ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಬರುವ ಮುನ್ನವೇ ಬೆಂಗಳೂರಲ್ಲಿ ಟ್ರಾಫಿಕ್ ಜಾಮ್

By Mahesh
|
Google Oneindia Kannada News

ಬೆಂಗಳೂರು, ಫೆಬ್ರವರಿ 04: ಪ್ರಧಾನಿ ಮೋದಿ ಅವರು ಬಿಜೆಪಿ ಪರಿವರ್ತನಾ ಸಮಾವೇಶದ ಸಮಾರೋಪ ಸಮಾರಂಭಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.

ಸಮಾರಂಭ ನಡೆಯಲಿರುವ ಅರಮನೆ ಮೈದಾನಕ್ಕೆ ತೆರಳುವ ರಸ್ತೆಗಳು ಈಗಾಗಲೇ ಬಂದ್ ಆಗಿವೆ. ಅರಮನೆ ಮೈದಾನದ ಸುತ್ತಾ ಮುತ್ತಾ ಟ್ರಾಫಿಕ್ ನಿಯಂತ್ರಣಕ್ಕಾಗಿ 300ಕ್ಕೂ ಅಧಿಕ ಸ್ವಯಂ ಸೇವಕರನ್ನು ನೇಮಿಸಲಾಗಿದೆ.

ಆದರೆ, ಸಮಾರಂಭಕ್ಕೆ ರಾಜ್ಯದ ವಿವಿಧೆಡೆಯಿಂದ ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿರುವುದರಿಂದ ಹಲವೆಡೆ ಸಂಚಾರ ದಟ್ಟಣೆ ಕಂಡು ಬಂದಿದೆ.

Modi in Bengaluru: Traffic chokes on Bengaluru

ಚಾಮರಾಜನಗರ, ಮೈಸೂರು, ಮಂಡ್ಯ ಹಾಗೂ ಮಡಿಕೇರಿ ಭಾಗದಿಂದ ಕಾರ್ಯಕರ್ತರು ಅನೇಕ ಬಸ್ ಗಳಲ್ಲಿ ಆಗಮಿಸುತ್ತಿರುವುದರಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳಗ್ಗೆಯಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ.

ಮಂಡ್ಯ, ಹಾಸನ, ಚಾಮರಾಜನರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಧಾರವಾಡ, ಬಳ್ಳಾರಿ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರಿನಿಂದ ತಲಾ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಆಗಮಿಸಿದ್ದಾರೆ. ಒಟ್ಟಾರೆ 4ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರನ್ನು ಕರೆತರಲು ಸಾರಿಗೆ ಇಲಾಖೆಯ 1,500ಕ್ಕೂ ಹೆಚ್ಚು ಬಸ್ ಬುಕ್ ಮಾಡಲಾಗಿದೆ.

ರಮಣಮಹರ್ಷಿ, ಪ್ಯಾಲೇಸ್, ಕಬ್ಬನ್, ಸರ್ ಸಿ.ವಿ.ರಾಮನ್, ಬಳ್ಳಾರಿ ರಸ್ತೆ, ಮೇಖ್ರಿ ವೃತ್ತ, ಚಾಲುಕ್ಯ ವೃತ್ತ, ಹೆಬ್ಬಾಳ ಮೇಲ್ಸೇತುವೆ ಮೇಲೆ ಭಾನುವಾರ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆವರೆಗೆ ವಾಹನಗಳ ರ್ಪಾಂಗ್ ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

English summary
The traffic on the Bengaluru-Mysuru highway has been thrown out of gear following the valedictory programme of Bharatiya Janata Party’s Parivarthana rally, in which Prime Minister Narendra Modi will be participating.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X