ಕರ್ನಾಟಕ ಪ್ರವೇಶಿಸಿದ ಮುಂಗಾರು; ಜೂನ್ 7ರಿಂದ ಮಳೆ

ಬೆಂಗಳೂರು, ಜೂನ್ 05 : ನೈಋತ್ಯ ಮುಂಗಾರು ಅವಧಿಗೂ ಮೊದಲೇ ಕರ್ನಾಟಕವನ್ನು ಪ್ರವೇಶಿಸಿದೆ. ಜೂನ್ 7ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Recommended Video

      ಶಾಲೆ ಆರಂಭವಾದ ಒಂದೇ ವಾರದಲ್ಲಿ 70 ಮಕ್ಕಳಿಗೆ ಕೊರೊನಾ ಸೋಂಕು | Oneindia Kannada

      ವಾಡಿಕೆಯಂತೆ ಜೂನ್ 1ರಂದು ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶ ಮಾಡಿತ್ತು. ಕೇರಳ ಪ್ರವೇಶಿಸಿದ ಒಂದೆರಡು ದಿನಗಳಲ್ಲಿ ಮುಂಗಾರು ಕರ್ನಾಟಕದ ಕರಾವಳಿಗೂ ಆಗಮಿಸುತ್ತದೆ.

      ಕೇರಳ ಪ್ರವೇಶಿಸಿದ ಮುಂಗಾರು ದುರ್ಬಲವಾಗಿತ್ತು. ಆದ್ದರಿಂದ, ಕರ್ನಾಟಕಕ್ಕೆ ಆಗಮಿಸುವುದು ವಿಳಂಬವಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಗುರುವಾರ ಮಧ್ಯಾಹ್ನ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಮುಂಗಾರು ಆಗಮನವಾಗಿದೆ.

       Monsoon Enters Karnataka Heavy Rain From June 7

      ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕರ್ನಾಟಕ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರವೂ ಮಳೆಯಾಗಿದೆ. ಜೂನ್ 7ರಿಂದ 9ರ ತನಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

      ಬೆಂಗಳೂರು ನಗರದಲ್ಲಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಗುರುವಾರ ಮಧ್ಯಾಹ್ನ ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ. ಉಷ್ಣಾಂಶ ಇಳಿಕೆಯಾಗಿದ್ದು, ಮುಂದಿನ ವಾರ ಮಳೆಯಾಗುವ ನಿರೀಕ್ಷೆ ಇದೆ.

      'ನಿಸರ್ಗ' ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗಿದೆ. ಮುಂಗಾರು ಪೂರ್ವ ಮಳೆಯೂ ಕೆಲವು ಜಿಲ್ಲೆಗಳಲ್ಲಿ ಉತ್ತಮವಾಗಿ ಸುರಿದ್ದಿದ್ದು, ಕೃಷಿ ಚಟುವಟಿಕೆಗಳು ಆರಂಭವಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+