108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಮೋದಿ
ಬೆಂಗಳೂರು,ನವೆಂಬರ್ 11: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅನಾವರಣಗೊಳಿಸಿದರು.
ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆಯನ್ನ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದು, 20 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಿಸಲಾಗಿದೆ. ಕೆಂಪೇಗೌಡ ಪ್ರತಿಮೆ, ಥೀಮ್ ಪಾರ್ಕ್ಗೆ ಒಟ್ಟು 84 ಕೋಟಿ ರೂ. ವೆಚ್ಚ ತಗುಲಿದೆ.

ಕೆಂಪೇಗೌಡ ಕಂಚಿನ ಪ್ರತಿಮೆಯ ಒಟ್ಟು ತೂಕ 218 ಟನ್ ಆಗಿದ್ದು, ಪ್ರತಿಮೆಯ ಖಡ್ಗದ ತೂಕ 4 ಟನ್ ಇದೆ. 23 ಎಕರೆಯಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣ ನಿರ್ಮಿಸಲಾಗಿದ್ದು,ಈ ಪ್ರತಿಮೆಗೆ 98 ಟನ್ ಕಂಚು ಮತ್ತು 120 ಟನ್ ಹುಕ್ಕು ಬಳಕೆ ಮಾಡಲಾಗಿದೆ. ಕೆಂಪೇಗೌಡರ ಖಡ್ಗವೇ ಬರೋಬ್ಬರಿ 4000 ಸಾವಿರ ಕೆಜಿ ತೂಕವಿದೆ.

ನಾಡಪ್ರಭು ಕೆಂಪೇಗೌಡರ 108 ಪ್ರಗತಿ ಪ್ರತಿಮೆ ನಿರ್ಮಾಣಕ್ಕೆ ಜೂನ್ 26 2020 ರಂದು ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದ್ದರು. ಸುಮಾರು 84 ಕೋಟಿ ರೂ. ವೆಚ್ಚದಲ್ಲಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಈ ಪ್ರತಿಮೆ 108 ಅಡಿ ಎತ್ತರದಲ್ಲಿದೆ.

ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎ.ನಾರಾಯಣಸ್ವಾಮಿ, ಮಾಜಿ ಸಿಎಂಗಳಾದ ಎಸ್.ಎಂ ಕೃಷ್ಣ, ಬಿಎಸ್ ಯಡಿಯೂರಪ್ಪ ,ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.












Click it and Unblock the Notifications