Get Updates
Get notified of breaking news, exclusive insights, and must-see stories!

Mock Drill: ಕರ್ನಾಟಕದ ಮೂರು ಕಡೆ ಇಂದು ಭದ್ರತಾ ತಾಲೀಮು, ಎಲ್ಲೆಲ್ಲಿ ಹೇಗೆ ನಡೆಯುತ್ತೆ?

ಪೆಹಲ್ಗಾಮ್‌ ಭಯೋತ್ಪಾದಕ ದಾಳಿ ನಂತರ ಪಾಕ್‌ ಜೊತೆ ಯುದ್ಧದ ಸನ್ನಿವೇಶ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಬುಧವಾರ (ಮೇ 7) ಭದ್ರತಾ ಮಾಕ್‌ ಡ್ರಿಲ್‌ ನಡೆಯಲಿದೆ. ಗೃಹ ಸಚಿವಾಲಯದ ನಿರ್ದೇಶನದಂತೆ ಕರ್ನಾಟಕದ ಮೂರು ಸ್ಥಳಗಳಲ್ಲಿ ಅಣಕು ಕವಾಯತುಗಳನ್ನು ನಡೆಸಲಾಗುವುದು ಎಂದು ಕರ್ನಾಟಕ ಪೊಲೀಸ್ ಇಲಾಖೆ ಹೇಳಿದೆ. ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕರು ಏನು ಮಾಡಬೇಕು ಎಂಬ ವಿಷಯಗಳ ಕುರಿತು ಕೇಂದ್ರ ಸರ್ಕಾರವು ಈ ಮಾಕ್‌ ಡ್ರಿಲ್‌ ಮೂಲಕ ಮಾರ್ಗಸೂಚಿಗಳನ್ನು ನೀಡುತ್ತಿದೆ. ಇಂದು ಸಂಜೆ 4 ಗಂಟೆಗೆ ಈ ಮಾಕ್‌ ಡ್ರಿಲ್‌ ನಡೆಯಲಿದೆ.

ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ ಗೃಹರಕ್ಷಕ ದಳ, ನಾಗರಿಕ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕಮಾಂಡೆಂಟ್ ಜನರಲ್ ಮತ್ತು ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿರುವಂತೆ ಮೇ 7ರಂದು ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ಅಣಕು ಕವಾಯತುಗಳು ನಡೆಯಲಿವೆ. ಎನ್‌ಸಿಸಿ, ಎನ್‌ಎಸ್‌ಎಸ್, ನಾಗರಿಕ ರಕ್ಷಣಾ ಸಿಬ್ಬಂದಿ ಮತ್ತು ವೈದ್ಯಕೀಯ ವೃತ್ತಿಪರರು ಈ ಅಣಕು ಕವಾಯತುಗಳಲ್ಲಿ ಭಾಗವಹಿಸಲಿದ್ದಾರೆ. ಪೊಲೀಸ್ ಠಾಣೆಗಳು ಮತ್ತು ಅಗ್ನಿಶಾಮಕ ಠಾಣೆಗಳು ಸೇರಿದಂತೆ 35 ಸ್ಥಳಗಳಲ್ಲಿ ಸೈರನ್‌ಗಳನ್ನು ಅಳವಡಿಸಲಾಗಿದೆ.

Mock Drills In Karnataka On May 7 Amid India-Pakistan War Threat

ದೇಶದ 244 ಸಿವಿಲ್ ಡಿಫೆನ್ಸ್ ಜಿಲ್ಲೆಗಳಲ್ಲಿ ನಾಗರಿಕರ ರಕ್ಷಣೆ ಸಂಬಂಧ ಭದ್ರತಾ ತಾಲೀಮು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ಕೊಟ್ಟಿದೆ. ಯುದ್ಧದ ದಾಳಿ ಸಂದರ್ಭದಲ್ಲಿ ಜನರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎನ್ನುವುದರ ಬಗ್ಗೆ ಅಣಕು ತಾಲೀಮು ನಡೆಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು, ನಾಗರಿಕರ ರಕ್ಷಣೆಗಾಗಿ ಪ್ರಾತ್ಯಕ್ಷಿಕವಾಗಿ ತರಬೇತಿ ನೀಡುವಂತೆ ಸಿವಿಲ್‌ ಡಿಫೆನ್ಸ್‌ಗಳಿಗೆ ಸೂಚನೆ ನೀಡಲಾಗಿದೆ.

ಯುದ್ಧದ ಸನ್ನಿವೇಶದಲ್ಲಿ ನಾಗರಿಕರು ವಾಯುದಾಳಿಯ ಎಚ್ಚರಿಕೆ ಸೈರನ್ (ಸದ್ದು) ಅರಿತುಕೊಳ್ಳುವುದು, ದಾಳಿಯ ಸಂದರ್ಭದಲ್ಲಿ ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂದು ನಾಗರಿಕರಿಗೆ ತರಬೇತಿ ನೀಡುವಂತೆ ಕೇಂದ್ರ ಹೇಳಿದೆ. ಇದರ ಜೊತೆಗೆ, ಪ್ರಮುಖ ಸ್ಥಾವರಗಳ ರಕ್ಷಣೆ ಹಾಗೂ ಅವುಗಳನ್ನು ಮರೆಮಾಚುವುದು, ಸ್ಥಳಾಂತರ ಮಾಡುವುದು ಸೇರಿ ಅಪಾಯದ ವೇಳೆ ಏನೆಲ್ಲ ಮಾಡಬೇಕು ಎಂಬ ಕುರಿತಾಗಿ ಪೂರ್ವಾಭ್ಯಾಸ ನಡೆಸುವಂತೆ ಸೂಚಿಸಿದೆ.

