Bengaluru: ಮೊಹರಂ ಹಬ್ಬದ ಮೆರವಣಿಗೆ ಕಾರಣ ಬೆಂಗಳೂರಿನ ಹಲವೆಡೆ ಸಂಚಾರ ಬದಲಾವಣೆ! ಹೀಗಿದೆ ಪರ್ಯಾಯ ಮಾರ್ಗ
ಬೆಂಗಳೂರು, ಜುಲೈ 29: ಶನಿವಾರ ಮೊಹರಂ ಹಬ್ಬ ಮೆರವಣಿಗೆ ಹಿನ್ನಲೆ ಬೆಂಗಳೂರು ನಗರದಲ್ಲಿ ಮಧ್ಯಾಹ್ನ 1ರಿಂದ ಸಂಜೆ 4.30ರವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಇಂದು ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಾಸವಾಗಲಿದ್ದು, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.
'ಸಂಚಾರ ಸಲಹೆ'
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) July 28, 2023
'Traffic advisory' pic.twitter.com/aiqY6Pmec1
ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಬ್ರಿಗೇಡ್ ರಸ್ತೆಯ ಮೂಲಕ ಹೊಸೂರು ರಸ್ತೆಯ ಕಡೆಗೆ ವೆಲ್ಲಾರಾ ಜಂಕ್ಷನ್ ಮುಖಾಂತರ ತೆರಳುವ ವಾಹನ ಸವಾರರು ರಿಚ್ಮಂಡ್ ರಸ್ತೆಯ ಮೂಲಕ ರೀನಿಯಸ್ ಕ್ರಾಸ್, ನಂಜಪ್ಪ ಸರ್ಕಲ್ ಲಾಂಗ್ ಫೋರ್ಡ್ ರಸ್ತೆ, ಸಿಎಂಪಿ ಜಂಕ್ಷನ್ ಮೂಲಕ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಹೊಸೂರು ರಸ್ತೆಯ ಆಡುಗೋಡಿ ಕಡೆಯಿಂದ ಬರುವ ಸವಾರರು ಸಿಮೆಂಟ್ರ ಕ್ರಾಸ್, ಬರ್ಲ ಸ್ಟ್ರೀಟ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ಸರ್ಕಲ್, ರೀನಿಯಸ್ ಸ್ಟ್ರೀಟ್ ಮೂಲಕ ರಿಚ್ಮಂಡ್ ರಸ್ತೆಗೆ ಬಂದು ಸಂಚರಿಸುವುದು.ಹೊಸೂರು ರಸ್ತೆ ಕಡೆಯಿಂದ ಬರುವ ಭಾರಿ ವಾಹನ ಸವಾರರು ಆಡುಗೋಡಿ ಜಂಕ್ಷನ್, ಮೈಕೋ ಜಂಕ್ಷನ್, 8ನೇ ಮೈನ್, ವಿಲ್ಸನ್ ಗಾರ್ಡನ್ ಮುಖ್ಯ ರಸ್ತೆ, ಸಿದ್ಧಯ್ಯ ರಸ್ತೆ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.
ಮೊಹರಂ ಹಬ್ಬಕ್ಕೆ ಶುಭಕೋರಿದ ಹೆಚ್ ಡಿ ದೇವೇಗೌಡ!
ಸಮಸ್ತ ಮುಸ್ಲಿಂ ಬಾಂಧವರಿಗೆ ತ್ಯಾಗ, ಸೌಹಾರ್ದತೆ ಹಾಗೂ ಸಾಮರಸ್ಯ ಸಾರುವ ಪವಿತ್ರ ಮೊಹರಂ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬವು ಸರ್ವರಿಗೂ ಒಳಿತನ್ನು ತರಲಿ, ಪ್ರೀತಿ, ನಂಬಿಕೆ, ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಶುಭಕೋರಿದ್ದಾರೆ.












Click it and Unblock the Notifications