Price Hike: 'ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ , ರಸಗೊಬ್ಬರ ಬೆಲೆ ಹೆಚ್ಚಳ...'
ರಾಯಚೂರು ಜೂನ್ 24: ಚಿನ್ನ, ಬೆಳ್ಳಿ, ಅಕ್ಕಿ, ಬೇಳೆ, ಅಡಿಗೆ ಎಣ್ಣೆ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ರಸಗೊಬ್ಬರ ಎಲ್ಲದರ ಬೆಲೆ ಹೆಚ್ಚಿಸಿದ್ದು ಪ್ರಧಾನಿ ಮೋದಿ ಸರ್ಕಾರ. ಆದ್ರೂ ಬಿಜೆಪಿ ನಾಚಿಕೆ ಇಲ್ಲದೆ ರಾಜ್ಯದ ಜನರ ಎದುರು ಸುಳ್ಳು ಹೇಳಿ ನಾಚಿಕೆ ಇಲ್ಲದಂತೆ ವರ್ತಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಲೆ ಏರಿಕೆಯ ಪಟ್ಟಿಯನ್ನ ಬಿಚ್ಚಿಟ್ಟಿದ್ದಾರೆ.
ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ ದಶಮಾನೋತ್ಸವ ಮತ್ತು 936 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು.

ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿ ಮಾಡಲಿಲ್ಲ. ಈಗ ಕಾಂಗ್ರೆಸ್ ಮಾಡುತ್ತಿರುವ ಅಭಿವೃದ್ಧಿಯನ್ನು ಬಿಜೆಪಿಯವರು ಸಹಿಸದೆ ಸುಳ್ಳಿನ ಸರಮಾಲೆ ಹಂಚುತ್ತಾ ತಿರುಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಈ ಚುನಾವಣೆ ವೇಳೆ 560 ಭರವಸೆಗಳನ್ನು ನೀಡಿದ್ದೆವು. ಇದರಲ್ಲಿ 235 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಸ್ಪಷ್ಟವಾಗಿ ತಿಳಿಸಿದರು.
2013 ರಿಂದ 2018 ರವರೆಗೆ ನಾವು ಆಡಳಿತ ನಡೆಸಿ ಕೊಟ್ಟ ಭರವಸೆಗಳೆಲ್ಲವನ್ನೂ ಈಡೇರಿಸಿ ಪ್ರಣಾಳಿಕೆಯಲ್ಲಿ ಇಲ್ಲದ ಹೆಚ್ಚುವರಿ 30 ಭರವಸೆಗಳನ್ನು ಈಡೇರಿಸಿ ದಾಖಲೆ ಮಾಡಿದ್ದೇವೆ. ಆದರೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದೇನು ಎಂದು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಇವತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾಗಿದ್ದು 371ಜೆ. ಇದನ್ನು ಜಾರಿಗೆ ತಂದಿದ್ದು ಮಲ್ಲಿಕಾರ್ಜುನ ಖರ್ಗೆ, ಧರಂ ಸಿಂಗ್ ಅವರ ನೇತೃತ್ವದ ಹೋರಾಟ ಮತ್ತು ಕೇಂದ್ರದಲ್ಲಿದ್ದ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ. ಈ 371 ಜೆ ಜಾರಿಗೊಳಿಸಲು ಬಿಜೆಪಿ ಸಂಪೂರ್ಣ ವಿರುದ್ಧವಿತ್ತು. ವಾಜಪೇಯಿ ಪ್ರಧಾನಿ ಆಗಿದ್ದಾಗ ಉಪಪ್ರಧಾನಿ ಅಡ್ವಾಣಿ ಅವರು 371ಜೆ ಜಾರಿ ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಬಿಜೆಪಿಯವರಿಗೆ ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಟೀಕಿಸುವ ಯಾವ ನೈತಿಕ ಹಕ್ಕೂ ಇಲ್ಲ ಎಂದರು.
ನಮ್ಮ ಸರ್ಕಾರ ಬಂದ ಮೇಲೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 13500 ಕೋಟಿ ರೂಪಾಯಿ ಕೊಟ್ಟಿದ್ದೇವೆ. ಇದನ್ನು ಖರ್ಚು ಮಾಡಿದ ಮೇಲೆ ಇನ್ನಷ್ಟು ಹೆಚ್ಚಿನ ಹ, ಅನುದಾನ ಕೊಡ್ತೀನಿ ಎಂದು ಮುಖ್ಯಮಂತ್ರಿಗಳು ಘೋಷಿಸಿದರು. 371ಜೆ ಜಾರಿ ಕಾರಣದಿಂದ ಈ ಭಾಗದ ಯುವಕ ಯುವತಿಯರು ಎಂಜಿನಿಯರ್, ವೈದ್ಯರು, ಎಸಿ, ಡಿಸಿ, ಪೊಲೀಸ್ ಅಧಿಕಾರಿಗಳಾಗುತ್ತಿದ್ದಾರೆ. ಇದು ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದರು. ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ ಎನ್ನುವುದು ದಾಖಲಾಗಿದೆ. ಕಲ್ಯಾಣ ಕರ್ನಾಟಕ ಸದಾ ಕಾಂಗ್ರೆಸ್ ನ ಭದ್ರ ಕೋಟೆ: ಐದಕ್ಕೆ ಐದೂ ಲೋಕಸಭಾ ಸ್ಥಾನ ಗೆಲ್ಲಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನ್ಯವಾದ ಅರ್ಪಿಸಿದರು.
ಬಿಜೆಪಿಯ ಮನೆ ದೇವರೇ ಸುಳ್ಳು. ಅವರು ಕೇಂದ್ರದಲ್ಲಿ ಸರ್ಕಾರವಿದ್ದರೂ ರಾಜ್ಯಕ್ಕೆ ನಿರಂತರವಾಗಿ ದ್ರೋಹ ಎಸಗುತ್ತಿದ್ದಾರೆ. ಬಿಜೆಪಿ ನಾಯಕರು ಮತ್ತು ಬಿಜೆಪಿ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮುಂದೆ ಬರುತ್ತಿಲ್ಲ. ರಾಜ್ಯಕ್ಕೆ ಕೇಂದ್ರದ ಬಿಜೆಪಿ ಮಾಡುತ್ತಿರುವ ದ್ರೋಹವನ್ನು ತಡೆಯಲು ಬಿಜೆಪಿಯ ಒಬ್ಬ ಸಂಸದರೂ ಸಿದ್ದರಿಲ್ಲ. ಇದು ಬಿಜೆಪಿಯವರ ಯೋಗ್ಯತೆ ಎಂದು ಟೀಕಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications