಅಪ್ಲಿಕೇಷನ್ ಲೋಕಾರ್ಪಣೆಗೆ ಸಜ್ಜಾಗಿದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸೋಮವಾರ ಮಧ್ಯಾಹ್ನ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ಮೊಬೈಲ್ ಆಡಳಿತಕ್ಕೆ ಚಾಲನೆ ನೀಡಲಿದ್ದಾರೆ. ಇ-ಆಡಳಿತದಲ್ಲಿ ಯಶಸ್ಸು ಸಾಧಿಸಿರುವ ಕರ್ನಾಟಕ ಸರ್ಕಾರ ಮೊಬೈಲ್ ಆಡಳಿತ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಮುಂದಾಗಿದೆ.
ಸಾರ್ವಜನಿಕರು ಕುಳಿತಲ್ಲಿಯೇ ತಮ್ಮ ಮೊಬೈಲ್ ಮೂಲಕ ನೀರು, ವಿದ್ಯುತ್, ದೂರವಾಣಿ ಬಿಲ್‌ಗಳನ್ನು ಪಾವತಿಸಬಹುದು. ಬಸ್ ಮಾರ್ಗಗಳು, ಸಮಯದ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿ ಸೇರಿದಂತೆ ಸುಮಾರು 400ಕ್ಕೂ ಹೆಚ್ಚು ಸೇವೆಗಳನ್ನು ಮೊಬೈಲ್ ಆಡಳಿತದ ಮೂಲಕ ಒದಗಿಸಲು ರಾಜ್ಯಸರ್ಕಾರ ಮುಂದಾಗಿದೆ.

ದೇಶದಲ್ಲೇ ಪ್ರಥಮ: 2013ರಲ್ಲಿ ಆನ್ ಮೊಬೈಲ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯಸರ್ಕಾರ ಮೊಬೈಲ್ ಆಡಳಿತವನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿತ್ತು. ಉತ್ತಮ ಪ್ರತಿಕ್ರಿಯೆ ಬಂದ ಹಿನ್ನೆಲೆಯಲ್ಲಿ ಎಲ್ಲ ಸೇವೆಗಳಿಗೂ ವಿಸ್ತರಣೆ ಮಾಡಲು ಮುಂದಾಗಿದೆ.
ಮೊಬೈಲ್ ಆಡಳಿತ (ಎಂ-ಆಡಳಿತ)ದ ಮೂಲಕ ಜನರ ಸಮಯ ಉಳಿಸುವುದರ ಜತೆಗೆ ಕರಾರುವಕ್ಕು ಮತ್ತು ಉತ್ಕೃಷ್ಟ ಸೇವೆ ಒದಗಿಸಬಹುದು. ದೇಶದಲ್ಲೇ ಮೊದಲ ಬಾರಿಗೆ ಎಂ-ಆಡಳಿತವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬೆಂಗಳೂರಿನಲ್ಲಿ ಮೂರು ಗಂಟೆ ಸುಮಾರಿಗೆ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ರಾಷ್ಟ್ರಪತಿಯವರು ಮಧ್ಯಾಹ್ನ 2.15ಕ್ಕೆ ಯಲಹಂಕದ ವಾಯುಸೇನೆ ನೆಲೆಗೆ ಆಗಮಿಸಲಿದ್ದಾರೆ. ನಾಳಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಟಿ.ಬಿ.ಜಯಚಂದ್ರ, ಎಸ್.ಆರ್.ಪಾಟೀಲ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
— Karnataka Mobile One (@Mobile_One_Kar) December 7, 2014 ಮೊಬೈಲ್ ಒನ್ ಕುರಿತು ಒಂದಷ್ಟು : ಸರ್ಕಾರ, ಖಾಸಗಿ ವಲಯದ ವಿವಿಧ ರೀತಿಯ ಸೇವೆಯನ್ನು ಮೊಬೈಲ್ ಮೂಲಕ ನೀಡುವ ಯೋಜನೆ ಇದಾಗಿದೆ. ಸರ್ಕಾರದ 37 ಇಲಾಖೆಗಳ 637 ಸೇವೆಗಳು G2C) ಮೊಬೈಲ್ ಮೂಲಕವೇ ಲಭ್ಯವಾಗಲಿವೆ. ಜೊತೆಗೆ ಉದ್ಯಮಿಗಳಿಂದ ಗ್ರಾಹಕರನ್ನು ತಲುಪಲು B2C ವಿಭಾಗದಲ್ಲಿಸುಮಾರು 3,644 ಸೇವೆಗಳನ್ನು ಒದಗಿಸಲಾಗುತ್ತಿದೆ. ಇದು ಬಹುಶಃ ವಿಶ್ವದಲ್ಲೇ ಅತ್ಯಧಿಕ ಸೇವೆ ನೀಡುತ್ತಿರುವ ಅಪ್ಲಿಕೇಷನ್ ಆಗಿದ್ದು, ಎಲ್ಲವೂ ಸಮರ್ಥವಾಗಿ ಕಾರ್ಯ ನಿರ್ವಹಿಸಿದರೆ ಸಿದ್ದರಾಮಯ್ಯ ಅವರು ಹೊಸ ಇತಿಹಾಸ ಸೃಷ್ಟಿಸುವುದರಲ್ಲಿ ಸಂಶಯವೇ ಇಲ್ಲ.
ಮೋದಿ ಮಾದರಿ ಭಾಷಣ ಪ್ರಸಾರ : 'ಕರ್ನಾಟಕ ಮೊಬೈಲ್ ಒನ್' ಸೇವೆ ಉದ್ಘಾಟನಾ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುವ ಭಾಷಣವನ್ನು ಮೈಸೂರಿನಲ್ಲಿ 3ಡಿ ತಂತ್ರಜ್ಞಾನದ ಮೂಲಕ ಪ್ರಸಾರ ಮಾಡಲು ಸಿದ್ದತೆ ನಡೆಸಲಾಗಿತ್ತು. ಅದರೆ, ಈ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ.
— Karnataka Mobile One (@Mobile_One_Kar) December 7, 2014 ಪ್ರಧಾನಿ ಕಿವಿಗೂ ಬಿದ್ದ ಎಂ ಒನ್ ಅಪ್: ದೇಶದ ಎಲ್ಲಾ ಮುಖ್ಯಮಂತ್ರಿಗಳ ಸಭೆ ಕರೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಯೋಜನಾ ಆಯೋಗ ಬದಲಾಯಿಸಿ ಹೊಸ ಮಾದರಿ ಮೂರು ಸ್ತರದ ಟೀಂ ಇಂಡಿಯಾ ಕಟ್ಟುವ ಕಲ್ಪನೆಯನ್ನು ಹೊರಹಾಕಿದರು. ಇದಕ್ಕೆ ನಿರೀಕ್ಷೆಯಂತೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂಗಳು ವಿರೋಧ ವ್ಯಕ್ತಪಡಿಸಿ ಹಲವು ದಶಕಗಳಿಂದ ಜಾರಿಯಲ್ಲಿರುವ ನೆಹರೂ ಅವರ ಕನಸಿನ ಯೋಜನಾ ಆಯೋಗವನ್ನು ಮುಂದುವರೆಸುವಂತೆ ಮನವಿ ಮಾಡಿದರು.
ಸಭೆ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತನಾಡಿ ಅವರಿಗೆ ಕರ್ನಾಟಕ ಮೊಬೈಲ್ ಆಡಳಿತ ಯೋಜನೆ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್











Click it and Unblock the Notifications