ಮೋದಿ ಭಾಷಣ : ಸಿದ್ದರಾಮಯ್ಯ, ಯಡಿಯೂರಪ್ಪ ಟ್ವಿಟರ್ ಯುದ್ಧ!

Posted By: Gururaj
Subscribe to Oneindia Kannada

ಬೆಂಗಳೂರು, ಫೆಬ್ರವರಿ 6 : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಭಾನುವಾರ ಮಾಡಿದ ಭಾಷಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಭಾಷಣ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಮಾತಿನ ಸಮರಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯಗೆ ಮತ್ತೆ 5 ಪ್ರಶ್ನೆ ಕೇಳಿದ ಯಡಿಯೂರಪ್ಪ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ನರೇಂದ್ರ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭ್ರಷ್ಟಾಚಾರ: ಮುಖಾಮುಖಿ ಚರ್ಚೆಗೆ ಮೋದಿಗೆ ಸಿದ್ದರಾಮಯ್ಯ ಪಂಥಾಹ್ವಾನ

ನರೇಂದ್ರ ಮೋದಿ ಅವರ ಭಾಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ 5 ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಪ್ರಧಾನ ಮಂತ್ರಿಗಳನ್ನು ಚರ್ಚೆಗೆ ಆಹ್ವಾನಿಸಿದ್ದಾರೆ.

ಬೆಂಗಳೂರಿನಲ್ಲಿ ಮೋದಿ : ಮೋದಿಯ ಟಾಪ್‌ 10 ಹೇಳಿಕೆಗಳು!

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರ ಟ್ವಿಟ್‌ಗೆ ಉತ್ತರ ನೀಡಿದ್ದಾರೆ. ಅವರಿಗೆ 5 ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ಸಿದ್ದರಾಮಯ್ಯಗೆ ಪ್ರಶ್ನೆ - 1

ಚರ್ಚೆ ಆರಂಭಿಸಿದ್ದು ಸಂತಸ ತಂದಿದೆ. ನೀವು ದೆಹಲಿಯತ್ತ ಮುಖ ಮಾಡುವ ಮುನ್ನ ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಿ.

ಸಿದ್ದರಾಮಯ್ಯಗೆ ಪ್ರಶ್ನೆ - 2

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಶ್ನೆ

ಸಿದ್ದರಾಮಯ್ಯಗೆ ಪ್ರಶ್ನೆ - 3

70 ಲಕ್ಷದ ಹ್ಯೂಬ್ಲೋಟ್ ವಾಚ್ ಬಗ್ಗೆ ಪ್ರಶ್ನೆ

ಸಿದ್ದರಾಮಯ್ಯಗೆ ಪ್ರಶ್ನೆ - 4

ನಿಮಗೆ ನೈತಿಕತೆ ಇದೆಯೇ?

ಸಿದ್ದರಾಮಯ್ಯಗೆ ಪ್ರಶ್ನೆ - 5

ಎಸಿಬಿಗೆ ನೇಮಕ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP president B.S.Yeddyurappa and Chief Minister Siddaramaiah twitter war on Prime Minister of India Narendra Modi speech in Bengaluru on February 4, 2018. Siddaramaiah asked him to walk the talk posing four questions. Yeddyurappa also questioned Siddaramaiah.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