ನನ್ನ ಪತ್ರಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯಿಸುತ್ತಾರೆ ಎಂಬ ವಿಶ್ವಾಸವಿದೆ: ಡಿಕೆಶಿ
ಬೆಂಗಳೂರು, ನವೆಂಬರ್ 11: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಾಗೂ ಪಕ್ಷದ ವೈಭವಕ್ಕೆ ಎಲ್ಲವನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಪ್ರಗತಿ ಪ್ರತಿಮೆ ಅನಾವರಣ ಹಾಗೂ ಮೋದಿ ಕಾರ್ಯಕ್ರಮ, ಕಾಮಗಾರಿ, ವ್ಯವಸ್ಥೆಗೆ ಕಾರ್ಯಕ್ರಮಕ್ಕೆ 48.44 ಕೋಟಿ ರೂಪಾಯಿ ವೆಚ್ಚದ ವಿಚಾರವಾಗಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಬರೆದ ಪತ್ರಕ್ಕೆ ಪ್ರಧಾನಿ ಮೋದಿ ಉತ್ತರ ಕೊಡುತ್ತಾರೆ ಎಂಬ ವಿಶ್ವಾಸವಿದೆ. ಇನ್ನೊಬ್ಬರು ಲಂಚದಿಂದ ಸಮಸ್ಯೆ ಆಗುತ್ತಿದೆ ಎಂದು ದಯಾ ಮರಣಕ್ಕೆ ಪತ್ರ ಬರೆದಿದ್ದಾರೆ. ಒಂದು ಭ್ರಷ್ಟ ಆಡಳಿತವನ್ನು ಸ್ವಚ್ಛ ಮಾಡಬೇಕು. ಆದರೆ ಮೋದಿ ತಮ್ಮ ವೈಭವಕ್ಕೆ, ಪಕ್ಷದ ವೈಭವಕ್ಕೆ ಎಲ್ಲವನ್ನೂ ಮಾಡಿಕೊಳ್ತಿದ್ದಾರೆ. ನಮ್ಮ ಪತ್ರಕ್ಕೆ ಉತ್ತರ ಬಂದಿಲ್ಲ ಅಂದ್ರೆ ಮುಂದೆ ಏನು ಮಾಡಬೇಕೋ ಮಾಡ್ತೇವೆ ಎಂದು ಹೇಳಿದರು.
ಸರ್ಕಾರದ ದುಡ್ಡನ್ನು ಹೇಗೆ ಉಳಿಸಬೇಕು ಬಳಸಬೇಕು ಅನ್ನೋದು ಬೇಸಿಕ್ ಕಾಮನ್ ಸೆನ್ಸ್. ಇವರು ಏನೋ ದೊಡ್ಡ ಹೆಸರು ಮಾಡಿಕೊಳ್ಳಬೇಕು ಅಂತ ಬಹಳ ಅರ್ಜೆಂಟ್ ನಲ್ಲಿದ್ದಾರೆ. ಪ್ರಧಾನಿ ಮೋದಿ ತಮ್ಮ ವೈಭವ ಹಾಗೂ ಪಾರ್ಟಿ ವೈಭವಕ್ಕಾಗಿ ಎಷ್ಟು ಖರ್ಚಾಗ್ತಿದೆ ಅನ್ನೋದಕ್ಕೆ ನಿಮ್ಮ ಬಳಿಯೇ ಮಾಹಿತಿ ಇದೆ. ಏನೇ ವೈಭವ ಮಾಡಿಕೊಳ್ಳಲಿ, ಎಷ್ಟೇ ಜನರನ್ನು ಕರೆಸಲಿ. ಇವರನ್ನು ಕಿತ್ತೊಗೆಯಬೇಕು ಜನ ಸಂಕಲ್ಪ ಮಾಡಿದ್ದಾರೆ' ಎಂದರು.

ಮೋದಿ ಹೋಗುವ ರಸ್ತೆ ಮಾತ್ರ ಸರಿಯಾಗಿದೆ ಎಂಬ ವಿಚಾರವಾಗಿ ಮಾತನಾಡಿ, ಅವರ ನಾಯಕರ ಸಲುವಾಗಿ ಮಾಡಿದ್ದಾರೆಯೇ ಹೊರತು ಜನರ ಸಲುವಾಗಿ ಮಾಡಿಲ್ಲ. ಯುವಕರೇ ರಸ್ತೆ ಗುಂಡಿಗಳಲ್ಲಿ ಹೋಮ ಹವನ ಶುರು ಮಾಡ್ತಾರೆ. ಗುಂಡಿ ಹೇಗೆ ಮುಚ್ಚುತ್ತಿದ್ದಾರೋ ಭ್ರಷ್ಟಾಚಾರದ ವಿಚಾರಕ್ಕೆ ಏನು ಸಂದೇಶ ಕೊಟ್ಟು ಹೋಗ್ತಾರೆ ನೋಡ್ತೇವೆ. ಮುಂದಿನ ಹೋರಾಟದ ಬಗ್ಗೆ ಈಗಲೇ ಹೇಳಲ್ಲ. ಐದು ನಿಮಿಷಕ್ಕೆ ಊಟ ರೆಡಿ ಆಗತ್ತಾ? ಮಸಾಲೆ ರೆಡಿ ಮಾಡಬೇಕು, ಕಟ್ಟಿಗೆ ರೆಡಿ ಮಾಡಬೇಕು ಎಂದರು.
ಪ್ರತಿಮೆ ನಿರ್ಮಾಣ ಏರ್ ಪೋರ್ಟ್ ಅಥಾರಿಟಿಯಿಂದ ಆಗಬೇಕಿತ್ತು ಎಂಬ ವಿಚಾರವಾಗಿ ಮಾತನಾಡಿ, ನಾನು ಮೊದಲೇ ಹೇಳಿದ್ದೆ, ಈಗ ಹೇಳ್ತಿರೋದಲ್ಲ. ಬೇಕಿದ್ರೆ ನನ್ನ ಬೈಟ್ ಪಾಯಿಂಟ್ಸ್ ತೆಗೆದು ನೋಡಲಿ. ಏರ್ ಪೋರ್ಟ್ ನವರೇ ಮಾಡ್ತಾ ಇದ್ರು, 50- 60 ಕೋಟಿ ರೂಪಾಯಿ ಹಣ ಖರ್ಚು ಮಾಡುವುದು ಏರ್ ಪೋರ್ಟ್ ನವರಿಗೆ ದೊಡ್ಡ ವಿಚಾರ ಅಲ್ಲ. ಬಿಜೆಪಿಯವರು ಏನೇನೋ ಲೆಕ್ಕಾಚಾರ ಹಾಕಿಕೊಂಡು ಇದನ್ನೆಲ್ಲ ಮಾಡ್ತಿದ್ದಾರೆ ಎಂದು ಹೇಳಿದರು.
ಇನ್ನೂ ರಾಜ್ಯಕ್ಕೆ ಪ್ರದಾನಿ ಆಗಮಿಸುತ್ತಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ಸುದ್ದಿಗೋಷ್ಠಿ ನಡೆಸುವ ಮೂಲಕ ಮೋದಿಯವರೇ ರಾಜ್ಯದ ಜನತೆಗೆ ಉತ್ತರ ಕೊಡಿ ಎಂದು ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದರು.
ಕಳೆದ ಚುನಾವಣೆ ಸಮಯದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಭರವಸೆಗಳಲ್ಲಿ ಶೇ.90 ರಷ್ಟು ಈಡೇರಿಸಿಲ್ಲ. ಈ ಬಗ್ಗೆ ನಾವು ನಿತ್ಯ ಒಂದೊಂದು ಪ್ರಶ್ನೆಗಳನ್ನು ಕೇಳುತ್ತಾ ಬಂದಿದ್ದು, ಇದುವರೆಗೂ ಸರ್ಕಾರ ಯಾವುದಕ್ಕೂ ಉತ್ತರ ನೀಡಿಲ್ಲ. ಚುನಾವಣೆ ಸಂದರ್ಭದಲ್ಲಿ ಮೋದಿ ಅವರು ಯಾವುದೇ ದಾಖಲಾತಿ ಇಲ್ಲದೆ ನಮ್ಮ ಸರಕಾರವನ್ನು 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಗೂಬೆ ಕೂರಿಸಿದರು. ಅದನ್ನು ಸಾಬೀತುಪಡಿಸಲು ನಮ್ಮ ಮೇಲೆ ಯಾವುದೇ ತನಿಖೆ ಮಾಡಲಿಲ್ಲ.
ಆದರೆ ಇವರ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ದೂರು ನೀಡಿದ್ದಾರೆ. ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣ ಹಾಗೂ ಹುಬ್ಬಳ್ಳಿ ಗುತ್ತಿಗೆದಾರ ಬಸವರಾಜ್ ಅವರು ದಯಾಮರಣ ಅರ್ಜಿ ಬರೆದಿದ್ದಾರೆ. ಈ ಬಗ್ಗೆ ಮೋದಿ ಅವರು ಉತ್ತರಿಸಬೇಕು.
ನಿರುದ್ಯೋಗಿ ಯುವಕರು, ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿದ್ದರು. ಇದಾವುದೂ ಆಗಿಲ್ಲ. ಬದಲಿಗೆ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕರ್ನಾಟಕ ರಾಜ್ಯ ಭ್ರಷ್ಟಾಚಾರದ ಕಳಂಕ ಹೊತ್ತಿರುವ ಬಗ್ಗೆ ಮಾಧ್ಯಮಗಳೇ ಬರೆದಿವೆ. ಚುನಾವಣೆ ಸಮಯದಲ್ಲಿ ನಾನು ತಿನ್ನುವುದಿಲ್ಲ ಬೇರೆಯವರಿಗೂ ತಿನ್ನಲು ಬಿಡಲ್ಲ ಎಂದು ಹೇಳಿದ್ದಿರಿ. ಈಗ ನಿಮ್ಮವರು ಏನು ತಿನ್ನುತ್ತಿದ್ದಾರೆ ಎಂದು ಈ ಸಂದರ್ಭದಲ್ಲಿ ಕೇಳುತ್ತಿದ್ದೇವೆ.
ನೀವು ವಚನಭ್ರಷ್ಟರಾಗಿದ್ದು, ಕೊಟ್ಟ ಮಾತು ಉಳಿಸಿಕೊಂಡಿಲ್ಲ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರಿಗೆ 1 ಲಕ್ಷದವರೆಗೂ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಿರಿ. ಈವರೆಗೂ ಮಾಡಿಲ್ಲ. ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿದ್ದಿರಿ. ರೈತರ ಆದಾಯ ಡಬಲ್ ಆಗುವ ಬದಲಾಗಿ ರೈತರ ಕೃಷಿ ವೆಚ್ಚ ಡಬಲ್ ಆಗಿದೆ. ಹೀಗೆ ಹತ್ತು ಹಲವು ವಿಚಾರಗಳನ್ನು ಪತ್ರದ ಮೂಲಕ ಕೇಂದ್ರ ಸರ್ಕಾರದ ಮುಂದೆ ಇಡುತ್ತಿದ್ದೇವೆ. ಇದಕ್ಕೆ ಮೋದಿ ಅವರು ಉತ್ತರಿಸಬೇಕು ಎಂದಿದ್ದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications