• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

BREAKING: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಹಿತಿ ಇಲ್ಲ; ಬಸವರಾಜ್ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ಜು. 07: "ಕೇಂದ್ರ ಸಚಿವ ಸಂಪುಟದಲ್ಲಿ ಯಾರು ಇರುತ್ತಾರೆ? ಯಾರೂ ಇರುವುದಿಲ್ಲ ಎಂಬ ಮಾಹಿತಿ ನನ್ನ ಬಳಿ ಇಲ್ಲ. ಆದರೆ ಕರ್ನಾಟಕಕ್ಕೆ ಒಳ್ಳೆಯ ಪ್ರಾತಿನಿಧ್ಯ ಸಿಗುತ್ತದೆ ಎಂಬ ವಿಶ್ವಾಸವಿದೆ" ಎಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. "ಜೊತೆಗೆ ರಾಜ್ಯದಲ್ಲಿ ಮುಂಗಾರು ಅಧಿವೇಶನ ಕರೆಯುವ ಬಗ್ಗೆ ಇದುವರೆಗೂ ಯಾವುದೇ ರೀತಿಯ ನಿರ್ಧಾರವಾಗಿಲ್ಲ. ಆ ಬಗ್ಗೆ ಸಿಎಂ ಯಡಿಯೂರಪ್ಪ ಅವರೊಂದಿಗೆ ಜತೆ ಚರ್ಚೆ ಮಾಡುತ್ತೇನೆ" ಎಂದು ಹೇಳಿದ್ದಾರೆ. ಜೊತೆಗೆ ಮೇಕೆದಾಟು ಯೋಜನೆ ಕುರಿತು ರಾಜ್ಯ ಸರ್ಕಾರ ಕೈಗೊಳ್ಳಲಿರುವ ತೀರ್ಮಾನಗಳ ಕುರಿತು ಇದೇ ಸಂದರ್ಭದಲ್ಲಿ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ.

"ಕರ್ನಾಟಕದ ಪಾಲಿಗೆ ಮಹತ್ವದ್ದಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅತಿ ಶೀಘ್ರದಲ್ಲಿ ಕಾರ್ಯಾರಂಭ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಈ ವಾರಾಂತ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕ್ರಿಯಾ ಯೋಜನೆಗೆ ಸಂಬಂಧಪಟ್ಟಂತೆ ಕಾನೂನು ತಜ್ಞ ಹಾಗೂ ತಾಂತ್ರಿಕ ಪರಿಣಿತರ ಜೊತೆ ಚರ್ಚೆ ಮಾಡಲಿದ್ದಾರೆ" ಎಂದು ಮೇಕೆದಾಟು ಯೋಜನೆಯ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

   ರುಚಿಕರ ಮೀನೂಟ ಸವಿದು ಫುಲ್ ಖುಷಿಯಾದ DK Shivakumar | Oneindia Kannada

   "ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್‌ನಲ್ಲಿ ಮಿಸಲೇನಿಯಸ್ ಅರ್ಜಿ ಮಾತ್ರ ಬಾಕಿ ಇದೆ. ಈ ಕುರಿತು ಸಿಎಂ ಯಡಿಯೂರಪ್ಪ ಈ ವಾರ ಸಭೆ ಕೈಗೊಳ್ಳಲಿದ್ದಾರೆ. ಯೋಜನೆಯ ಅನುಷ್ಠಾನಕ್ಕೆ ಯಾವ ಯಾವ ಒಪ್ಪಿಗೆ ಪಡೆಯಬೇಕು? ಮುಂದೆ ಯಾವ ರೀತಿ ಹೋಗಬೇಕು ಎಂಬುದರ ಕುರಿತು ಕಾನೂನು ಪರಿಣಿತರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಇದು ಕಾವೇರಿ ನೀರು ನಿರ್ವಹಣೆಯಲ್ಲಿ ಮುಖ್ಯ ಪಾತ್ರವಹಿಸುವ ಭವಿಷ್ಯದ ಯೋಜನೆ. ಮತ್ತು ಸಂಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆಯಲ್ಲಿ ಮಹತ್ವದ ಪಾತ್ರವಹಿಸುವ ಸಮಾನಾಂತರ ಅಣೆಕಟ್ಟು ಇದಾಗಲಿದೆ" ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

   English summary
   There is no information on the expansion of the Union Cabinet says home minister Basavaraj Bommai in Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X