ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕಕ್ಕೆ ಮುಂಗಾರು ಪ್ರವೇಶ ಯಾವಾಗ? ಮಾಹಿತಿ

|
Google Oneindia Kannada News

ಬೆಂಗಳೂರು, ಮೇ 19: ಕೇರಳಕ್ಕೆ ಜೂನ್ 6ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹಾಗೂ ಸ್ಕೈಮೆಟ್ ವರದಿ ಮಾಡಿತ್ತು. ಕರ್ನಾಟಕಕ್ಕೆ ಯಾವಾಗ ಮಳೆಯ ಆಗಮನ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

ಅಂಡಮಾನ್ ನಿಕೋಬಾರ್ ದ್ವೀಪಕ್ಕೆ ಇಂದು ಮಧ್ಯಾಹ್ನ ಮುಂಗಾರು ಪ್ರವೇಶಿಸಲಿದೆ. ಕೇರಳಕ್ಕೆ ಮುಂಗಾರು ಪ್ರವೇಶವಾಗಿ ಎರಡು ದಿನಕ್ಕೆ ಕರ್ನಾಟಕದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಕೇರಳಕ್ಕೆ ಮುಂಗಾರು ಪ್ರವೇಶ, ಹವಾಮಾನ ಇಲಾಖೆ ಏನು ಹೇಳುತ್ತೆ?ಕೇರಳಕ್ಕೆ ಮುಂಗಾರು ಪ್ರವೇಶ, ಹವಾಮಾನ ಇಲಾಖೆ ಏನು ಹೇಳುತ್ತೆ?

ಮುಂಗಾರು ಮಾರುತಗಳು ಜೂನ್ 6ಕ್ಕೆ ಕೇರಳ ಪ್ರವೇಶಿಸಲಿದ್ದು, ಜೂನ್ 8 ಅಥವಾ 9ಕ್ಕೆ ಕರ್ನಾಟಕ ಪ್ರವೇಶಿಸುವ ಸಾಧ್ಯತೆ ಇದೆ. ಮುಂಗಾರು ಮಾರುತಗಳು ತೀವ್ರತೆ ಹೆಚ್ಚಾಗಿದ್ದರೆ ಒಂದೇ ದಿನಕ್ಕೆ ರಾಜ್ಯದ ಹಲವು ಭಾಗಗಳಿಗೆ ವ್ಯಾಪಿಸುತ್ತದೆ. ಮಾರುತಗಳ ತೀವ್ರತೆ ಕಡಿಮೆಯಿದ್ದರೆ ಹೆಚ್ಚಿನ ಅವಧಿ ಕೇರಳದಲ್ಲಿಯೇ ಉಳಿಯಲಿದೆ.

monsoon likely to arrive Karnataka in June 8

ಆದರೆ, ಮುಂಗಾರು ಮಳೆಯನ್ನು ಸರಿಯಾಗಿ ಅಂದಾಜಿಸುವುದು ಕಷ್ಟಸಾಧ್ಯ. ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಪೂರ್ವ ಮುಂಗಾರು ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಕಳೆದ ಎರಡು ವಾರಗಳಲ್ಲಿ ಮೂರು ದಿನ ಸತತವಾಗಿ ಮಳೆ ಸುರಿದಿದೆ.

ಬಿಸಿಗಾಳಿಯಿಂದ ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಗರಿಷ್ಠ ಉಷ್ಣಾಂಶ 43ರಿಂದ 45 ತಲುಪಿದೆ. ಇಂದಿನಿಂದ ಮೂರು ದಿನಗಳ ಕಾಲ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.

ಜೂನ್ 4 ರಂದು ಕೇರಳಕ್ಕೆ ಮುಂಗಾರುಮಳೆ, ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆ ಜೂನ್ 4 ರಂದು ಕೇರಳಕ್ಕೆ ಮುಂಗಾರುಮಳೆ, ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆ

ಕನಿಷ್ಠ 23.8 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 34.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.9 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 34.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ನೆಲಮಂಗಲ, ಚಿಂತಾಮಣಿ, ಹೆಸರಘಟ್ಟ, ರಾಮನಗರ, , ಎಚ್‌ಡಿ ಕೋಟೆಯಲ್ಲಿ ಮಳೆಯಾಗಿದೆ.

English summary
The monsoon is likely to be delayed this year as its arrival expected on June 6 Kerala and June 8-9 Karnataka. This year, the statistical model forecast suggests that the monsoon onset over Kerala is likely to be slightly delayed the IMD said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X