Get Updates
Get notified of breaking news, exclusive insights, and must-see stories!

ಯಡಿಯೂರಪ್ಪ VS ಸೋಮಣ್ಣ: ಬಿಜೆಪಿ ಹೈಕಮಾಂಡ್ ಈಗ ಯಾರ ಪರ?

ಬೆಂಗಳೂರು, ಜೂನ್‌ 11: : ಪ್ರಧಾನಿ ನರೇಂದ್ರ ಮೋದಿ 3.0 ಸಂಪುಟದಲ್ಲಿ ರಾಜ್ಯದಿಂದ ಐವರು ಸಂಸದರು ಮಂತ್ರಿ ಭಾಗ್ಯ ಸಿಕ್ಕಿದ್ದು, ಮೊದಲ ಬಾರಿಗೆ ಆಯ್ಕೆಯಾದ ವಿ ಸೋಮಣ್ಣ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ. ಈ ಆಯ್ಕೆಯ ಹಿಂದೆ ರಾಜಕೀಯ ತಂತ್ರಗಾರಿಕೆಯೂ ಅಡಗಿದೆ ಎಂಬ ಚರ್ಚೆಗಳು ಬಿಜೆಪಿಯ ಪಡಸಾಲೆಯಲ್ಲಿ ನಡೆಯುತ್ತಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿ ಸೋಮಣ್ಣ ಅವರು ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಿಂದ ಕಣಕ್ಕಿಳಿದ್ದು, ಹೀನಾಯವಾಗಿ ಸೋಲು ಅನುಭವಿಸಿದ್ದರು. ಬಳಿಕ ಲಿಂಗಾಯತ ನಾಯಕ ವಿ ಸೋಮಣ್ಣ ಅವರ ರಾಜಕೀಯ ಜೀವನ ಅತಂತ್ರವಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಒಂದು ಬಣದ ವಿರೋಧದ ನಡುವೆಯೂ ಸೋಮಣ್ಣ ಅವರಿಗೆ ಟಿಕೆಟ್‌ ನೀಡಲಾಯಿತು. ಸ್ಥಳೀಯ ನಾಯಕರ ಅಸಹಕಾರದ ನಡುವೆಯೂ ತುಮಕೂರಿನಲ್ಲಿ ಗೆದ್ದರು.

Modi Cabinet Somanna Vs Yeddi and BJP leadership stand

ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ವಿ ಸೋಮಣ್ಣ ಅವರು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ವಿ ಸೋಮಣ್ಣ ಅವರ ಲೋಕಸಭಾ ಕ್ಷೇತ್ರದ ಟಿಕೆಟ್‌ ವಿಚಾರದಲ್ಲೂ ಕಾಣದ ಕೈಗಳು ಹೈಕಮಾಂಡ್‌ ನಾಯಕರ ಮಟ್ಟದಲ್ಲಿ ಚರ್ಚೆ ನಡೆಸಿದ್ದರು ಎನ್ನಲಾಗಿತ್ತು. ಇತ್ತ ರಾಜ್ಯದಲ್ಲಿ ಪ್ರಭಾವಿ ಲಿಂಗಾಯತ ನಾಯಕ ಬಿಎಸ್ ಯಡಿಯೂರಪ್ಪ ಬಣದ ನಾಗಾಲೋಟಕ್ಕೆ ಮೂಗುದಾರ ಹಾಕುವ ಉದ್ದೇಶದಿಂದಲೇ ಹೈಕಮಾಂಡ್ ಈ ತಂತ್ರವನ್ನು ಪ್ರಯೋಗ ಮಾಡಿದೆ ಎಂದೇ ಹೇಳಲಾಗುತ್ತಿದೆ.

ದಕ್ಷಿಣ ಕರ್ನಾಟಕದ ಹಿರಿಯ ಲಿಂಗಾಯತ ನಾಯಕ ಸೋಮಣ್ಣ ಅವರನ್ನು ಮೋದಿ ಸಂಪುಟದಲ್ಲಿ ಸಚಿವ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಪ್ರಬಲ ಸಮುದಾಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ತನ್ನದೇ ಆದ ಲೆಕ್ಕಾಚಾರವನ್ನು ಹೊಂದಿದೆ. ಸೋಮಣ್ಣ ಅವರು ಈ ಹಿಂದೆ ಪಕ್ಷದ ಆದೇಶಕ್ಕೆ ಬದ್ಧರಾಗಿದ್ದರು ಮತ್ತು ಕಾಂಗ್ರೆಸ್‌ನ ಅಂದಿನ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ವರುಣಾ ಸೇರಿದಂತೆ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ವಿಫಲರಾಗಿದ್ದರು. ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕರ್ನಾಟಕದಲ್ಲಿ ಉತ್ತಮ ಪ್ರದರ್ಶನ ತೋರಿದ ಹಿನ್ನೆಲೆ ಹಲವು ಲೆಕ್ಕಾಚಾರವನ್ನ ಹಾಕಿಕೊಂಡು ಮಂತ್ರಿ ಸ್ಥಾನವನ್ನ ನೀಡಲಾಗಿದೆ.

