Get Updates
Get notified of breaking news, exclusive insights, and must-see stories!

ʼಮೋದಿಯವರೇ ನೀವು ಯುವಜನತೆಗೆ ನೀಡಿದ್ದ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ?ʼ

ಬೆಂಗಳೂರು, ಜನವರಿ 12: ಪ್ರಧಾನಿ ನರೇಂದ್ರ ಮೋದಿ ಅವರೇ ನೀವು ಯುವಜನತೆಗೆ ನೀಡಿದ್ದ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮಾಧ್ಯಮಗಳ ಮೂಲಕ ಪ್ರಶ್ನಿಸಿದ್ದಾರೆ.

ನಾವು ನುಡಿದಂತೆ ನಡೆದಿದ್ದೇವೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆಯೇ? ಈ ಪ್ರಶ್ನೆಯನ್ನು ಆ ಪಕ್ಷದವರು ಒಮ್ಮೆ ತಮಗೆ ತಾವೇ ಹಾಕಿಕೊಳ್ಳಬೇಕು. ತಮ್ಮ ಕಾರ್ಯವೈಖರಿಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿಕೊಳ್ಳಬೇಕು. ಪ್ರತಿ ವರ್ಷಕ್ಕೆ 2 ಕೋಟಿ ಉದ್ಯೋಗವನ್ನು ಸೃಷ್ಟಿ ಮಾಡುವುದಾಗಿ ಹೇಳಿತ್ತು? ಆದರೆ, ಈಗ ಏನಾಗಿದೆ? ಅಷ್ಟು ಪ್ರಮಾಣದ ಉದ್ಯೋಗಗಳು ಸೃಷ್ಟಿಯಾದವೇ? ಎಂದು ಪ್ರಶ್ನಿಸಿದ್ದಾರೆ.

 Modi Ji, where are the 2 Crore Jobs you promised? asked Randeep Singh Surjewala

ಉತ್ತರ ಕೊಡಿ ಬಿಜೆಪಿಯವರೇ? 15 ಲಕ್ಷ ರೂಪಾಯಿಯನ್ನು ಪ್ರತಿಯೊಬ್ಬ ಭಾರತೀಯನ ಖಾತೆಗೆ ಹಾಕುವುದಾಗಿ ಹೇಳಿದ್ದರು. ಕೊನೆಗೆ ಹಾಕಿದರೇ? ಆ ಹಣವನ್ನೂ ಹಾಕಲಿಲ್ಲ. ಅವರ ಭರವಸೆಗಳು ಭರವಸೆಯಾಗಿಯೇ ಉಳಿಯಿತು. ಇಲ್ಲಿ ನಾವು ಭರವಸೆಯನ್ನು ಈಡೇರಿಸಿದ್ದೇವೆ. ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನೂ ಅನುಷ್ಠಾನ ಮಾಡಿದ್ದೇವೆ. ಇದು ನಮ್ಮ ಕಾಂಗ್ರೆಸ್‌ನ ಬದ್ಧತೆಯಾಗಿದೆ ಎಂದು ರಣದೀಪ್‌ ಸುರ್ಜೇವಾಲ ಹೇಳಿದ್ದಾರೆ.

ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕನ್ನು ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಸಿದ್ದು, ಇಂದು 5ನೇ ಗ್ಯಾರಂಟಿ ಯೋಜನೆ ಯುವ ನಿಧಿಯನ್ನು ಜಾರಿಗೊಳಿಸಲಾಗುತ್ತಿದೆ
ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂಪಾಯಿ ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿಯನ್ನು ಎರಡು ವರ್ಷಗಳ ಅವಧಿವರೆಗೆ ನೀಡುತ್ತಿದ್ದೇವೆ. ಈ ಮೂಲಕ ಕರುನಾಡಿಗೆ ನಮ್ಮ ಪಕ್ಷ ನೀಡಿದ್ದ ವಾಗ್ದಾನವನ್ನು ಈಡೇರಿಸಿರುವ ಸಂತೃಪ್ತಿ ತಮಗಿದೆ ಎಂದು ತಿಳಿಸಿದ್ದಾರೆ.

Karnataka government jobs; 5151 ಹುದ್ದೆಗಳು ಭರ್ತಿ, ವಿವರಗಳು

ಕಾಂಗ್ರೆಸ್‌ ಎಂಬುದು ಬದ್ಧತೆಯ ಪಕ್ಷ ಎಂಬುದನ್ನು ಸಮಸ್ತ ನಾಡಿನ ಜನತೆಗೆ ತೋರಿಸಿಕೊಟ್ಟಿದ್ದೇವೆ. ನಮ್ಮ ಕಾಂಗ್ರೆಸ್‌ ಪಕ್ಷದ ಮೇಲೆ ಜನರು ವಿಶ್ವಾಸವನ್ನಿಟ್ಟಿದ್ದಾರೆ, ಆ ವಿಶ್ವಾಸಕ್ಕೆ ನಾವು ಬದ್ಧರಾಗಿ ಕೆಲಸ ಮಾಡುತ್ತಿದ್ದೇವೆ. ಅದರ ಭಾಗವೇ ಈ 5ನೇ ಗ್ಯಾರಂಟಿಯಾಗಿದೆ. ಇಂದು ಇದನ್ನು ಜಾರಿ ಮಾಡಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಇನ್ನು ಹಸಿದವರಿಗೆ ಅನ್ನ ನೀಡುವ ಅನ್ನಭಾಗ್ಯವನ್ನೂ ಅಷ್ಟೇ ಯಶಸ್ವಿಯಾಗಿ ಅನುಷ್ಠಾನ ಗೊಳಿಸಿದ್ದೇವೆ. ಆದರೆ, ನಮಗೆ ಈ ಯೋಜನೆ ಮೂಲಕ ತಲಾ 5 ಕೆಜಿ ಅಕ್ಕಿ ಕೊಡಬೇಕು ಎಂಬ ಆಶಯ ಇತ್ತು. ಈ ಸಂಬಂಧ ಕೇಂದ್ರ ಸರ್ಕಾರವನ್ನು ನಾವು ಕೇಳಿದೆವು ಕೂಡ.

