ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 26ರವರೆಗೂ ಕರಾವಳಿ, ಉತ್ತರ ಒಳನಾಡಿನಲ್ಲಿ ಸುರಿಯಲಿದೆ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಜುಲೈ 22: ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 22ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಿನವಿಡೀ ಮೋಡಕವಿದ ಕಾರಣ ಚಳಿ ಹೆಚ್ಚಿತ್ತು, ಬೀದರ್ ಜಿಲ್ಲೆಯ ಹುಮನಾಬಾದ್‌ತಾಲೂಕಿನಕುಮಾರಚಿಂಚೋಳಿಯಲ್ಲಿ ಮಳೆ ಆರ್ಭಟಕ್ಕೆ ಗೋಡೆ ಕುಸಿದು ಮಹಿಳೆಯೊಬ್ಬರುಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂಬೈ, ದೆಹಲಿಯಲ್ಲಿ ಮುಂಗಾರು ಚುರುಕು ಪ್ರವಾಹದಂಥಾ ಮಳೆಮುಂಬೈ, ದೆಹಲಿಯಲ್ಲಿ ಮುಂಗಾರು ಚುರುಕು ಪ್ರವಾಹದಂಥಾ ಮಳೆ

ಇನ್ನು ಬೆಳಗಾವಿ ಜಿಲ್ಲೆಯಲ್ಲೂ ಕಳೆದ ಮಧ್ಯರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಜಿಲ್ಲೆಯಲ್ಲಿನ ನದಿಗಳೂ ತುಂಬಿ ಹರಿಯುತ್ತಿವೆ.

ಬೆಂಗಳೂರು,ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವೆಡೆ ಶೀತಗಾಳಿ ಮುಂದುವರೆದಿದೆ.

 ಬೆಂಗಳೂರಿನಲ್ಲಿ ಇಂದು ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಇಂದು ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಅಲ್ಲಲ್ಲಿ ಮಳೆಯಾಗಿದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ಎಲ್ಲೆಲ್ಲಿ ಅತಿ ಹೆಚ್ಚು ಮಳೆ

ಎಲ್ಲೆಲ್ಲಿ ಅತಿ ಹೆಚ್ಚು ಮಳೆ

ತೀರ್ಥಹಳ್ಳಿ, ಅಗ್ರಹಾರ ಕೋಣಂದೂರು, ಆಗುಂಬೆ, ಕದ್ರ, ತಾಳಗುಪ್ಪದಲ್ಲಿ ಮಳೆಯಾಗಿದೆ. ರಾಜ್ಯದೆಲ್ಲೆಡೆ ಬುಧವಾರವೂ ವರ್ಷಧಾರೆ ಮುಂದುವರೆದಿದೆ. ಕೆಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಿದ್ದರೆ ಹಲವೆಡೆ ಜಿಟಿ ಜಿಟಿ ಮಳೆಯಾಗಿದೆ.

 ಯಾವ್ಯಾವ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ?

ಯಾವ್ಯಾವ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ?

ಕೊಲ್ಲೂರು, ಸಿದ್ದಾಪುರ, ಧರ್ಮಸ್ಥಳ, ಶಿರಾಲಿ, ಕಳಸ, ಗೋಕರ್ಣ, ಸುಳ್ಯ, ಮೂಡುಬಿದಿರೆ, ಮಾಣಿ, ಹುಂಚದಕಟ್ಟೆ, ಭಟ್ಕಳ, ಮಂಗಳೂರು, ಕಾರ್ಕಳ, ರಾಮಗಿರಿ, ಹುಂಚದಕಟ್ಟೆ, ಮಂಕಿ, ಸಾಗರ, ಸೊರಬ, ಕೊಟ್ಟಿಗೆಹಾರ, ಅಜ್ಜಂಪುರ, ಸೇಡಂ, ಬೀದರ್, ಕಲಬುರಗಿ, ಮುಲ್ಕಿ, ಬಾಳೆಹೊನ್ನೂರು, ನಿಪ್ಪಾಣಿ, ಶಿವಮೊಗ್ಗ, ಪಣಂಬೂರು, ಕೋಟಾ, ನಿಟ್ಟೂರು, ಹಿರೇಕೆರೂರು, ಹೆಸರಘಟ್ಟ, ಚನ್ನಗಿರಿ, ಶಿಕಾರಿಪುರ, ಮೂರ್ನಾಡು, ಉಚ್ಚಂಗಿದುರ್ಗದಲ್ಲಿ ಮಳೆಯಾಗಿದೆ.

 ಎಲ್ಲೆಲ್ಲಿ ಮಳೆಯಾಗಲಿದೆ?

ಎಲ್ಲೆಲ್ಲಿ ಮಳೆಯಾಗಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

English summary
Southwest Monsoon Was Normal Over Karnataka, Orange Alert Issued For Coastal Districts On July 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X