ಜುಲೈ 26ರವರೆಗೂ ಕರಾವಳಿ, ಉತ್ತರ ಒಳನಾಡಿನಲ್ಲಿ ಸುರಿಯಲಿದೆ ಭಾರಿ ಮಳೆ
ಬೆಂಗಳೂರು, ಜುಲೈ 22: ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 22ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಿನವಿಡೀ ಮೋಡಕವಿದ ಕಾರಣ ಚಳಿ ಹೆಚ್ಚಿತ್ತು, ಬೀದರ್ ಜಿಲ್ಲೆಯ ಹುಮನಾಬಾದ್‌ತಾಲೂಕಿನಕುಮಾರಚಿಂಚೋಳಿಯಲ್ಲಿ ಮಳೆ ಆರ್ಭಟಕ್ಕೆ ಗೋಡೆ ಕುಸಿದು ಮಹಿಳೆಯೊಬ್ಬರುಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನು ಬೆಳಗಾವಿ ಜಿಲ್ಲೆಯಲ್ಲೂ ಕಳೆದ ಮಧ್ಯರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಜಿಲ್ಲೆಯಲ್ಲಿನ ನದಿಗಳೂ ತುಂಬಿ ಹರಿಯುತ್ತಿವೆ.
ಬೆಂಗಳೂರು,ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವೆಡೆ ಶೀತಗಾಳಿ ಮುಂದುವರೆದಿದೆ.

ಬೆಂಗಳೂರಿನಲ್ಲಿ ಇಂದು ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಅಲ್ಲಲ್ಲಿ ಮಳೆಯಾಗಿದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಲ್ಲೆಲ್ಲಿ ಅತಿ ಹೆಚ್ಚು ಮಳೆ
ತೀರ್ಥಹಳ್ಳಿ, ಅಗ್ರಹಾರ ಕೋಣಂದೂರು, ಆಗುಂಬೆ, ಕದ್ರ, ತಾಳಗುಪ್ಪದಲ್ಲಿ ಮಳೆಯಾಗಿದೆ. ರಾಜ್ಯದೆಲ್ಲೆಡೆ ಬುಧವಾರವೂ ವರ್ಷಧಾರೆ ಮುಂದುವರೆದಿದೆ. ಕೆಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಿದ್ದರೆ ಹಲವೆಡೆ ಜಿಟಿ ಜಿಟಿ ಮಳೆಯಾಗಿದೆ.

ಯಾವ್ಯಾವ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ?
ಕೊಲ್ಲೂರು, ಸಿದ್ದಾಪುರ, ಧರ್ಮಸ್ಥಳ, ಶಿರಾಲಿ, ಕಳಸ, ಗೋಕರ್ಣ, ಸುಳ್ಯ, ಮೂಡುಬಿದಿರೆ, ಮಾಣಿ, ಹುಂಚದಕಟ್ಟೆ, ಭಟ್ಕಳ, ಮಂಗಳೂರು, ಕಾರ್ಕಳ, ರಾಮಗಿರಿ, ಹುಂಚದಕಟ್ಟೆ, ಮಂಕಿ, ಸಾಗರ, ಸೊರಬ, ಕೊಟ್ಟಿಗೆಹಾರ, ಅಜ್ಜಂಪುರ, ಸೇಡಂ, ಬೀದರ್, ಕಲಬುರಗಿ, ಮುಲ್ಕಿ, ಬಾಳೆಹೊನ್ನೂರು, ನಿಪ್ಪಾಣಿ, ಶಿವಮೊಗ್ಗ, ಪಣಂಬೂರು, ಕೋಟಾ, ನಿಟ್ಟೂರು, ಹಿರೇಕೆರೂರು, ಹೆಸರಘಟ್ಟ, ಚನ್ನಗಿರಿ, ಶಿಕಾರಿಪುರ, ಮೂರ್ನಾಡು, ಉಚ್ಚಂಗಿದುರ್ಗದಲ್ಲಿ ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯಾಗಲಿದೆ?
ಕರಾವಳಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
-
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications