Monsoon 2024: ಮಳೆ ಬಗ್ಗೆ ಜನರ ಅಂಗೈಗೆ ಬರಲಿದೆ ಮಾಹಿತಿ, ಮುನ್ಸೂಚನೆ
ಬೆಂಗಳೂರು, ಮೇ 06: ಕರ್ನಾಟಕದಲ್ಲಿ ಬರದ ಛಾಯೆ ಆವರಿಸಿದೆ. 2023ರಲ್ಲಿ ನೈಋತ್ಯ ಮುಂಗಾರು ಕೈ ಕೊಟ್ಟ ಪರಿಣಾಮ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಈ ವರ್ಷದ ಮುಂಗಾರು ವಾಡಿಕೆಯಷ್ಟು ಮಳೆ ಸುರಿಸುವ ಮುನ್ಸೂಚನೆ ಸಿಕ್ಕಿದೆ. ಮಳೆಗಾಲ ಆರಂಭವಾದರೆ ಸಾಕು ಎಂದು ಜನರು ಕಾದು ಕುಳಿತಿದ್ದಾರೆ.
ಕರ್ನಾಟಕದ ಕಂದಾಯ ಇಲಾಖೆ ಭಾರತೀಯ ಹವಾಮಾನ ಇಲಾಖೆ 2024ರ ಮುಂಗಾರು ಅವಧಿ (ಜೂನ್-ಸೆಪ್ಟೆಂಬರ್) ಕುರಿತು ನೀಡಿರುವ ಮುನ್ಸೂಚನೆ ಆಧರಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ.

ಈ ಮುಂಗಾರು ಅವಧಿಯಲ್ಲಿ ವಾಡಿಕೆಯಷ್ಟು ಮಳೆಯಾಗುವ ನಿರೀಕ್ಷೆ ಇದೆ. ಮಳೆಯ ಮುನ್ಸೂಚನೆ, ಮಾಹಿತಿ ಜನರಿಗೆ ಮೊಬೈಲ್ ಮೂಲಕ ಅಂಗೈನಲ್ಲಿ ತಲುಪಿದರೆ ಮಳೆಯಿಂದ ಆಗುವ ಹಾನಿ ಕಡಿಮೆ ಮಾಬಹುದು ಎಂದು ಅಂದಾಜಿಸಲಾಗಿದೆ. ಅದಕ್ಕಾಗಿ ಜನರಿಗೆ ಮಾಹಿತಿ ನೀಡಲು ಹಲವು ನಿರ್ದೇಶನಗಳನ್ನು ನೀಡಲಾಗಿದೆ.
ಜನರಿಗೆ ಅಂಗೈನಲ್ಲಿಯೇ ಮಾಹಿತಿ: ಮಳೆ, ಭೂ ಕುಸಿತ, ಪ್ರವಾಹ ಮುಂತಾದ ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎಲ್ಲಾ ಇಲಾಖೆಗಳು, ಜಿಲ್ಲಾ ಮಾಹಿತಿ ಅಧಿಕಾರಿ ಜಲಸಂಪನ್ಮೂಲ ಇಲಾಖೆ IMD, CWC, INCOIS,NDEM & KSNDMC ಮುಂತಾದ ನೋಡಲ್ ಏಜೆನ್ಸಿಗಳು ಹವಾಮಾನ, ನೀರಿನ ಹರಿವು, ಸಮುದ್ರದ ಸ್ಥಿತಿ ಕುರಿತು ನೀಡುವ ಮುನ್ಸೂಚನೆ ಮತ್ತು ಮುನ್ನೆಚ್ಚರಿಕೆ ಹಾಗೂ ಸಲಹೆ ಸೂಚನೆಗಳನ್ನು ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಹಾಗೂ ತುರ್ತು ಸಂದರ್ಭಗಳಲ್ಲಿ ಗ್ರಾಮ ಮಟ್ಟದಲ್ಲಿ ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ತಲುಪುವಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು NDMA ಅಭಿವೃದ್ಧಿ ಪಡಿಸಿರುವ Common Alert Protocol ಮುಖಾಂತರ ಸಾರ್ವಜನಿಕರ ಮೊಬೈಲ್‌ಗಳಿಗೆ ರವಾನಿಸಲಾಗುತ್ತಿದೆ. ಈ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು ಎಂದು ಕಂದಾಯ ಇಲಾಖೆ ಸುತ್ತೋಲೆಯಲ್ಲಿ ಹೇಳಿದೆ.
