Gram Panchayat; ಬಾಪೂಜಿ ಸೇವಾ ಕೇಂದ್ರದಲ್ಲಿ ವಿವಿಧ ಸೌಲಭ್ಯ, ಅರ್ಜಿ ಶುಲ್ಕಗಳು

ಬೆಂಗಳೂರು, ಆಗಸ್ಟ್‌ 24; ಕರ್ನಾಟಕ ಸರ್ಕಾರ ಭೂಮಾಪನ, ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಯ ಮೋಜಿಣಿ ವ್ಯವಸ್ಥೆಯಡಿ ನೀಡಲಾಗುವ 11ಇ-ಸ್ಕೆಚ್, ತತ್ಕಾಲ್ ಪೋಡಿ, ಭೂ ಪರಿವರ್ತನೆಗೆ ಅರ್ಜಿ ಮತ್ತು ಹದ್ದುಬಸ್ತುನಂತಹ ವಿವಿಧ ಸೇವೆಗಳನ್ನು ಇನ್ನುಮುಂದೆ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸುವ ವ್ಯವಸ್ಥೆಗೆ ಚಾಲನೆ ನೀಡಿದೆ.

ಶುಭ ಕಲ್ಯಾಣ್ ನಿರ್ದೇಶಕರು, ಇ-ಆಡಳಿತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿರುವ ಸೇವೆಗಳನ್ನು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

bapuji-seva-kendra-applications-fee

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿ 11 ಇ ನಕ್ಷೆ, ತತ್ಕಾಲ್ ಪೋಡಿ, ಭೂ ಪರಿವರ್ತನೆಗಾಗಿ ಅರ್ಜಿ ಮತ್ತು ಹದ್ದುಬಸ್ತು ಸೇವೆಗಳನ್ನು ನೀಡಲಾಗುತ್ತಿದೆ. ಸದರಿ ಸೇವೆಗಳಿಗೆ ಅರ್ಜಿ ಸಲ್ಲಿಸಲು ಜನರು ತಾಲೂಕು ಹಂತದಲ್ಲಿರುವ ತಹಶೀಲ್ದಾರ್ ಕಚೇರಿಗೆ ಅಥವಾ ಹೋಬಳಿ ಮಟ್ಟದಲ್ಲಿರುವ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡಬೇಕಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರತಿಯೊಂದು ತಾಲೂಕುಗಳು 30-40 ಗ್ರಾಮ ಪಂಚಾಯತಿಗಳನ್ನು ಹಾಗೂ ಪ್ರತಿಯೊಂದು ಹೋಬಳಿಯಲ್ಲಿ 6-7 ಗ್ರಾಮ ಪಂಚಾಯತಿಗಳನ್ನು ಹೊಂದಿರುತ್ತದೆ. ಈ ಎಲ್ಲಾ ಗ್ರಾಮ ಪಂಚಾಯತಿಯ ಸುಮಾರು 20-50 ಸಾವಿರ ಜನರು ಸರ್ಕಾರಿ ಸೇವೆಯನ್ನು ತಾಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪಡೆಯಬೇಕಾದುದರಿಂದ ಜನಸಂದಣಿ ಹೆಚ್ಚುವುದರ ಜೊತೆಗೆ ಕೇಂದ್ರದಲ್ಲಿ ತ್ವರಿತ ಗತಿಯಲ್ಲಿ ಸೇವೆಯನ್ನು ಒದಗಿಸುವುದಕ್ಕೆ ತೊಡಕಾಗುತ್ತಿತ್ತು. ಜೊತೆಗೆ ಸಾರ್ವಜನಿಕರು ಸೇವೆಗಳನ್ನು ಪಡೆಯಲು ಸಾಕಷ್ಟು ದೂರ ಕ್ರಮಿಸ ಬೇಕಾದುದರಿಂದ ಸಾಕಷ್ಟು ಹಣ ವ್ಯಯಿಸಬೇಕಾಗುತ್ತಿತ್ತು.

ಈ ಸಮಸ್ಯೆಗೆ ಪರಿಹಾರವಾಗಿ ಗ್ರಾಮೀಣ ಜನತೆ ತಮಗೆ ಅವಶ್ಯವಿರುವ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿರುವ ಸದರಿ ಸೇವೆಗಳನ್ನು ಮತ್ತಷ್ಟು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಯಲ್ಲೇ ಪಡೆದುಕೊಳ್ಳುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸಲು ಸರ್ಕಾರವು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಇದರಿಂದಾಗಿ, ಗ್ರಾಮೀಣಾ ಪ್ರದೇಶದಲ್ಲಿ ವಾಸವಾಗಿರುವ 3.7 ಕೋಟಿ ಜನರಿಗೆ ಅಂದರೆ 78 ಲಕ್ಷ ಕುಟುಂಬಗಳು ಭೂಮಾಪನ ಕಂದಾಯ ವ್ಯವಸ್ಥೆ ಮತುತ ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿರುವ ಲಭ್ಯವಿರುವ ಸೇವೆಗಳನ್ನು ಪಡೆಯುವಲ್ಲಿ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳು ಮಹತ್ವದ ಪಾತ್ರವಹಿಸಲಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇನ್ನೂ ಮುಂದೆ ಜನರು ಮೋಜಿನಿ ವ್ಯವಸ್ಥೆಯಡಿರುವ ಸೇವೆಗಳಿಗೆ ಅರ್ಜಿ ಸಲ್ಲಿಸಿ ಪಡೆಯಲು ತಾಲೂಕು ಹಂತದ ತಹಶೀಲ್ದಾರ್ ಕಚೇರಿಗೆ ಅಥವಾ ಹೋಬಳಿ ಮಟ್ಟದಲ್ಲಿರುವ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡದೇ, ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಸೇವೆಗಳನ್ನು ಪಡೆಯಬಹುದಾಗಿದೆ.

ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ 11 ಇ-ನಕ್ಷೆ, ತತ್ಕಾಲ್ ಪೋಡಿ, ಭೂ ಪರಿವರ್ತನೆಗಾಗಿ ಅರ್ಜಿ ಮತ್ತು ಹದ್ದುಬಸ್ತು ಸೇವೆಗಳಿಗೆ ಅರ್ಜಿಗಳನ್ನು ಸ್ವೀಕರಿಸಿ, ನೀಡಲು ಎಷ್ಟು ಶುಲ್ಕವನ್ನು ಪಾವತಿ ಮಾಡಬೇಕು ಎಂದು ಉಲ್ಲೇಖಿಸಲಾಗಿದೆ.

ಅರ್ಜಿ ಶುಲ್ಕದ ಮಾಹಿತಿ;11 ಇ-ನಕ್ಷೆ, ಭೂ ಪರಿವರ್ತನೆಗಾಗಿ ಅರ್ಜಿ, ತತ್ಕಾಲ್ ಪೋಡಿ ಸೇವೆಗಳಿಗೆ ಎಷ್ಟು ಶುಲ್ಕಗಳನ್ನು ಪಾವತಿ ಮಾಡಬೇಕು ಎಂಬ ಮಾಹಿತಿ ಚಿತ್ರದಲ್ಲಿದೆ. ಉಳಿದಂತೆ ಹದ್ದುಬಸ್ತು ಸೇವೆಗೆ 2 ಎಕರೆ ತನಕ ರೂ. 500, 2 ಎಕರೆಗಿಂತ ಹೆಚ್ಚು ಪ್ರತಿ ಎಕರೆಗೆ ಹೆಚ್ಚುವರಿ ಶುಲ್ಕ ರೂ. 300 ಪಾವತಿಸಬೇಕು. ನೋಟಿಸ್ ಶುಲ್ಕ ಗ್ರಾಮೀಣ ಪ್ರದೇಶದ ಪ್ರತಿ ಬಾಜುದಾರರಿಗೆ ರೂ. 25 ಮತ್ತು ಗ್ರಾಮ ಪಂಚಾಯಿತಿಗಳ ಸೇವಾ ಶುಲ್ಕ ರೂ. 25 ಪಾವತಿ ಮಾಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+