ನೈಋತ್ಯ ಮುಂಗಾರು; ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಜೂನ್ 06; ಕರ್ನಾಟಕಕ್ಕೆ ನೈಋತ್ಯ ಮುಂಗಾರು ಪ್ರವೇಶ ಮಾಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Recommended Video

ಮುಂಗಾರು ಮಾರುತಗಳು ಒಂದು ದಿನ ಮುನ್ನವೇ ರಾಜ್ಯಕ್ಕೆ ಪ್ರವೇಶ ಮಾಡಿದೆ. ಶನಿವಾರ ಉತ್ತರ ಒಳನಾಡಿಗೆ ಸಹ ಮುಂಗಾರು ಪವೇಶವಾಗಿದೆ. ಜೂನ್ 6ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡಪಿಯಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಶನಿವಾರ ರಾತ್ರಿಯೂ ಹಲವು ಬಡಾವಣೆಗಳಲ್ಲಿ ಮಳೆಯಾಗಿದೆ.

ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಶನಿವಾರ ಕುಂದಾಪುರದಲ್ಲಿ 9 ಸೆಂ. ಮೀ., ಪಣಂಬೂರು 7, ಬೀದರ್ 5, ಬೆಂಗಳೂರು ಮತ್ತು ಮಂಡ್ಯದಲ್ಲಿ 4 ಸೆಂ. ಮೀ. ಮಳೆಯಾಗಿದೆ.
ನೆಲಮಂಗಲ, ಚಿಂತಾಮಣಿ, ಮೂಡುಬಿದರೆಯಲ್ಲಿ 3 ಸೆಂ. ಮೀ. ಮಳೆಯಾಗಿದೆ. ಕಮಲಾಪುರ, ಕಡೂರು, ಚಿತ್ರದುರ್ಗ, ಚನ್ನಗಿರಿ ಮತ್ತು ಭಾಗಮಂಡಲದಲ್ಲಿ 1 ಸೆಂ. ಮೀ. ಮಳೆಯಾಗಿದೆ.
ಕರಾವಳಿ ಭಾಗದಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನೈಋತ್ಯ ಮುಂಗಾರು ಈ ವರ್ಷ ವಾಡಿಕೆಯಷ್ಟು ಮಳೆ ಸುರಿಸಲಿದೆ ಎಂದು ನಿರೀಕ್ಷಿಸಲಾಗಿದೆ.












Click it and Unblock the Notifications