ರಾಜ್ಯದಲ್ಲಿ ಮುಂಗಾರು ಬಿರುಸು:11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಒಂದು ವಾರದ ಬಿಡುವಿನ ನಂತರ ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿದ್ದು, ಅನೇಕ ಕಡೆ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಇದರಿಂದ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಗಾರು ತೀವ್ರಗೊಂಡಂತೆ ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರದ ಭಾಗಗಳಲ್ಲಿ ವ್ಯಾಪಕ, ಸಾಧಾರಣದಿಂದ ಭಾರೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿ ಮಾಹಿತಿ ಸಂಚಿಕೆಯಲ್ಲಿ ತಿಳಿಸಿದ್ದಾರೆ.

 ದಕ್ಷಿಣ ಕನ್ನಡದಲ್ಲಿ ಮಳೆ

ದಕ್ಷಿಣ ಕನ್ನಡದಲ್ಲಿ ಮಳೆ

ದಕ್ಷಿಣ ಕನ್ನಡದ ವಿವಿಧ ಪ್ರದೇಶಗಳಲ್ಲಿ ಮಳೆ ಮುಂದುವರೆದಿದೆ. ಮಳೆಯಿಂದ ಮಂಗಳೂರಿನ ಕದ್ರಿ ಶಿವಭಾಗ್‌ನಲ್ಲಿ ಒಂದು ದೊಡ್ಡ ಮರವೊಂದು ಬೇರು ಸಮೇತ ನೆಲಕ್ಕುರುಳಿದೆ. ಅಗ್ನಿಶಾಮಕ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮರವನ್ನು ತೆರವುಗೊಳಿಸಿದ್ದಾರೆ.

ಮಳೆಯಿಂದ ಉಲ್ಲಾಳ, ಸೋಮೇಶ್ವರ ಮತ್ತು ಜಿಲ್ಲೆಯ ಇತರ ಪ್ರದೇಶಗಳಲ್ಲಿ ಸಮುದ್ರದಲ್ಲಿ ಪ್ರತಿಕೂಲ ಹವಾಮಾನವಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

 ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ

ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ

ಹೊಸಪೇಟೆ ಪಟ್ಟಣ, ಹಂಪಿ ಮತ್ತು ವಿಜಯನಗರ ಜಿಲ್ಲೆಯ ಕೆಲವು ಭಾಗಗಳಲ್ಲಿಯೂ ಸಹ ಭಾರಿ ಮಳೆಯಾಗಿದೆ. ಜುಲೈ 16 ರವರೆಗೆ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುವ ಸಾಧ್ಯತೆಯಿದೆ. ಮಳೆಗಾಲ ವೇಗ ಪಡೆದುಕೊಳ್ಳುವುದರೊಂದಿಗೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ಜುಲೈ 16ರವರೆಗೂ ವ್ಯಾಪಕ ಮಳೆ

ಜುಲೈ 16ರವರೆಗೂ ವ್ಯಾಪಕ ಮಳೆ

ಜುಲೈ 16 ರವರೆಗೆ 11 ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಉತ್ತರ ಒಳನಾಡಿನ ಹೆಚ್ಚಿನ ಭಾಗಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಮತ್ತು ಜುಲೈ 16 ರವರೆಗೆ ಕೆಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Recommended Video

    ಮಗಳ ಫೋಟೋ ಹಂಚಿಕೊಂಡ ಅನುಷ್ಕಾ ಶರ್ಮಾ! | Oneindia Kannada
     ಬೆಂಗಳೂರು ಹವಾಮಾನ ವರದಿ

    ಬೆಂಗಳೂರು ಹವಾಮಾನ ವರದಿ

    ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಇಲಾಖೆ ತಿಳಿಸಿದೆ. ಎಚ್‌ಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಸೋಮವಾರ ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಮತ್ತು ಭಟ್ಕಳದಲ್ಲಿ 12 ಸೆಂ.ಮೀ., ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 12 ಸೆಂ.ಮೀ. ಹಾಗೂ ಕೋಟಾದಲ್ಲಿ 10 ಸೆಂ.ಮೀ. ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+