ಆಧುನಿಕ ಆಂಬ್ಯುಲೆನ್ಸ್ ವ್ಯವಸ್ಥೆ ಜಾರಿ ವಿಳಂಬಕ್ಕೆ ಹೈಕೋರ್ಟ್ ಗರಂ

ಬೆಂಗಳೂರು,ಜು.19: ಆಧುನಿಕ ಆಂಬ್ಯುಲೆನ್ಸ್ ವ್ಯವಸ್ಥೆ ಜಾರಿಗೊಳಿಸಲು ವಿಳಂಬ ಮಾಡಿದ್ದಕ್ಕಾಗಿ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಕಳೆದ ಫೆಬ್ರವರಿಯಲ್ಲಿ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಸರ್ಕಾರವು ಮಾ.4ರಂದು ಆದೇಶ ಹೊರಡಿಸಿದೆ. ಇದೀಗ ನಾವು ಜುಲೈನಲ್ಲಿದ್ದೇವೆ. ಅಂದರೆ ಸರ್ಕಾರ ಆದೇಶ ಹೊರಡಿಸಿಯೇ ನಾಲ್ಕು ತಿಂಗಳು ಕಳೆದಿದೆ. ಇನ್ನೆಷ್ಟು ದಿನ ಬೇಕು ಎಂದು ಖಾರವಾಗಿ ಪ್ರಶ್ನಿಸಿದೆ.

ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯಪೀಠ, ಸಂಪುಟದ ನಿರ್ಣಯ ಜಾರಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜು.27ಕ್ಕೆ ಮುಂದೂಡಿತು.

 Modern Ambulance system: High Court has slammed the government for delaying the implementation

ಆಂಬ್ಯುಲೆನ್ಸ್ ಸೇವೆ ಕಲ್ಪಿಸುವುದು ತುರ್ತು ಸಂದರ್ಭದಲ್ಲಿ ಮಾತ್ರ. ಹಾಗಾಗಿ, ಯೋಜನೆ ಜಾರಿ ಮಾಡಲು ಮತ್ತಷ್ಟು ವಿಳಂಬ ಮಾಡಿದರೆ ತುರ್ತು ಸೇವೆ ಕಲ್ಪಿಸುವ ಉದ್ದೇಶವೇ ವಿಫಲವಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಸೂಚಿಸಿತು.

ಇದೇ ವೇಳೆ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆಂಬ್ಯುಲೆನ್ಸ್ ನಿರ್ವಹಣಾ ವ್ಯವಸ್ಥೆಯನ್ನು ಜಾರಿ ಮಾಡಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿದೆ.

ಸರ್ಕಾರಿ ವಕೀಲರು, ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆಂಬ್ಯುಲೆನ್ಸ್ ನಿರ್ವಹಣಾ ವ್ಯವಸ್ಥೆ ಜಾರಿಗಾಗಿ ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸೇವೆಯನ್ನು ಮೇಲ್ದರ್ಜೆಗೇರಿಸಲು 2022ರ ಫೆ.14ರಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಅದಕ್ಕಾಗಿ 1360 ಕೋಟಿ ರು. ಮೊತ್ತದ ಟೆಂಡರ್ ಕೆರೆಯಲು ಮಾ.4ರಂದು ಆದೇಶ ಹೊರಡಿಸಿದೆ. ಆಂಬ್ಯುಲೆನ್ಸ್ ತುರ್ತು ಸೇವೆಗೆ ಕೋರಿ ಮಾಡುವ ಕರೆಗಳನ್ನು ಸ್ವೀಕರಿಸಲು 75 ಸೀಟು ಸಾಮರ್ಥ್ಯವಿರುವ ಕಾಲ್ ಸೆಂಟರ್ ತೆರೆಯಲು ಹಾಗೂ ಆಂಬ್ಯುಲೆನ್ಸ್ ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.

ಸದ್ಯ ಟೆಂಡರ್ ಅಧಿಸೂಚನೆಯ ಕರಡು ಸಿದ್ಧಪಡಿಸಿ, ನ್ಯಾ.ರತ್ನಕಲಾ ನೇತೃತ್ವದ ಟೆಂಡರ್ ಪರಿಶೀಲನಾ ಸಮಿತಿಯ ಮುಂದೆ ಮಂಡಿಸಲಾಗಿದೆ. ಸಮಿತಿ ಅನುಮೋದನೆ ನೀಡಿದ ನಂತರ ಟೆಂಡರ್ ಕರೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ಅಲ್ಲದೆ, 2022ರ ಫೆ.14ರಂದು ಸಚಿವ ಸಂಪುಟ ಕೈಗೊಂಡ ನಿರ್ಣಯ ಮತ್ತು ಮಾ.4ರಂದು ಸರ್ಕಾರ ಹೊರಡಿಸಿರುವ ಆದೇಶದ ಜಾರಿಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಜು.27ರೊಳಗೆ ಸರ್ಕಾರ ವರದಿ ಸಲ್ಲಿಸಬೇಕು. ಆ ವರದಿಯಲ್ಲಿ ಯಾವಾಗ ಟೆಂಡರ್ ಕರೆಯಲಾಗುತ್ತದೆ ಮತ್ತು ಯಾವಾಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ ಎಂಬ ಬಗ್ಗೆ ವೇಳಾಪಟ್ಟಿಯನ್ನು ಉಲ್ಲೇಖಿಸಬೇಕು ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+