ಏಪ್ರಿಲ್ 8ರ ನರೇಂದ್ರ ಮೋದಿ ಸಮಾವೇಶ ಮುಂದೂಡಿಕೆ
ಬೆಂಗಳೂರು, ಏಪ್ರಿಲ್ 05 : ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕದ ಎರಡು ಸಮಾವೇಶಗಳ ದಿನಾಂಕ ಬದಲಾವಣೆಯಾಗಿದೆ. ಮೈಸೂರು ಮತ್ತು ಚಿತ್ರದುರ್ಗದಲ್ಲಿ ನರೇಂದ್ರ ಮೋದಿ ಅವರು ಪ್ರಚಾರ ಭಾಷಣ ಮಾಡಲಿದ್ದಾರೆ.
ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ಅವರು ಶುಕ್ರವಾರ ಈ ಕುರಿತು ಮಾಹಿತಿ ನೀಡಿದರು. ಏಪ್ರಿಲ್ 8ರಂದು ನಿಗದಿಯಾಗಿದ್ದ ನರೇಂದ್ರ ಮೋದಿ ಅವರ ಸಮಾವೇಶ ಏಪ್ರಿಲ್ 9ರಂದು ನಡೆಯಲಿದೆ.
ಮೈಸೂರು ಮತ್ತು ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರವನ್ನು ನಡೆಸಲಿದ್ದಾರೆ. ಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ಮೊದಲ ಬಾರಿಗೆ ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಈಗಾಗಲೇ ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ 7 ಸಮಾವೇಶಗಳನ್ನು ನಡೆಸಲು ಪಕ್ಷ ತೀರ್ಮಾನಿಸಿದೆ.
ಚಿತ್ರದುರ್ಗ ಕ್ಷೇತ್ರದಲ್ಲಿ ಎ.ನಾರಾಯಣಸ್ವಾಮಿ ಅವರು ಬಿಜೆಪಿ ಅಭ್ಯರ್ಥಿ. ಹಾಲಿ ಕಾಂಗ್ರೆಸ್ ವಶದಲ್ಲಿರುವ ಕ್ಷೇತ್ರವಿದಾಗಿದ್ದು, ಹಾಲಿ ಸಂಸದ ಬಿ.ಎನ್.ಚಂದ್ರಪ್ಪ ಅವರು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಹ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಲಿದ್ದಾರೆ. ಪ್ರತಾಪ್ ಸಿಂಹ ಅವರು ಕ್ಷೇತ್ರದ ಹಾಲಿ ಸಂಸದರು. ಈ ಬಾರಿಯೂ ಅವರೇ ಅಭ್ಯರ್ಥಿ. ಕಾಂಗ್ರೆಸ್-ಜೆಡಿಎಸ್‌ನಿಂದ ಸಿ.ಎಚ್.ವಿಜಯಶಂಕರ್ ಅವರು ಕಣದಲ್ಲಿದ್ದಾರೆ. ಎರಡೂ ಕ್ಷೇತ್ರದಲ್ಲಿ ಏಪ್ರಿಲ್ 18ರಂದು ಚುನಾವಣೆ ನಡೆಯಲಿದೆ.












Click it and Unblock the Notifications