Monsoon Effect on Karnataka: ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆ ಮುನ್ಸೂಚನೆ

Monsoon Effect on Karnataka: ಜೂನ್‌ 1ರಿಂದ ಮುಂಗಾರು ದೇಶದ ಹಲವೆಡೆ ಆರಂಭವಾಗಿದ್ದು, ಇಂದಿನಿಂದ ಅಂದರೆ ಜೂನ್‌ 2ರಿಂದ ಕರ್ನಾಟಕದಲ್ಲಿ ಆರಂಭವಾಗಿದೆ. ಹಾಗೆಯೇ ಇದೀಗ ರಾಜ್ಯದ ಹಲವು ಭಾಗಗಳಲ್ಲಿ ಅಬ್ಬರದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವೆಲ್ಲ ಕಡೆಗಳಲ್ಲಿ ಉತ್ತಮ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೂ ಭಾರೀ ಮಳೆಯಾಗುತ್ತಿದೆ. ಶನಿವಾರ (ಜೂನ್‌ 1) ಸಂಜೆ ಹಿಡಿದ ಮಳೆ ಭಾನುವಾರ ಬೆಳಗ್ಗೆವರೆಗೂ ಮಳೆರಾಯ ಆರ್ಭಟಿಸಿದ್ದು, ಇನ್ನು ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ, ಸುಮಾರು 5:15ರ ವೇಳೆಗೆ ನಗರದ ಹಲವೆಡೆ ಮತ್ತೆ ಮಳೆರಾಯ ತನ್ನ ಆರ್ಭಟವನ್ನು ಶುರು ಮಾಡಿದ್ದಾನೆ.

Monsoon Effect on Karnataka Heavy rain forecast only in these districts

ಹಾಗೆಯೇ ಮುಂದಿನ ಕೆಲ ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ನೈರುತ್ಯ ಮುಂಗಾರು ಕೇರಳಕ್ಕೆ ಮೂರು ದಿನದ ಹಿಂದೇಯೆ ಪ್ರವೇಶಿಸಿದ್ದು, ಇಂದು ಕೂಡ ಮಳೆ ಮುಂದುವರೆದಿದೆ. ಇನ್ನು ಕರ್ನಾಟಕಕ್ಕೆ ಇಂದು (ಜೂನ್‌ 02) ಮುಂಗಾರು ಆಗಮನವಾಗಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಕೇರಳ ಹಾಗೂ ಕರ್ನಾಟಕದಲ್ಲಿ ವ್ಯಾಪಕ ಮಳೆ ಆಗುತ್ತಿದೆ.

ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆ ಬೀಳಲಿದೆ. ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಆಗೊಮ್ಮೆ ಈಗೊಮ್ಮೆ 40-50 ಕಿಲೋ ಮೀಟರ್‌ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಲಕ್ಷಣಗಳಿವೆ ಎಂದು ಹೇಳಿದರು.

ನಿನ್ನೆ (ಜೂನ್‌ 02) ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿತ್ತು. ಉತ್ತರ ಕರ್ನಾಟಕ ಭಾಗದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+