 Modi Ji, where are the 2 Crore Jobs you promised? asked Randeep Singh Surjewala

ಆದರೆ, ಕೇಂದ್ರ ಸರ್ಕಾರ ನಮಗೆ ಅಕ್ಕಿಯನ್ನು ಕೊಡಲು ನಿರಾಕರಣೆ ಮಾಡಿದರು. ಇದರಿಂದ ನಾವೇನೂ ಜಗ್ಗಲಿಲ್ಲ, ಕೊಟ್ಟ ಮಾತಿಗೂ ತಪ್ಪಲಿಲ್ಲ. ಐದು ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೀಡಿದೆವು. ಅನ್ನ ಭಾಗ್ಯ ಯೋಜನೆಯಲ್ಲಿ 1.8 ಕೋಟಿ ಕುಟುಂಬಗಳ 3.92 ಕೋಟಿ ಸದಸ್ಯರಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ ಒಟ್ಟು 170 ರೂ.ಗಳನ್ನು ಪ್ರತಿ ತಿಂಗಳು ನೀಡುತ್ತಿದ್ದೇವೆ. ಇದಕ್ಕಾಗಿ ಮಾಸಿಕವಾಗಿ 646 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದ ಖರ್ಚು ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ನಮ್ಮ ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಅಣಕಿಸುವ, ಕುಹುಕವಾಡುವ ಕೆಲಸ ಬಿಜೆಪಿಯಿಂದ ಆಗುತ್ತಿದೆ. ಇಲ್ಲಿ ನಮ್ಮ ರಾಜ್ಯದ ಗ್ಯಾರಂಟಿಗಳ ಬಗ್ಗೆ ಅಪಹಾಸ್ಯ ಮಾಡಿ, ಬಿಜೆಪಿ ಆಡಳಿತದಲ್ಲಿ ಇರುವ ಬೇರೆ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಾರೆ.

ಈ ದ್ವಂದ್ವ ನಿಲುವು ಬೇಕಾ? ಇನ್ನು ಕರ್ನಾಟಕದಲ್ಲಿ ವಿರೋಧ ಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ನವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಅಣಕಿಸುವ ಮೂಲಕ ನಾಡಿನ ಯೋಜನೆಯ ಫಲಾನುಭವಿಗಳಿಗೆ ಅಪಮಾನ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ, ನಾವು ಜನರ ವಿಶ್ವಾಸವನ್ನು ಗಳಿಸಿದ್ದೇವೆ ಎಂದು ರಣದೀಪ್‌ ಸುರ್ಜೇವಾಲ ತಿಳಿಸಿದ್ದಾರೆ.

ಈಗ ಯುವ ನಿಧಿ ಯೋಜನೆ ಅದ್ಧೂರಿಯಾಗಿ ಜಾರಿಯಾಗುತ್ತಿದೆ. ಹಾಗಂತ ನಾವು ಇಷ್ಟಕ್ಕೆ ವಿರಮಿಸುವುದಿಲ್ಲ. ಯುವ ಜನತೆಗೆ ಕೌಶಲ್ಯಯುಕ್ತ ಶಿಕ್ಷಣ ನೀಡಿ ಅವರಿಗೆ ಉದ್ಯೋಗಗಳು ಹೆಚ್ಚು ಸಿಗುವಂತೆ ಮಾಡುತ್ತೇವೆ. ಇದೂ ಸಹ ನಮ್ಮ ಬದ್ಧತೆಯಲ್ಲಿ ಒಂದಾಗಿದೆ.

ಅಲ್ಲದೆ, ರಾಷ್ಟ್ರ ನಿರ್ಮಾಣಕ್ಕೆ ಯುವ ಜನತೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕಾಂಗ್ರೆಸ್‌ ಬದ್ಧವಾಗಿದೆ. ಬಿಜೆಪಿ ಸೇರಿದಂತೆ ಅದರ ಮಿತ್ರಪಕ್ಷಗಳ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಬಾರದು. ಇಂದು ಬಿಜೆಪಿಯವರ ಭಾಷಣದಿಂದ ಯುವ ಜನತೆ ಭ್ರಮನಿರಸವಾಗಿರುವುದು ಕಂಡುಬಂದಿದೆ. ವಾಸ್ತವ ಏನು ಎಂಬುದು ಎಲ್ಲರಿಗೂ ಗೊತ್ತಾಗಿದೆ ಎಂದು ರಣದೀಪ್‌ ಸುರ್ಜೇವಾಲ ಹೇಳಿದ್ದಾರೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+