ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 300 ರೂ. ಏರಿಕೆ ಮಾಡಿದ ಕೇಂದ್ರ: ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು,ಡಿಸೆಂಬರ್‌ 29: ಕೊಬ್ಬರಿ ದರ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ. ಸರಕಾರ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಕ್ವಿಂಟಾಲ್‌ಗೆ 300 ರೂ. ಏರಿಕೆ ಮಾಡಿದ್ದು, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿದ್ದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024ರ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಏರಿಕೆಯನ್ನು ಅನುಮೋದಿಸಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

Modi Increases Minimum Support Price Of Copra By Rs 300 Per Quintal: Know What HD Kumaraswamy Says

ಈ ಕುರಿತು ಟ್ವೀಟ್‌ ಮಾಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು, ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್‌ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. (ಪ್ರತಿ ಕ್ವಿಂಟಾಲ್‌ಗೆ) ಏರಿಕೆ ಮಾಡಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ.

ಡಿಸೆಂಬರ್ 21ರಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್‌ ಡಿ ದೇವೇಗೌಡ ಅವರ ನೇತೃತ್ವದಲ್ಲಿ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬರಿ ರೈತರ ಸಂಕಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮಾನ್ಯ ಪ್ರಧಾನಿಗಳು ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

ತೆಂಗು ಬೆಳೆಗಾರರು ಬಹಳಷ್ಟು ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ನೆರವು ಬೇಕಿದೆ. ಮಧ್ಯವರ್ತಿಗಳು ಅವರನ್ನು ಕಿತ್ತು ತಿನ್ನುತ್ತಿದ್ದಾರೆ. ಇದು ಎಲ್ಲೆಡೆ ಕಂಡು ಬರುತ್ತಿರುವ ನೈಜ ಚಿತ್ರಣ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ನಾಫೆಡ್ ಮೂಲಕವೇ ಕೊನೆಪಕ್ಷ ರಾಜ್ಯದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಕೊಬರಿ ಖರೀದಿಸಬೇಕು ಎಂದು ಕೇಂದ್ರವನ್ನು, ಮಾನ್ಯ ಪ್ರಧಾನಿಗಳಲ್ಲಿ ವಿನಂತಿಸುತ್ತೇನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+