ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಒಳನಾಡಿನಲ್ಲಿ ಸಾಧಾರಣ ಮಳೆ: ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?

|
Google Oneindia Kannada News

ಬೆಂಗಳೂರು, ಮೇ 14: ಅಂಡಮಾನ್-ನಿಕೋಬಾರ್ ದ್ವೀಪದ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ರಾಜ್ಯದ ಒಳನಾಡಿನಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ.

ರಾಜ್ಯದಲ್ಲಿ ಕಳೆದೆರಡು ವಾರಗಳಿಂದಲೂ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಅದೇ ರೀತಿ ಇನ್ನೂ ಒಂದು ವಾರ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ: ಬೆಂಗಳೂರು ಹವಾಮಾನ ಹೇಗಿದೆ? ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ: ಬೆಂಗಳೂರು ಹವಾಮಾನ ಹೇಗಿದೆ?

ವಾಯುಭಾರ ಕುಸಿತದ ಪರಿಣಾಮದಿಂದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆ ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆ

ಮೇ 17ರವರೆಗೂ ರಾಜ್ಯದಲ್ಲಿ ಮಳೆ ಸಾಧ್ಯತೆ

ಮೇ 17ರವರೆಗೂ ರಾಜ್ಯದಲ್ಲಿ ಮಳೆ ಸಾಧ್ಯತೆ

ಮೇ 17ರ ವರೆಗೂ ರಾಜ್ಯದ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಸಾಧಾರಣ ಪ್ರಮಾಣದ ಮಳೆ ಮುಂದುವರಿಯಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಒಂದೆರಡು ಕಡೆ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ.

ಇದು ಪೂರ್ವ ಮುಂಗಾರು

ಇದು ಪೂರ್ವ ಮುಂಗಾರು

ಮುಂಗಾರು ಪೂರ್ವ ಮಳೆಯಾಗಿರುವುದರಿಂದ ಗುಡುಗು-ಮಿಂಚು, ಬಿರುಗಾಳಿ, ಆಲಿಕಲ್ಲು ಮಳೆ ಕೆಲವು ಕಡೆ ಆಗಬಹುದು ಎಂದು ಅವರು ಹೇಳಿದರು.

ಮೇ 14ರಂದು ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ: 1 ವಾರ ರಾಜ್ಯದಲ್ಲಿ ಮಳೆಮೇ 14ರಂದು ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ: 1 ವಾರ ರಾಜ್ಯದಲ್ಲಿ ಮಳೆ

ಬೆಂಗಳೂರಲ್ಲಿ ಮಳೆಯಾಗುತ್ತಾ?

ಬೆಂಗಳೂರಲ್ಲಿ ಮಳೆಯಾಗುತ್ತಾ?

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗ್ಗೆ ಶುಭ್ರ ಆಕಾಶವಿದ್ದು ಮಧ್ಯಾಹ್ನದಷ್ಟೊತ್ತಿಗೆ ಮೋಡ ತುಂಬಿಕೊಳ್ಳುತ್ತದೆ. ಸಂಜೆ ವೇಳೆಗೆ ಮಳೆಯಾಗಲಿದೆ ಎಂದು ತಿಳಿಸಿದೆ. ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬುಧವಾರ ಎಲ್ಲೆಲ್ಲಿ ಮಳೆಯಾಗಿದೆ?

ಬುಧವಾರ ಎಲ್ಲೆಲ್ಲಿ ಮಳೆಯಾಗಿದೆ?

ಬುಧವಾರ ಹಾವೇರಿಯ ಶಿಗ್ಗಾಂ, ಕೊಡಗಿನ ನಾಪೊಕ್ಲಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ 40.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
The Andaman-Nicobar island has been hit by a rainstorm, with overcast conditions in the state, with moderate to heavy rainfall in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X