ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
ಬೆಂಗಳೂರು, ಮೇ.15: ರಾಜ್ಯದ ಅನೇಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ .
ಸಾಮಾನ್ಯವಾಗಿ ಮುಂಗಾರು ಮಳೆ ಮೇ.20ರಂದು ಅಂಡಮಾನ್ ದ್ವೀಪವನ್ನು ಪ್ರವೇಶಿಸುತ್ತದೆ. ಆದರೆ ಈ ಬಾರಿ ಮೇ.17ಕ್ಕೆ ಪ್ರವೇಶಿಸಲಿದೆ. ಪರಿಣಾಮವಾಗಿ ದೇಶದೆಲ್ಲೆಡೆ ಮೂರು ದಿನ ಮೊದಲೇ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಜೂನ್ 5ರಂದು ಬರಬೇಕಿದ್ದ ಮುಂಗಾರು, ಈ ಬಾರಿ ಮೂರು ದಿನ ಮುಂಚಿತವಾಗಿ ರಾಜ್ಯ ಪ್ರವೇಶಿಸುವ ಸಾಧ್ಯತೆಯಿದೆ.

ಸದ್ಯ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುತ್ತಿದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಳೆಯಾಗುತ್ತಿದೆ.












Click it and Unblock the Notifications