Karnataka Rains : ಕರ್ನಾಟಕದ 20 ಜಿಲ್ಲೆಗಳಲ್ಲಿ 2 ದಿನ ವ್ಯಾಪಕ ಮಳೆ ಸಾಧ್ಯತೆ: IMD

ಬೆಂಗಳೂರು, ನವೆಂಬರ್ 16: ಹವಾಮಾನದಲ್ಲಿ ಉಂಟಾದ ಬದಲಾವಣೆಗಳಿಂದ ರಾಜ್ಯದ ಮೂರು ಭಾಗಗಳಲ್ಲಿ ಸುಮಾರು 20 ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಬಹಳಷ್ಟು ಕಡೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳುವ ನಿರೀಕ್ಷೆ ಇದೆ.

ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಪ್ರಕಾರ, ನವೆಂಬರ್ 16ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿತ್ತು. ಅದರಂತೆ ಸಮುದ್ರಮಟ್ಟದಲ್ಲಿ ವೈಪರೀತ್ಯ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಳೆ ಮತ್ತು ಮಬ್ಬು ವಾತಾವರಣ ಕಂಡು ಬಂದಿದೆ. ಕೆಲವೆಡೆ ಚಳಿಯು ಅಧಿಕವಾಗಿದೆ.

ರಾಜ್ಯದ ಹಲವೆಡೆ ನವೆಂಬರ್ 17ರವರೆಗೆ ಜೋರು ಮಳೆ ಬರುವ ಸಂಭವವಿದೆ. ಬೆಂಗಳೂರು ನಗರದಲ್ಲಿ ತುಂತುರು ಮಳೆ ಮುಂದುವರಿದಿದೆ.

Moderate to torrential rain alert for 20 districts of Karnataka till November 17th

ಇತ್ತ ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ರಾಜ್ಯಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ ಮತ್ತು ರಾಮನಗರದಲ್ಲಿ ಬುಧವಾರ ಗುಡುಗು ಸಹಿತ ಧಾರಾಕಾರವಾಗಿ ಮಳೆ ಅಬ್ಬರಿಸಲಿದೆ.

ರಾಜ್ಯ ಹಾಗೂ ಬೆಂಗಳೂರಿನಲ್ಲಿ ಇಂದಿನಿಂದ 2 ದಿನಗಳ ಕಾಲ ಈ ಮಳೆ ಸುರಿದು ಬಳಿಕ ಇಳಿಕೆ ಕಾಣುವ ಸಾಧ್ಯತೆ ಇದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಉಳಿದೆಡೆಗಿಂತ ತುಸು ಮಳೆ ಚುರುಕಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Moderate to torrential rain alert for 20 districts of Karnataka till November 17th

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ದಿನ ಮಳೆ

ಇದರೊಂದಿಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕರಾವಳಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮಲೆನಾಡು ಪ್ರದೇಶಗಳಲ್ಲಿ ಮಳೆಯ ವಾತಾವರಣ, ಕೆಲವೆಡೆ ಜೋರು ಮಳೆಯ ವಾತಾವರಣ ಈ ವಾರ ಪೂರ್ತಿ ಧೀರ್ಘವಾಗಿ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಕರ್ನಾಟಕದಂತೆ ಬುಧವಾರ ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಅತ್ಯಧಿಕ ಮಳೆ ನಿರೀಕ್ಷೆ ಇದೆ. ಜೊತೆಗೆ ಕೇರಳದಲ್ಲಿ ತುಂತರು ಮಳೆ ಕಂಡು ಬಂದರೆ, ತಮಿಳುನಾಡು, ಲಕ್ಷದ್ವೀಪ, ಸಿಕ್ಕಿಂ, ಲಡಾಕ್ ಮತ್ತಿತರ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+