• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಟಿ.ವಿ. ಮೋಹನ್‌ ದಾಸ್‌ ಪೈ ಅವರಿಗೆ ರಾಣಿ ಚೆನ್ನಮ್ಮ ವಿವಿ ಗೌರವ ಡಾಕ್ಟರೇಟ್‌

|

ಬೆಂಗಳೂರು, ಜ 11: ಮಣಿಪಾಲ್‌ ಗ್ಲೋಬಲ್‌ ಎಜುಕೇಷನ್ ಸಂಸ್ಥೆಯ ಅಧ್ಯಕ್ಷ ಟಿ.ವಿ. ಮೋಹನ್‌ದಾಸ್‌ ಪೈ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ ಪದವಿಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರದಾನ ಮಾಡಿದ್ದಾರೆ.

ರಾಜಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ವಜುಭಾಯಿ ವಾಲಾ ಅವರು, ಪೈ ಅವರಿಗೆ ಈ ಪದವಿಯನ್ನು ಪ್ರದಾನ ಮಾಡಿದರು. ಬಳಿಕ ಮಾತನಾಡಿದ ರಾಝ್ಯಪಾಲರು, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ಪೈ ಅವರ ಸೇವೆ ಅನುಕರಣೀಯ ಎಂದರು.

ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಮೋಹನ್‌ದಾಸ್‌ ಪೈ ಅವರು, ಶೈಕ್ಷಣಿಕವಾಗಿ ರಾಜ್ಯವು ಉನ್ನತ ಮಟ್ಟದಲ್ಲೇ ಇದ್ದರೂ ಸಂಶೋಧನೆಗೆ ಇನ್ನಷ್ಟು ಒತ್ತು ನೀಡಲೇಬೇಕು.‌ ಕೊನೆಯ ಪಕ್ಷ 100 ಕೋಟಿ ರೂ.ಗಳಷ್ಟು ಮೊತ್ತವನ್ನಾದರೂ ಸಂಶೋಧನಾ ಕ್ಷೇತ್ರಕ್ಕೇ ಮೀಸಲಿಡಬೇಕು. ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಆರ್ಥಿಕ ಸಹಕಾರವನ್ನು ಒದಗಿಸಬೇಕು. ಆಗ ಮಾತ್ರ ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ಬರುತ್ತದೆ ಹಾಗೂ ದೇಶದ ಅಭಿವೃದ್ಧಿಗೆ ವೇಗ ಬರುತ್ತದೆ ಎಂದರು.

ಶಾಲೆ-ಕಾಲೇಜುಗಳಲ್ಲಿ ಕಲಿಯುವ ಮಕ್ಕಳಿಗೆ ಎಲ್ಲ ಸೌಲಭ್ಯಗಳನ್ನು ಉದಾರವಾಗಿ ಒದಗಿಸಬೇಕು. ಮೂಲಸೌಕರ್ಯಗಳನ್ನು ಪರಿಣಾಮಕಾರಿ ಒದಗಿಸಬೇಕು ಎಂದು ಸರ್ಕಾರಕ್ಕೆ ಪೈ ಮನವಿ ಮಾಡಿದರು. ಡಿಸಿಎಂ ಡಾ. ಅಶ್ವಥ್ ನಾರಾಯಣ್, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರ ಗೌಡ, ಕುಲಸಚಿವ ಪ್ರೊ. ಬಸವರಾಜ್‌ ಪದ್ಮಶಾಲಿ ಮುಂತಾದವರು ಉಪಸ್ಥಿತರಿದ್ದರು.

English summary
Manipal Global Education Society's President Mohandas Pai has been conferred the honorary Doctorate of Rani Chennamma University in Belagavi by Governor Vajubhai Wala. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X