ಅವಶ್ಯವಿದ್ದಲ್ಲಿ ಜನರು KSNDMCಯಲ್ಲಿ ಚಾಲ್ತಿಯಿರುವ 'ವರುಣ ಮಿತ್ರ' ಸಹಾಯ ವಾಣಿ 9243345433ಕ್ಕೆ ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆಗಳನ್ನು KSNDMC ಅಭಿವೃದ್ಧಿಪಡಿಸಿರುವ Sidilu Appನಲ್ಲಿ ಪಡೆಯಬಹುದು ಅಥವಾ NDMA ಅಭಿವೃದ್ಧಿಪಡಿಸಿರುವ Damini App ಡೌನ್‌ಲೋಡ್ ಮಾಡಿಕೊಳ್ಳಬಹುದು.
ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆ ಕುರಿತು 30 ನಿಮಿಷಗಳ ಮೊದಲೇ ಮುನ್ಸೂಚನೆ ಹಾಗೂ ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಸಲಹೆ/ ಸೂಚನೆಗಳನ್ನು ನೀಡುತ್ತದೆ. ಈ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ಹವಾಮಾನ ವಿಷಯದಲ್ಲಿ ಮಾಹಿತಿ ಮತ್ತು alerts ಪಡೆಯಲು NDMA ಅಭಿವೃದ್ಧಿಪಡಿಸಿರುವ Sachet Appನಲ್ಲಿ ಸಹ ಪಡೆಯಬಹುದಾಗಿದೆ ಎಂದು ತಿಳಿಸಿದೆ.
ಉಳಿದಂತೆ ಕೃಷ್ಣ, ಭೀಮ ಮತ್ತು ಕಾವೇರಿ ಜಲಾನಯನ ಪ್ರದೇಶಗಳಲ್ಲಿರುವ ಜಲಾಶಯಗಳ ನೀರಿನ ಮಟ್ಟ ಸಂಗ್ರಹಣಾ, ಒಳಹರಿವು ಮತ್ತು ಹೊರ ಹರಿವು ಮಾಹಿತಿ ಸಂಗ್ರಹಿಸಲು ಅಂತರ್ ರಾಜ್ಯದ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದು ತುರ್ತು ಸಂದರ್ಭಗಳಲ್ಲಿ ನದಿ ಪಾತ್ರದಲ್ಲಿರುವ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲು ಕ್ರಮ ವಹಿಸಬೇಕು.
ಈ ಸಂಬಂಧ ಮಾಹಿತಿ ವಿನಿಮಯಕ್ಕಾಗಿ ವಾಟ್ಸ್‌ಆಪ್ ಗ್ರೂಪ್‌ಗಳನ್ನು ರಚಿಸುವುದು. ವಿಪತ್ತುಗಳಿಂದ ರಕ್ಷಣೆ ಪಡೆಯಲು ಜಿಲ್ಲೆಗಳಲ್ಲಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖಾ ಪಡೆ, ನಾಗರೀಕ ರಕ್ಷಣಾ ದಳ, ಗೃಹ ರಕ್ಷಕ ದಳ, ಆಪದ್ ಮಿತ್ರ ಅಡಿಯಲ್ಲಿ ತರಬೇತಿ ಪಡೆದ ಸಮುದಾಯ ಮಟ್ಟದ ಸ್ವಯಂ ಸೇವಕರನ್ನು ಜಾಗೃತಿಗೊಳಸಿ ಸನ್ನದ್ಧ ಸ್ಥಿತಿಯಲ್ಲಿಡುವುದು. ಜಿಲ್ಲೆಯಲ್ಲಿ ಲಭ್ಯವಿರುವ ರಕ್ಷಣಾ ಸಲಕರಣೆ ಮಾಹಿತಿ ಸಂಗ್ರಹ ಮಾಡುವುದು, ಎಲ್ಲಾ ಸಲಕರಣೆ ಸುಸ್ಥಿತಿಯಲ್ಲಿರುವಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಅಲ್ಲದೇ ಜಿಲ್ಲೆಯಲ್ಲಿ ವಿಪತ್ತು ಪರಿಸ್ಥಿತಿಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಈಜುಗಾರರು, ಹಾವು ಹಿಡಿಯುವವರು ಮತ್ತು ನಾಗರಿಕ ಸ್ವಯಂ ಸೇವಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆಯನ್ನು ಪಡೆಯುವುದು. ಅವಶ್ಯವಿದ್ದಾಗ ಅವರ ಸೇವೆಯನ್ನು ಪಡೆಯುವುದು. ಒಂದು ವೇಳೆ ಅವಶ್ಯವಿದ್ದಲ್ಲಿ SDRF/NDRF ತಂಡಗಳನ್ನು ಪೂರ್ವಭಾವಿಯಾಗಿ ವಿಪತ್ತುಗಳಿಗೆ ತುತ್ತಾಗುವಂತಹ ಪ್ರದೇಶಗಳಿಗೆ ನಿಯೋಜಿಸಬೇಕು ಎಂದು ಸೂಚಿಸಲಾಗಿದೆ.
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications