ಬಡವರು, ಮಧ್ಯಮ ವರ್ಗದವರ ಕೈಯಲ್ಲಿರುವ ಹಣದಿಂದ ಆರ್ಥಿಕತೆಗೆ ಲಾಭ: ಸಿಎಂ ಸಿದ್ದರಾಮಯ್ಯ ಹೇಳಿಕೆ ಹಿಂದಿನ ತರ್ಕವೇನು?
ಬೆಂಗಳೂರು, ಜೂನ್ 12: ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ತರ್ಕವೊಂದನ್ನು ಮುಂದಿಟ್ಟಿದ್ದಾರೆ. ಶ್ರೀಮಂತರ ಬದಲಿಗೆ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೆಚ್ಚಿನ ಹಣ ಸಿಗಬೇಕು ಅದು ಆರ್ಥಿಕತೆಗೆ ಉತ್ತೇಜನ ನೀಡುತ್ತದೆ ಎಂದು ಹೇಳಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಭರವಸೆಗಳ ಮೂಲಕ ಬಡವರು ಮತ್ತು ಮಧ್ಯಮ ವರ್ಗದವರ ಜೇಬಿಗೆ ಹಣ ಹಾಕುತ್ತೇವೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಿಜೆಪಿಗೆ ಶ್ರೀಮಂತರ ಬಗ್ಗೆ ಮಾತ್ರ ಕಾಳಜಿ ಇದೆ ಎಂದು ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಡವರಿಗೆ ಸಹಾಯ ಮಾಡುವುದನ್ನು ಬಿಜೆಪಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಬಡವರ ಕಷ್ಟವನ್ನು ನಿವಾರಿಸುವುದು ನಮ್ಮ ಗುರಿಯಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲಿ ಮೊದಲ ಭರವಸೆ ಜಾರಿಯಾಗಿದೆ. ರಾಜ್ಯಾದ್ಯಂತ ಮಹಿಳೆಯರು ಖಾತರಿಗಳ ಪ್ರಯೋಜನಗಳನ್ನು ಪಡೆಯಲು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಕಳೆದ ಎರಡು ವಾರಗಳಲ್ಲಿ ಸುಳ್ಳು ಸುದ್ದಿಗಳನ್ನು ವಿರೋಧ ಪಕ್ಷಗಳು ಹಾಗೂ ಮಾಧ್ಯಮದವರು ಹರಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಾವು ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದೇವೆ ಮತ್ತು ನಾವು ಅದನ್ನು ಮಾಡಿದ್ದೇವೆ. ಶಕ್ತಿ ಯೋಜನೆಯು ಮಹಿಳೆಯರ ಸಬಲೀಕರಣದ ಗುರಿಯನ್ನು ಹೊಂದಿದೆ. 50ರಷ್ಟು ಜನಸಂಖ್ಯೆ ಹೊಂದಿರುವ ಮಹಿಳೆಯರಿಲ್ಲದೆ ದೇಶ ಪ್ರಗತಿ ಹೊಂದಲು ಸಾಧ್ಯವಿಲ್ಲ.

ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರು ಸಮಾನ ಪಾಲುದಾರರು. ಬಿಜೆಪಿ ಸರ್ಕಾರ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಶೇ.30ರಿಂದ ಶೇ.24ಕ್ಕೆ ಇಳಿಸಿದೆ. ರಾಜ್ಯದ 41. 86 ಲಕ್ಷಕ್ಕೂ ಹೆಚ್ಚು ಮಹಿಳೆಯರು ತಮ್ಮ ಧರ್ಮ ಮತ್ತು ಜಾತಿಯನ್ನು ಲೆಕ್ಕಿಸದೆ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಡವರ ಹಣದಿಂದ ಆರ್ಥಿಕತೆಗೆ ಲಾಭ: ಸಿದ್ದು ತರ್ಕವೇನು?
ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿರುವ ಸಿದ್ದರಾಮಯ್ಯ, ಶ್ರೀಮಂತರ ಬದಲಿಗೆ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೆಚ್ಚಿನ ಹಣ ಸಿಗಬೇಕು ಅದು ಆರ್ಥಿಕತೆಗೆ ಉತ್ತೇಜನ ನೀಡುತ್ತದೆ ಎಂದು ಹೇಳಿದ್ದಾರೆ.
ಬಡವರು ಹಾಗೂ ಮಾಧ್ಯಮ ವರ್ಗದವರಲ್ಲಿ ದುಡ್ಡಿದ್ದರೆ ಮಾತ್ರ ದೇಶದ ಆರ್ಥಿಕತೆ ಸದೃಢಗೊಳ್ಳುತ್ತದೆ ಎಂಬ ಮಾತುಗಳನ್ನು ಅವರು ಹೇಳಿದ್ದಾರೆ.
ಬಡವರು, ಮಾಧ್ಯಮ ವರ್ಗದವರು ತಮ್ಮ ದಿನನಿತ್ಯದ ವಸ್ತುಗಳಿಗೆ ಹಣವನ್ನು ಖರ್ಚು ಮಾಡುತ್ತಾರೆ. ಅದು ಖಾಲಿ ಆದ ನಂತರ ಮತ್ತೆ ಹಣ ಸಂಪಾದಿಸಲು ಕೆಲಸ ಮಾಡುತ್ತಾರೆ. ಆದರೆ, ಶ್ರೀಮಂತ ಬಳಿ ಇರುವ ಹಣವು ಆರ್ಥಿಕತೆಯ ಬೆಳವಣಿಗೆಯಲ್ಲಿ ಸಕ್ರಿಯವಾಗಿರುವುದಿಲ್ಲ. ಅದೊಂದು ಕಡೆ ಕ್ರೋಡಿಕರಣಗೊಳ್ಳುತ್ತಲೇ ಇರುತ್ತದೆ. ಅದರಿಂದ ಯಾರಿಗೂ ಲಾಭವಾಗುವುದಿಲ್ಲ ಎಂಬುದು ಸಿದ್ದರಾಮಯ್ಯ ಮಾತಿನ ಹಿಂದಿನ ತರ್ಕವೆಂದು ಆರ್ಥಿಕ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.












Click it and Unblock the Notifications