ಕರ್ನಾಟಕದಲ್ಲಿ ನವೆಂಬರ್ 5 ರಿಂದ ಮಳೆಯೋ ಮಳೆ
ಬೆಂಗಳೂರು, ನವೆಂಬರ್ 03: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಮತ್ತೆ ಮಳೆ ಆರಂಭವಾಗಲಿದೆ.
ಕರ್ನಾಟಕದ ಕರಾವಳಿ ಭಾಗದಲ್ಲೂ ಬಿಸಿಲು ಹೆಚ್ಚಿರುವುದರಿಂದ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ನ. 7ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ.
ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನವೆಂಬರ್ 5ರಿಂದ ನ. 7ರವರೆಗೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಎರಡು ದಿನಗಳ ಕಾಲ ಮಳೆ ಬರುವ ಸಾಧ್ಯತೆ
ನ. 5ರಿಂದ 2 ದಿನಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ನ. 5ರಿಂದ ಸಾಧಾರಣ ಮಳೆಯಾಗಲಿದೆ.

ಬೇರೆ ಬೇರೆ ರಾಜ್ಯಗಳಲ್ಲೂ ಮಳೆ
ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಮೇಘಾಲಯ, ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ
ಇಂದಿನಿಂದ ನ. 7ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಹೆಚ್ಚಾಗಲಿದೆ. ನ. 5ರಿಂದ 7ರವರೆಗೆ ಕರಾವಳಿ ಜಿಲ್ಲೆಗಳ ಜೊತೆಗೆ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದೆ. ನ. 5ರ ಬಳಿಕ ರಾಜ್ಯದಲ್ಲಿ 2-3 ದಿನ ಭಾರೀ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರ್ನಾಟಕದಲ್ಲಿ ಹಿಂಗಾರು ಆರಂಭ
ಕರ್ನಾಟಕದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ.
ಕೆಲವು ಪ್ರದೇಶಗಳಲ್ಲಿ ಸಾಧಾರಣದಿಂದ ಕೂಡಿದ ಭಾರಿ ಮಳೆಯಾಗುವ ಸಾದ್ಯತೆ ಇದೆ. ಕರ್ನಾಟಕದ ಕರಾವಳಿಯ ಹಲವು ಪ್ರದೇಶಗಳಲ್ಲಿ, ಗೋವಾ ಮತ್ತು ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ (ದಿನಕ್ಕೆ 20ಸೆಂಟಿಮೀಟರ್ ಗೂ ಅಧಿಕ) ಸಾಧ್ಯತೆ. ಮತ್ತು ಮಧ್ಯ ಮಹಾರಾಷ್ಟ್ರ ಹಾಗೂ ದಕ್ಷಿಣ ಗುಜರಾತ್ ನಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಗಾಳಿಯ ಮುನ್ಸೂಚನೆ, ಮುಂದಿನ 12 ಗಂಟೆಗಳ ಕಾಲ ಕರ್ನಾಟಕದ ಉತ್ತರ ಒಳನಾಡು ಮತ್ತು ಅದಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಲವಾದ ಗಾಳಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ ಮತ್ತು ಆನಂತರ ಅದರ ವೇಗ ತಗ್ಗಲಿದೆ.












Click it and Unblock the Notifications