ಕೋವಿಡ್; ಕರ್ನಾಟಕದ 17 ಡಿಸಿಗಳ ಜೊತೆ ಮೋದಿ ಸಂವಾದ

ಬೆಂಗಳೂರು, ಮೇ 16; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ವಿವಿಧ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಹೆಚ್ಚುತ್ತಿವೆ. ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಲಿದ್ದಾರೆ.

ಮೇ 18ರ ಮಂಗಳವಾರ ಪ್ರಧಾನಿ ಮೋದಿ ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಸಭೆ ನಡೆಲಿದ್ದಾರೆ. ಸಂಬಂಧಪಟ್ಟ ಜಿಲ್ಲೆಗಳ ಅಗತ್ಯ ಮಾಹಿತಿಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಮಾಹಿತಿ ರವಾನೆ ಮಾಡಲಾಗಿದೆ.

 Modi To Hold Talks With 17 Deputy Commissioners Of Karnataka

ಯಾವ-ಯಾವ ಜಿಲ್ಲೆ; ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಡಿಸಿಗಳ ಜೊತೆ ಸಂವಾದ ನಡೆಸಲಿದ್ದಾರೆ ಮೋದಿ.

ಈ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಲಾಕ್‌ಡೌನ್ ಅನ್ನು ಮೇ 24ರ ಬಳಿಕವೂ ವಿಸ್ತರಣೆ ಮಾಡುವ ಕುರಿತು ಸಭೆಯಲ್ಲಿ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ.

ಮೇ 15ರ ಮಾಹಿತಿಯಂತೆ ಕರ್ನಾಟಕದಲ್ಲಿ 41,664 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 605494ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 2171931.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+