ಇನ್ನೂ ಯಡಿಯೂರಪ್ಪ ಅವರಿಗೆ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ವಿ ಸೋಮಣ್ಣ ಅವರಿಗೆ ಮಣೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಕರ್ನಾಟಕದ ಪ್ರಮುಖ ಸಂಸದರುಗಳ ಫೈಕಿ ಹಲವು ಮಂದಿ ಲಿಂಗಾಯತ ನಾಯಕರಿದ್ದಾರೆ. ಇತ್ತ ಮೋದಿ ಕ್ಯಾಬಿನೆಟ್‌ ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರು ಸಹ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಈ ಇಬ್ಬರು ನಾಯಕರು ಹಿರಿತನದ ಜೊತೆಗೆ ಉತ್ತರ ಕರ್ನಾಟಕ ಮತ್ತು ಲಿಂಗಾಯತ ಕೋಟಾದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದ್ರೆ, ಬಿಜೆಪಿ ಹೈಕಮಾಂಡ್‌ ಹಲವು ತಂತ್ರಗಾರಿಕೆಯನ್ನ ಹಾಕಿಕೊಂಡು ಲಿಂಗಾಯತ ನಾಯಕ ವಿ ಸೋಮಣ್ಣ ಅವರಿಗೆ ಮಣೆ ಹಾಕಿದೆ ಎನ್ನಲಾಗಿದೆ.

ಇನ್ನು ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದುಕೊಂಡವರನ್ನು ನೋಡಿದರೆ ಯಡಿಯೂರಪ್ಪ ಅವರನ್ನ ಬಣವನ್ನ ನಿಯಂತ್ರಣದಲ್ಲಿಟ್ಟುಕೊಳ್ಳುವ ನಿಟ್ಟಿನಲ್ಲಿ ಲಿಂಗಾಯತ ನಾಯಕ ವಿ ಸೋಮಣ್ಣ ಅವರಿಗೆ ಮೋದಿ ಸಂಪುಟದಲ್ಲಿ ಮಂತ್ರಿಗಿರಿಯನ್ನ ನೀಡಿಲಾಗಿದೆ. ಕೇಂದ್ರದಲ್ಲಿ ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿರುವುದನ್ನ ಗಮನಿಸಿದ್ರೆ ಬಿಎಲ್‌ ಸಂತೋಷ್‌ಗೆ ಮೇಲುಗೈ ಆಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಬಿಎಲ್‌ ಸಂತೋಷ್‌ ಬಣದಲ್ಲಿ ಶೋಭಾ ಕರಂದ್ಲಾಜೆ, ವಿ ಸೋಮಣ್ಣ, ಪ್ರಹ್ಲಾದ್ ಜೋಶಿ ಗುರುತಿಸಿಕೊಂಡಿದ್ದಾರೆ. ಶೋಭಾ ಕರಂದ್ಲಾಜೆ ಆರಂಭದಲ್ಲಿ ಬಿ ಎಸ್‌ ಯಡಿಯೂರಪ್ಪ ಅವರ ಬಣದ ಜೊತೆಗಿದ್ದರೂ, ಆದರೆ, ಅಲ್ಲಿ ಮುನಿಸಿಕೊಂಡಿದ್ದರು. ಹೀಗಾಗಿ ರಾಜ್ಯದಲ್ಲಿ ಯಡಿಯೂರಪ್ಪ ಬಣ ಹಾಗೂ ವಿಜಯೇಂದ್ರ ಅವರನ್ನ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ನಿಟ್ಟಿನಲ್ಲಿಯೂ ಸಂಪುಟ ಆಯ್ಕೆಯ ವೇಳೆ ತಂತ್ರಗಾರಿಕೆಯನ್ನು ಬಿಜೆಪಿ ಹೈಕಮಾಂಡ್ ಪ್ರಯೋಗ ಮಾಡಿದೆ ಎಂದು ಹೇಳಲಾಗಿದೆ.

ಒಟ್ನಾಲಿ, ಕರ್ನಾಟಕದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ಪ್ರಭಾವಿ ನಾಯಕ ಬಿ ಎಸ್‌ ಯಡಿಯೂರಪ್ಪ ಅವರ ವರ್ಚಸ್ಸು ಪಕ್ಷದಲ್ಲಿ ಇನ್ನೂ ಕಡಿಮೆ ಆಗಿಲ್ಲ. ಆದರೆ, ಯಡಿಯೂರಪ್ಪ ಬಣ ರಾಜಕಾರಣ ಕುರಿತು ಚರ್ಚೆಯಾಗುತ್ತಿದ್ದು, ಈ ಹಿಂದೆ ಯಡಿಯೂರಪ್ಪ ಅವರಿಗೆ ಮಣೆ ಹಾಕಿದ್ದ ಬಿಜೆಪಿ ಹೈಕಮಾಂಡ್‌ ಬಿಎಸ್ವೈ ಬಣವನ್ನ ನಿಯಂತ್ರಣದಲ್ಲಿಟ್ಟುಕೊಳ್ಳಲು ವಿ ಸೋಮಣ್ಣಗೆ ಮಣೆ ಹಾಕಿದ್ದು, ಬಿಜೆಪಿ ಹೈಕಮಾಂಡ್‌ ಇದೀಗ ಯಾರ ಪರ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+