ಮಾಕ್ ಡ್ರಿಲ್ ಎಂದರೇನು?

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಯಾವ ರೀತಿ ನಮ್ಮನ್ನು ರಕ್ಷಿಸಿಕೊಳ್ಳಬೇಕು. ಆ ಪರಿಸ್ಥಿತಿ ಹೇಗಿರುತ್ತದೆ ಎಂದು ನೈಜ ಘಟನೆಯಂತೆಯೇ ಈ ಮಾಕ್‌ ಡ್ರಿಲ್‌ ನಡೆಯುತ್ತೆ. ಅಪಾಯದ ಸನ್ನಿವೇಶಗಳಲ್ಲಿ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಿ, ಅದನ್ನು ಅಣಕು ಪ್ರದರ್ಶನ ಮಾಡಲಾಗುವುದು. ಮುಖ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ, ಜನರ ರಕ್ಷಣೆ, ಶತ್ರುಗಳ ದಾಳಿ ವೇಳೆ ಸಾರ್ವಜನಿಕ ಸುರಕ್ಷತೆಗೆ ಬೇಕಾದ ಕ್ರಮಗಳ ಬಗ್ಗೆ ಪೂರ್ವಾಭ್ಯಾಸ ಮಾಡುವುದಾಗಿದೆ.

Mock Drills In Karnataka On May 7 Amid India-Pakistan War Threat

ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸೈರನ್?

ಇಂಡಿಯನ್ ಇನ್ಸ್ಟಿಟ್ಯೂಟ್, ರಾಜಾಜಿನಗರ ಇಎಸ್ಐ ಆಸ್ಪತ್ರೆ, ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (ಎನ್‌ಎಎಲ್), ಬೆಂಗಳೂರು ಡೈರಿ, ಕೆನರಾ ಬ್ಯಾಂಕ್, ಪೀಣ್ಯ ಎಸ್‌ಆರ್‌ಎಸ್, ವಿವಿ ಟವರ್ ಅಗ್ನಿಶಾಮಕ ಠಾಣೆ, ಜ್ಞಾನಭಾರತಿ ಅಗ್ನಿಶಾಮಕ ಠಾಣೆ, ಥಣಿಸಂದ್ರ ಅಗ್ನಿಶಾಮಕ ಠಾಣೆ, ಯಶವಂತಪುರ ಅಗ್ನಿಶಾಮಕ ಠಾಣೆ, ಬನಶಂಕರಿ ಅಗ್ನಿಶಾಮಕ ಠಾಣೆ, ರಾಜಾಜಿನಗರ ಅಗ್ನಿಶಾಮಕ ಠಾಣೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ, ಹಲಸೂರು ಗೇಟ್ ಪೊಲೀಸ್ ಠಾಣೆ, ಉಪ್ಪಾರಪೇಟೆ ಪೊಲೀಸ್ ಠಾಣೆ, ಆರ್‌ಆರ್ ನಗರ ಪೊಲೀಸ್ ಠಾಣೆ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ, ಕೆಆರ್ ಮಾರುಕಟ್ಟೆ ಪೊಲೀಸ್ ಠಾಣೆ, ವಯ್ಯಾಲಿಕಾವಲ್ ಪೊಲೀಸ್ ಠಾಣೆ, ಹಲಸೂರು ಗೃಹರಕ್ಷಕ ಕೇಂದ್ರ ಕಚೇರಿ, ಬೆಂಗಳೂರು ಗ್ರಾಮಾಂತರ ಗೃಹರಕ್ಷಕ ಕಚೇರಿ, ಬಾಗಲೂರು ಅಗ್ನಿಶಾಮಕ ಠಾಣೆ, ಪೀಣ್ಯ ಅಗ್ನಿಶಾಮಕ ಠಾಣೆ, ಅಂಜನಪುರ ಅಗ್ನಿಶಾಮಕ ಠಾಣೆ, ಐಟಿಪಿಎಲ್ ಅಗ್ನಿಶಾಮಕ ಠಾಣೆ, ಸರ್ಜಾಪುರ ರಸ್ತೆ ಅಗ್ನಿಶಾಮಕ ಠಾಣೆ, ಎಲೆಕ್ಟ್ರಾನಿಕ್ಸ್ ಸಿಟಿ ಅಗ್ನಿಶಾಮಕ ಠಾಣೆ, ಡೈರಿ ಸರ್ಕಲ್ ಅಗ್ನಿಶಾಮಕ ಠಾಣೆ

ಮಾಕ್‌ ಡ್ರಿಲ್‌ನ ಹಂತಗಳು

* ವಾಯುದಾಳಿ ವೇಳೆ ರಕ್ಷಣಾ ಕ್ರಮಗಳು

* ಕಟ್ಟಡದಲ್ಲಿ ಬೆಂಕಿ

* ಶೋಧ ಮತ್ತು ರಕ್ಷಣೆ

* ಕಟ್ಟಡದಿಂದ ಗಾಯಾಳುಗಳನ್ನು ಸ್ಥಳಾಂತರಿಸುವುದು

* ತಾತ್ಕಾಲಿಕ ಆಸ್ಪತ್ರೆ ಸ್ಥಾಪನೆ

* ಬಂಕರ್‌ಗಳಿಗೆ ನಾಗರಿಕರನ್ನು ಸ್ಥಳಾಂತರಿಸುವುದು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+